ಸಿದ್ದು ಬಜೆಟ್ 2026: ಶಾಲಾ ಶಿಕ್ಷಣಕ್ಕೆ ಏನು ಎಷ್ಟು?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಕ್ರಾಂತಿಕಾರಿ ಬದಲಾವಣೆಗಳನ್ನು ತರಲಾಗಿದೆ. ಸರ್ಕಾರಿ ಶಾಲೆಗಳ ಬಲವರ್ಧನೆ, ಬೃಹತ್ ನೇಮಕಾತಿ ಮತ್ತು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯಕ್ಕೆ ಪೂರಕವಾದ ಹಲವು ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ.

ಉದ್ಯೋಗಾಕಾಂಕ್ಷಿಗಳಿಗೆ ಬಂಪರ್: 17,000 ಹುದ್ದೆಗಳ ಭರ್ತಿ

ಶಾಲಾಶಿಕ್ಷಣ: ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

ಉನ್ನತ ಶಿಕ್ಷಣ: ಸರ್ಕಾರಿ ಪದವಿ, ಇಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ 2,000 ಬೋಧಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಲಾಗುವುದು.

ಮಕ್ಕಳ ಹಿತ ದೃಷ್ಟಿಯಿಂದ ಕಠಿಣ ನಿರ್ಧಾರ: ಸೋಶಿಯಲ್ ಮೀಡಿಯಾ ನಿಷೇಧ

ಮೊಬೈಲ್ ಬಳಕೆಯಿಂದ ಮಕ್ಕಳ ಮೇಲಾಗುತ್ತಿರುವ ಅಡ್ಡಪರಿಣಾಮ ತಡೆಗಟ್ಟಲು ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲ ತಾಣದ(Social Media) ಬಳಕೆಯನ್ನುನಿಷೇಧಿಸಲು ತೀರ್ಮಾನಿಸಲಾಗಿದೆ. ಇದರೊಂದಿಗೆ ಶಾಲಾ-ಕಾಲೇಜುಗಳಲ್ಲಿ ಮಾದಕ ವಸ್ತುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜಾರಿಗೆ ಬರಲಿದೆ.

‘ಕರ್ನಾಟಕ ಪಬ್ಲಿಕ್ ಸ್ಕೂಲ್‘ಗಳ ಉನ್ನತೀಕರಣ

ʻಉತ್ತಮ ಕಲಿಕೆ ಉಜ್ವಲ ಭವಿಷ್ಯʼ ಎಂಬ ಘೋಷವಾಕ್ಯದೊಂದಿಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ADB ನೆರವಿನೊಂದಿಗೆ 500 ಶಾಲೆಗಳು, KKRDB ನಿಧಿಯಿಂದ 200 ಶಾಲೆಗಳು ಹಾಗೂ KMERC ನಿಧಿಯಿಂದ 100 ಶಾಲೆಗಳು ಒಟ್ಟಾರೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಇದಕ್ಕಾಗಿ ಒಟ್ಟಾರೆ 3,900 ಕೋಟಿ ರೂ.ಗಳನ್ನು ಮುಂದಿನ ಮೂರು ವರ್ಷಗಳಲ್ಲಿ ವೆಚ್ಚ ಮಾಡಲಾಗುವುದು.

ವಿದ್ಯಾರ್ಥಿಗಳಿಗೆ ಡಿಜಿಟಲ್ ಮತ್ತು ತಾಂತ್ರಿಕ ಸೌಲಭ್ಯ

AI ಟ್ಯೂಟರ್: IIT ಧಾರವಾಡದ ಸಹಯೋಗದೊಂದಿಗೆ 8 ರಿಂದ 12ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 12.28 ಲಕ್ಷ ವಿದ್ಯಾರ್ಥಿಗಳಿಗೆ ಅಂದಾಜು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಕಲಿಕಾ ಪ್ರಕ್ರಿಯೆಯಲ್ಲಿ AI ತಂತ್ರಜ್ಞಾನವನ್ನು ಅಳವಡಿಸಿಕೊಂಡು ವೈಯಕ್ತಿಕ ಸ್ವಯಂ-ಕಲಿಕಾ ಡಿಜಿಟಲ್ ಟ್ಯೂಟರ್ ಸೌಲಭ್ಯವನ್ನು ಒದಗಿಸಲಾಗುವುದು.

ಉಚಿತ ಪಠ್ಯ ಪುಸ್ತಕ: ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ವಿಶೇಷವಾಗಿ ದಾಖಲಾತಿ ಪ್ರಮಾಣ ಮತ್ತು ಕಲಿಕೆಯ ಫಲಿತಾಂಶಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈಗಾಗಲೇ 1 ರಿಂದ 10ನೇ ತರಗತಿಯವರೆಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಗುತ್ತಿದೆ. 2026-27ನೇ ಸಾಲಿನಿಂದ ವಿದ್ಯಾವಿಕಾಸ ಯೋಜನೆಯಡಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಚಟುವಟಿಕೆ ಪುಸ್ತಕಗಳನ್ನು, 1 ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲಾಗುವುದು.

ವಿದ್ಯಾರ್ಥಿವೇತನ: ಸರ್ಕಾರಿ ಶಾಲಾ ಕಾಲೇಜುಗಳಲ್ಲಿ 10 ಮತ್ತು 12ನೇ ತರಗತಿಗಳನ್ನು ವ್ಯಾಸಂಗ ಮಾಡಿ 2025-26ನೇ ಸಾಲಿನಿಂದ ಉನ್ನತ ಶಿಕ್ಷಣವನ್ನು ಮುಂದುವರೆಸುತ್ತಿರುವ 37,000 ವಿದ್ಯಾರ್ಥಿನಿಯರಿಗೆ ವಾರ್ಷಿಕ 30,000 ರೂ.ಗಳ ವಿದ್ಯಾರ್ಥಿ ವೇತನವನ್ನು ಅಜೀಂ ಪ್ರೇಮ್ಜಿ ಫೌಂಡೇಶನ್ ವತಿಯಿಂದ ಹಾಗೂ ಉಳಿದ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರದ ವತಿಯಿಂದ ʻದೀಪಿಕಾ ವಿದ್ಯಾರ್ಥಿ ವೇತನʼ ಯೋಜನೆಯಡಿ ನೀಡಲಾಗುತ್ತಿದೆ. ಇದನ್ನು ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಲಾಗುವುದು.

ಉನ್ನತ ಶಿಕ್ಷಣದಲ್ಲಿ ಹೊಸ ಕಾಯ್ದೆ ಮತ್ತು ಸುಧಾರಣೆ

ರೋಹಿತ್ ವೇಮುಲ ಕಾಯ್ದೆ: ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು.

ವಿದ್ಯಾರ್ಥಿ ಸಂಘಗಳ ಚುನಾವಣೆ: ವಿದ್ಯಾರ್ಥಿಗಳಲ್ಲಿ ನಾಯಕತ್ವ, ಹೊಣೆಗಾರಿಕೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸಲು ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ನಮ್ಮ ಸರ್ಕಾರವು ಉದ್ದೇಶಿಸಿದೆ.

ಮಾತೃತ್ವ ರಜೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರುಗಳಿಗೆ 90 ದಿನಗಳ ಮಾತೃತ್ವ ರಜೆಯ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೊಳಿಸಲಾಗುವುದು.

ಮೂಲ ಸೌಕರ್ಯ ಮತ್ತು ಹೊಸ ಕಾಲೇಜುಗಳು

ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಕೊಠಡಿ ನಿರ್ಮಾಣ ಮತ್ತು ಕೊಠಡಿಗಳ ದುರಸ್ತಿ ಕಾಮಗಾರಿಗಳಿಗೆ 565 ಕೋಟಿ ರೂ.ಗಳು, ಶೌಚಾಲಯ ನಿರ್ಮಾಣಕ್ಕಾಗಿ 75 ಕೋಟಿ ರೂ.ಗಳು ಹಾಗೂ ಶಾಲೆಗಳಿಗೆ ಪೀಠೋಪಕರಣಗಳನ್ನು ಖರೀದಿಸಲು 25 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.

ವಿಜಯಪುರ ಜಿಲ್ಲೆಯ ಚಡಚಣ, ಬೆಳಗಾವಿ ಗ್ರಾಮಾಂತರ ಹಾಗೂ ಮೈಸೂರು ನಗರದ ನರಸಿಂಹರಾಜ ಕ್ಷೇತ್ರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಸ್ಥಾಪಿಸಲಾಗುವುದು. ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ KKRDB Macro ಅನುದಾನದಿಂದ ಪ್ರಥಮ ದರ್ಜೆ ಕಾಲೇಜನ್ನು ಸ್ಥಾಪಿಸಲಾಗುವುದು.

ಧಾರವಾಡ ಮತ್ತು ಬೆಂಗಳೂರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗಾಗಿ ತಲಾ 10 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲ್ ಗ್ರಂಥಾಲಯ ಹಾಗೂ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲಾಗುವುದು.

More articles

Latest article

Most read