ಮಾಜಿ ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರು, ಚೇತನ ಹಾಗೂ ಧನಶ್ರೀ ಯೋಜನೆಯ ಫಲಾನುಭವಿಗಳಿಗೆ ಆದಾಯೋತ್ಪನ್ನ ಚಟುವಟಿಕೆಗಳಿಗಾಗಿ ಪ್ರಸಕ್ತ ನೀಡಲಾಗುತ್ತಿರುವ 30,000 ರೂ.ಗಳ ಪ್ರೋತ್ಸಾಹಧನವನ್ನು 45,000 ರೂ.ಗಳಿಗೆ ಹೆಚ್ಚಳ.
ಮಾದಕ ವ್ಯಸನಕ್ಕೆ ಒಳಗಾದ 18 ವರ್ಷದೊಳಗಿನ ಮಕ್ಕಳಿಗಾಗಿ ಪ್ರಾಯೋಗಿಕವಾಗಿ ಬೆಂಗಳೂರಿನ ನಿಮ್ಹಾನ್ಸ್ ಹಾಗೂ ಧಾರವಾಡದ ಡಿಮ್ಹಾನ್ಸ್ ಸಂಸ್ಥೆಗಳ ಸಹಯೋಗದೊಂದಿಗೆ ʻಮಾದಕ ವ್ಯಸನಿಗಳ ಪುನರ್ವಸತಿ ಕೇಂದ್ರʼಗಳನ್ನು ಪ್ರಾರಂಭ.
ಅಂಗನವಾಡಿ ಕೇಂದ್ರಗಳ ಸಮಗ್ರ ಸುಧಾರಣೆಗೆ ಉನ್ನತ ಮಟ್ಟದ ಸಮಿತಿ ರಚನೆ
ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುತ್ತಿರುವ 11 ಸಮುದಾಯಗಳ ವಸತಿರಹಿತ 6,257 ಕುಟುಂಬಗಳಿಗೆ
4.50 ಲಕ್ಷ ರೂ.ಗಳ ಘಟಕ ವೆಚ್ಚದಲ್ಲಿ ಒಟ್ಟು 282 ಕೋಟಿ ರೂ.ಗಳಲ್ಲಿ ಮನೆ ನಿರ್ಮಾಣ ಮಾಡಲಾಗುತ್ತಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣಕ್ಕೆ ಅನುವು ಮಾಡಿಕೊಡಲು ಒಟ್ಟು 31 ವಸತಿ ಶಾಲೆಗಳನ್ನು ಉನ್ನತೀಕರಣ.
ವಸತಿ ಶಾಲೆಗಳಿಲ್ಲದ ಹೋಬಳಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಒಟ್ಟು 40 ಹೊಸ ವಸತಿ ಶಾಲೆಗಳನ್ನು ಪ್ರಾರಂಭ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಸ್ಥ ಮಹಿಳೆಯರಿಗೆ ತಲಾ 50 ಸಂಖ್ಯಾಬಲದ 10 ವಸತಿ ನಿಲಯಗಳನ್ನು ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಬೆಳಗಾವಿ ಮತ್ತು ಕಲಬುರಗಿಯಲ್ಲಿ ಪ್ರಾರಂಭಿಸಲಾಗುವುದು.
ಸಮಾಜ ಕಲ್ಯಾಣ ಇಲಾಖೆಯಡಿ ಬೌದ್ಧ ಅಭಿವೃದ್ಧಿ ನಿಗಮವನ್ನು ಸ್ಥಾಪನೆ.
2026-27ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ 150 ಸಂಖ್ಯಾಬಲದ 50 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಹೊಸದಾಗಿ ಪ್ರಾರಂಭ.
ಪರಿಶಿಷ್ಟ ಪಂಗಡದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ಆಶ್ರಮ ಶಾಲೆಗಳಲ್ಲಿನ ವಿದ್ಯಾರ್ಥಿಗಳ ಆರೈಕೆಗಾಗಿ 119 ಮಹಿಳಾ ಕೇರ್ಟೇಕರ್ ಹುದ್ದೆಗಳನ್ನು ಮಂಜೂರು ಮಾಡಲಾಗುವುದು.
ಪರಿಶಿಷ್ಟ ಪಂಗಡದ ಸಮುದಾಯದವರ ಹಕ್ಕುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅವರ ದೂರು ಮತ್ತು ಸಮಸ್ಯೆಗಳನ್ನು ಆಲಿಸಲು ಪ್ರತ್ಯೇಕವಾಗಿ ಪರಿಶಿಷ್ಟ ಪಂಗಡಗಳ ಆಯೋಗ ಸ್ಥಾಪನೆ.

ಬೆಂಗಳೂರು, ಮೈಸೂರು, ಮಂಗಳೂರು, ಧಾರವಾಡ, ಬೆಳಗಾವಿ, ಕಲಬುರಗಿ, ದಾವಣಗೆರೆ, ಶಿವಮೊಗ್ಗ ಹಾಗೂ ಬಳ್ಳಾರಿಯಲ್ಲಿ 150 ಸಂಖ್ಯಾಬಲದ 50 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭ.
ಬೆಂಗಳೂರು ಮತ್ತು ಮೈಸೂರು ನಗರದ ಧೋಬಿಘಾಟ್ಗಳಲ್ಲಿ ಮಡಿವಾಳ ಸಮಾಜದವರಿಗೆ ವಾಷಿಂಗ್ ಮೆಷಿನ್, ಡ್ರೈಯರ್ ಮತ್ತು ಐರನಿಂಗ್ ಮೆಷಿನ್ ಇತ್ಯಾದಿ ಸಾಮಗ್ರಿಗಳನ್ನು ಒಳಗೊಂಡಂತೆ ತಲಾ 75 ಲಕ್ಷ ರೂ. ಘಟಕ ವೆಚ್ಚದಲ್ಲಿ ಆಧುನಿಕ ಲಾಂಡ್ರಿಗಳನ್ನು ಸ್ಥಾಪಿಸಲಾಗುವುದು. ಇ ಸ್ವಯಂ ಉದ್ಯೋಗಕ್ಕಾಗಿ ಆಧುನಿಕ ಲಾಂಡ್ರಿಗಳನ್ನು ಸ್ಥಾಪಿಸಲು 5 ಲಕ್ಷ ರೂ.ಗಳವರೆಗೆ ಶೇ.೪ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುವುದು.
ಹಿಂದುಳಿದ ವರ್ಗಗಳ ಕಾರ್ಯಕ್ರಮಗಳ ಅನುಷ್ಠಾನ, ಉದ್ಯೋಗ ಮತ್ತು ಶಿಕ್ಷಣ ಮೀಸಲಾತಿ, ಬ್ಯಾಕ್ಲಾಗ್ ಹುದ್ದೆಗಳ ಭರ್ತಿ ಮತ್ತು ಈ ವರ್ಗಗಳ ಅಭಿವೃದ್ಧಿ ಬಗ್ಗೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಒಂದು ಉನ್ನತ ಮಟ್ಟದ ಸಮಿತಿಯನ್ನು ರಚನೆ.
2026-27ನೇ ಸಾಲಿನಲ್ಲಿ 25 ಸಂತ ಶಿಶುನಾಳ ಶರೀಫರ ಹೆಸರಿನಲ್ಲಿ ವಸತಿ ಶಾಲೆಗಳನ್ನು ಹೊಸದಾಗಿ ಪ್ರಾರಂಭಿಸಲಾಗುವುದು. ಸಂತ ಶಿಶುನಾಳ ಶರೀಫರ ಹೆಸರಿನಲ್ಲಿ ವಸತಿ ಶಾಲೆಗಳನ್ನು ಹೊಸದಾಗಿ ಪ್ರಾರಂಭಿಸಲಾಗುವುದು.
ಬೌದ್ಧ ಧರ್ಮದ ಧಮ್ಮಾಚಾರಿಗಳಿಗೆ 6,000 ರೂ.ಗಳ ಮಾಸಿಕ ಗೌರವಧನವನ್ನು ನೀಡಲಾಗುವುದು.
ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಪ್ರೋತ್ಸಾಹ ನೀಡಲು ಅಲ್ಪಸಂಖ್ಯಾತರ ಮಹಿಳಾ ಕೋ-ಆಪರೇಟಿವ್ ಸೊಸೈಟಿಗಳನ್ನು ಸ್ಥಾಪಿಸಲಾಗುವುದು.

