2026 ಸಿದ್ದು ಬಜೆಟ್‌ ಹೈಲೈಟ್ಸ್‌ : ಬೆಂಗಳೂರಿನಲ್ಲಿ 1700 ಕೋಟಿ ರೂ. ವೆಚ್ಚದಲ್ಲಿ ವೈಟ್‌ ಟಾಪಿಂಗ್‌ ಕಾಮಗಾರಿ

3 ರಾಜ್ಯಪಾಲರ ಕಛೇರಿಯ ಆವರಣದಲ್ಲಿ ಒಳಾಂಗಣ ಕ್ರೀಡಾಂಗಣ, ಅಧಿಕಾರಿಗಳ ವಸತಿ ಗೃಹ ನಿರ್ಮಾಣ

ʻಕೆ.ಹೆಚ್‌.ಬಿ ಸೂರ್ಯ ಕ್ರೀಡಾ ಗ್ರಾಮʼ ಎಂಬ ಹೆಸರಿನಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ ಆನೇಕಲ್‌ ತಾಲ್ಲೂಕಿನಲ್ಲಿ 80,000 ಆಸನ ಸಾಮರ್ಥ್ಯವುಳ್ಳ ಕ್ರಿಕೆಟ್‌ ಕ್ರೀಡಾಂಗಣ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಕೂಟಗಳನ್ನು ನಡೆಸಲು ಅನುಕೂಲವಾಗುವಂತೆ ಅಂತಾರಾಷ್ಟ್ರೀಯ ಕ್ರೀಡಾಂಗಣವನ್ನು ನಿರ್ಮಾಣ ಮಾಡಲಾಗುವುದು.

ಕೆ.ಹೆಚ್‌.ಬಿ. ವತಿಯಿಂದ ನಮ್ಮ ಮನೆ ಯೋಜನೆಯಡಿಯಲ್ಲಿ ಮುಂದಿನ ಎರಡು ವರ್ಷಗಳಲ್ಲಿ 50 ಸಾವಿರ ನಿವೇಶನಗಳನ್ನು ರಿಯಾಯತಿ ದರದಲ್ಲಿ ವಿತರಿಸಲು ಉದ್ದೇಶಿಸಲಾಗಿದೆ.

ಅಸಂಘಟಿತ ಕಾರ್ಮಿಕರಿಗೆ ಕೌಶಲ್ಯಾಧಾರಿತ ಉದ್ಯೋಗ ದೊರಕಿಸಿಕೊಡುವ ಉದ್ದೇಶದಿಂದ ಆನ್‌ಲೈನ್ ಉದ್ಯೋಗ ವಿನಿಮಯ ಕೇಂದ್ರವನ್ನು ಸ್ಥಾಪಿಸುವ ʻಕಾಯಕ ಭಾಗ್ಯʼ ಎಂಬ ಯೋಜನೆಯನ್ನು ಐದು ಕೋಟಿ ರೂ. ವೆಚ್ಚದಲ್ಲಿ ಜಾರಿಗೆ ತರಲಾಗುವುದು.

ಹುಬ್ಬಳ್ಳಿ, ಇಂದಿರಾನಗರ, ಮೈಸೂರು ಮತ್ತು ದೊಡ್ಡಬಳ್ಳಾಪುರದಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ಹಾಗೂ ಇಂದಿರಾನಗರದಲ್ಲಿ ಮೂರು ವರ್ಷದ PG (DNB) ಕೋರ್ಸ್‌ಗಳನ್ನು ಪ್ರಾರಂಭಿಸಲಾಗುವುದು.

ಮೈಸೂರು ಮತ್ತು ಕಲಬುರಗಿಯಲ್ಲಿ ತಲಾ 16 ಕೋಟಿ ರೂ. ವೆಚ್ಚದಲ್ಲಿ ಷ್ನೈಡರ್ ಎಲೆಕ್ಟ್ರಿಕ್ (Schneider Electric)
ಯೂತ್ ಇಂಪ್ಯಾಕ್ಟ್ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಿದೆ. ಇದರಿಂದ ಪ್ರತಿ ವರ್ಷಒಟ್ಟಾರೆ2,000 ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಮತ್ತು ಉದ್ಯೋಗವಕಾಶ ಕಲ್ಪಿಸಲು ನೆರವಾಗಲಿದೆ.

ಜಿಲ್ಲೆಗಳಲ್ಲಿ ಬೇಡಿಕೆ ಆಧಾರಿತ ಕೌಶಲ್ಯ ಅಭಿವೃದ್ಧಿಯನ್ನು ಬೆಂಬಲಿಸಲು ಒಂದು ಕೋಟಿ ರೂ. ವೆಚ್ಚದಲ್ಲಿ Challenge fund ಸ್ಥಾಪನೆ.

ಮಹಾತ್ಮಾ ಗಾಂಧೀಜಿಯವರ ಹೆಸರನ್ನು ಚಿರಸ್ಥಾಯಿಗೊಳಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳನ್ನು ʻಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿʼ ಎಂದು ನಾಮಕರಣ ಮಾಡಲಾಗುವುದು.

ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗ್ರಾಮೀಣ ಭಾಗದಲ್ಲಿ ಅವಶ್ಯವಿರುವ ಸೌಲಭ್ಯಗಳನ್ನು ಒಳಗೊಂಡ ಆದಾಯೋತ್ಪನ್ನ ಘಟಕಗಳನ್ನು ಪ್ರಸಕ್ತ ವರ್ಷ 25 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಿ ನಿರ್ವಹಿಸಲಾಗುವುದು.

ವಿವಿಧ ಕ್ಷೇತ್ರಗಳ ವಿಷಯ ತಜ್ಞರ ಸಹಕಾರದೊಂದಿಗೆ ʻ5ನೇ ಆವೃತ್ತಿಯ ಕರ್ನಾಟಕ ರಾಜ್ಯ ಮಾನವ ಅಭಿವೃದ್ಧಿ
ವರದಿ–2026ʼ ಹಾಗೂ ʻರಾಜ್ಯ ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿ ದೂರದೃಷ್ಟಿ ಯೋಜನೆ-2031ʼ ಗಳನ್ನುಸಿದ್ಧಪಡಿಸಲಾಗುವುದು.

ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ 1,255 ಕೋಟಿ ರೂ.ಗಳ ಮೊತ್ತದ ವಾರ್ಡ್‌ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿ. 1,700 ಕೋಟಿ ರೂ.ಗಳ ಮೊತ್ತದಲ್ಲಿ 158 ಕಿ.ಮೀ. ಉದ್ದದ ರಸ್ತೆಯ ವೈಟ್‌ ಟಾಪಿಂಗ್‌ ಕಾಮಗಾರಿ.

ನಗರ ಪ್ರದೇಶಗಳಲ್ಲಿ ನೈಸರ್ಗಿಕ ಹಸಿರು ಪ್ರದೇಶಗಳನ್ನಾಗಿಸಲು 100 ʻMiyawaki ಪಾರ್ಕ್‌ʼ ಗಳನ್ನು ನಿರ್ಮಿಸಲಾಗುವುದು.

ಧಾರವಾಡದಲ್ಲಿ ನಾಲ್ಕು ಹಾಗೂ ಬೆಂಗಳೂರಿನಲ್ಲಿ ಎರಡು ʻವಿದ್ಯಾರ್ಥಿ ಇಂದಿರಾ ಕ್ಯಾಂಟೀನ್‌ʼ ಗಳನ್ನು ಪ್ರಾರಂಭ.

ಕೆಪಿಟಿಸಿಎಲ್ ವತಿಯಿಂದ ‌100 ಹೊಸ ಉಪ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಿದೆ.

777 ಕೋಟಿ ರೂ.ಗಳ ವೆಚ್ಚದಲ್ಲಿ 1,250 ವಾಹನ ಚಾರ್ಜಿಂಗ್ ಕೇಂದ್ರಗಳನ್ನು ಪಿ.ಎಮ್‌-ಇ ಡ್ರೈವ್‌ ಯೋಜನೆಯಡಿ  ಸ್ಥಾಪನೆ.

ಲೋಕೋಪಯೋಗಿ ಇಲಾಖೆಯ ಯೋಜನೆಗಳಡಿ 2,200 ಕಿ.ಮೀ ಉದ್ದದ ರಾಜ್ಯ ಹೆದ್ದಾರಿಗಳನ್ನು ಹಾಗೂ 3,500 ಕಿ.ಮೀ ಉದ್ದದ ಜಿಲ್ಲಾ ರಸ್ತೆಗಳನ್ನು 5,776 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.

ಬಂದರುಗಳು ಮತ್ತು ಸರಕು ಸಾಗಾಣಿಕೆ ವಲಯದ ಅಭಿವೃದ್ಧಿಗಾಗಿ ʻಸಮಗ್ರ ಮಲ್ಟಿಮೋಡಲ್ ಲಾಜಿಸ್ಟಿಕ್ಸ್ ನೀತಿʼ ರೂಪಿಸಲಾಗುವುದು.

ಜೀವಿತಾವಧಿ ಮುಗಿದ ವಾಹನಗಳನ್ನು ಸುರಕ್ಷಿತ ರೀತಿಯಲ್ಲಿ ವಿಲೇವಾರಿ ಮಾಡಲು KIADB ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 100 ಎಕರೆ ಪ್ರದೇಶದಲ್ಲಿ ವಾಹನ ಸ್ಕ್ರ್ಯಾಪಿಂಗ್ (Vehicle Scrapping) ಸೌಲಭ್ಯ ಘಟಕವನ್ನು ಸ್ಥಾಪಿಸಲಾಗುವುದು.

ಮೈಸೂರು ವಿಮಾನ ನಿಲ್ದಾಣದ ಹತ್ತಿರದಲ್ಲಿ ಏರೋಸ್ಪೇಸ್ ಪಾರ್ಕ್ ಅನ್ನು  KIADB ವತಿಯಿಂದ ಅಭಿವೃದ್ಧಿ.

ರಾಜ್ಯದಲ್ಲಿ ಒಟ್ಟು 10 ಕೈಗಾರಿಕಾ ವಸಾಹತುಗಳಲ್ಲಿ 1,500 ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು.

More articles

Latest article

Most read