ರಿಯಲ್‌ ಎಸ್ಟೇಟ್‌ ಏಜೆಂಟ್‌ ಹತ್ಯೆ

25 ಲಕ್ಷ ರೂ. ಸುಫಾರಿ ಪಡೆದು ತಮಿಳುನಾಡಿನ ಡೆಂಕಣಿಕೋಟೆಯಲ್ಲಿ ಹತ್ಯೆ

ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಬರ್ಬರ ಹತ್ಯೆ ಮಾಡಲಾಗಿದೆ. ತಮಿಳುನಾಡಿನ ಡೆಂಕಣಿಕೋಟೆಯಲ್ಲಿ ರಿಯಲ್‌ ಎಸ್ಟೇಟ್‌ ಏಜೆಂಟ್ ಗೋಪಾಲ್ ಶವ ಪತ್ತೆ‌ಯಾಗಿದೆ. 25 ಲಕ್ಷ ಸುಪಾರಿ ಪಡೆದು ‌ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ ಎನ್ನಲಾಗಿದೆ.

ಆನೇಕಲ್ ಠಾಣೆಗೆ ಗೋಪಾಲ್ ಪತ್ನಿ ಅಪಹರಣ ಪ್ರಕರಣ ದೂರು ನೀಡಿದ್ದರು. ಹೊನ್ನಕಳಸಾಪುರ ಗ್ರಾಮದ ನಿವಾಸಿ ಗೋಪಾಲ್ ಅಲಿಯಾಸ್ ಗೋಪಿ ಎಂಬ ರಿಯಲ್ ಎಸ್ಟೇಟ್ ಏಜೆಂಟ್ ಆಗಿದ್ದರು. ಮೋಹನ್ ಬಾಬು, ಹರೀಶ್, ಕಿರಣ್ ವಿರುದ್ಧ ಆರೋಪ ಮಾಡಲಾಗಿತ್ತು. ಬಳಿಕ ಶಂಕಿತ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಕುಮಾರ್ ನೇತೃತ್ವದಲ್ಲಿ ಮಾ.09ರಂದು ಬೆಳಗಿನ ಜಾವ 9 ಇನ್ಸ್‌ಪೆಕ್ಟರ್‌ಗಳ ಸಹಭಾಗಿತ್ವದಲ್ಲಿ 7 ವಿಶೇಷ ತಂಡಗಳನ್ನು ರಚಿಸಲಾಗಿತ್ತು. ತಂಡಗಳು ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ತಮಿಳೂನಾಡಿನ ಡೆಂಕಣಿಕೋಟೆಯಲ್ಲಿ ಗೋಪಾಲ್‌ ಶವ ಪತ್ತೆಯಾಗಿದೆ.

ಸುಪಾರಿ ಪಡೆದ ದುಷ್ಕರ್ಮಿಗಳು ಗೋಪಾಲ್​ರನ್ನು ಕಾರಿನಲ್ಲಿ ಕರೆದೊಯ್ದು ಹತ್ಯೆಗೈದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನೆ ತಿಳಿದು ಆಕ್ರೋಶಗೊಂಡ ಗೋಪಾಲ್ ಕುಟುಂಬಸ್ಥರು ಹಾಗೂ ಬಂಧುಗಳು ಆನೇಕಲ್ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಿದರು. ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

More articles

Latest article

Most read