ಮಂಗಳೂರು: ಕೆ.ಎಸ್.ಆರ್.ಟಿ.ಸಿ ಡಿಪೋದಲ್ಲಿ ವಿವಿಧ ಹುದ್ದೆಗಳನ್ನು ಕೊಡಿಸುವುದಾಗಿ ನಂಬಿಸಿ ಸುಮಾರು 12 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ಲೂಟಿ ಮಾಡಿದ ಇಬ್ಬರ ವಿರುದ್ಧ ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಮಾಗಡಿ ತಾಲೂಕಿನ ಚಿಕತೋರೆಪಾಳ್ಯದ ರುದ್ರೇಶ್ ಎಸ್. ನಾಯಕ್ ಮತ್ತು ಬೆಂಗಳೂರಿನ ಶಶಿ ಭೂಷಣ್ ಎಂಬುವವರೇ ಈ ವಂಚನೆ ಪ್ರಕರಣಧ ಆರೋಪಿಗಳು. ಹಣ ಕಳೆದುಕೊಂಡ ಸಂತ್ರಸ್ತರು ನೀಡಿದ ದೂರಿನ ಮೇರೆಗೆ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.

