ಮಾರ್ಚ್ 18ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ-1 ಆರಂಭ

ಪರೀಕ್ಷೆ ಬರೆಯಲಿದ್ದಾರೆ 9,02,859 ವಿದ್ಯಾರ್ಥಿಗಳು  

ಬೆಂಗಳೂರು :  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ-1 ರ ನಿರ್ವಹಣೆಗೆ ಸರ್ವ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. 2026 ನೇ ಮಾರ್ಚ್ 18 ರಿಂದ ಏಪ್ರಿಲ್ 02ರವರೆಗೆ ರಾಜ್ಯಾದ್ಯಂತ ಪರೀಕ್ಷೆಗಳು ನಡೆಯಲಿವೆ.  

ಪ್ರಸಕ್ತ ಸಾಲಿನಲ್ಲಿ ಒಟ್ಟು 9,02,859 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದು, ಸುಸೂತ್ರವಾಗಿ ಪರೀಕ್ಷೆ ನಡೆಸಲು ರಾಜ್ಯಾದ್ಯಂತ 2,870 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಅಕ್ರಮ ತಡೆಗೆ ಕಠಿಣ ಕ್ರಮ: ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಮಂಡಳಿಯು ಈ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪರೀಕ್ಷೆಯ ಸಮಯದಲ್ಲಿ ಸುಳ್ಳು ವದಂತಿಗಳನ್ನು ಹರಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಲು ಮಂಡಳಿ ನಿರ್ಧರಿಸಿದೆ.

ಸೈಬರ್ ಕೇಂದ್ರಗಳ ಮೇಲೆ ನಿಗಾ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಕೋಚಿಂಗ್ ಸೆಂಟರ್‍ಗಳು, ಸೈಬರ್ ಕೆಫೆಗಳು ಹಾಗೂ ಜೆರಾಕ್ಸ್ ಅಂಗಡಿಗಳ ಮೇಲೆ ವಿಶೇಷ ನಿಗಾ ವಹಿಸಲು ಪೊಲೀಸ್ ಇಲಾಖೆಗೆ ಸೂಚಿಸಿದೆ.

ಪರೀಕ್ಷಾ ಕೇಂದ್ರಗಳ ಬಳಿ ಅಕ್ರಮಗಳಿಗೆ ಪ್ರಚೋದನೆ ನೀಡುವ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪದೋಷಗಳಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷರಾದ  ಪ್ರಕಾಶ್ ಜಿ.ಟಿ. ನಿಟ್ಟಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More articles

Latest article

Most read