ಬೆಂಗಳೂರು : ದೇಶಾದ್ಯಂತ ಅಡುಗೆ ಅನಿಲ ಸರಬರಾಜಿನಲ್ಲಿ ವ್ಯತ್ಯಯ ಆಗುತ್ತಿರುವ ಹಿನ್ನಲೆ ಬೆಂಗಳೂರಿನಲ್ಲಿ ಗೃಹ ಬಳಕೆ ದಾಸ್ತಾನು ಸಾಕಷ್ಟಿದ್ದು, ಗ್ರಾಹಕರು ಹೆಚ್ಚುವರಿ ದಾಸ್ತಾನು ಮಾಡಿಕೊಳ್ಳಬಾರದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಎಲ್ಪಿಜಿಗೆ ಕೊರತೆಯಿಲ್ಲ. ಸಾಮಾಜಿಕ ಜಾಲತಾಣದ ವದಂತಿಗಳಿಗೆ ಕಿವಿಗೊಡಬಾರದು. ಗ್ರಾಹಕರು ಯಾವುದೇ ಆತಂಕಕ್ಕೆ ಒಳಗಾಗಿ, ಯಾರೂ ಹೆಚ್ಚುವರಿ ದಾಸ್ತಾನು ಮಾಡಿಕೊಳ್ಳಬಾರದು ಎಂದು ಡಿಸಿ ಸೂಚನೆ ನೀಡಿದ್ದಾರೆ.
ಗೃಹ ಬಳಕೆ ಅನಿಲ ವಿತರಣೆ, ವ್ಯತ್ಯಯದಲ್ಲಿ ಉಂಟಾಗುವ ಸಮಸ್ಯೆಗೆ ಸಹಾಯವಾಣಿ ಆರಂಭಿಸಲಾಗಿದೆ. ಗ್ರಾಹಕರು ಸಹಾಯವಾಣಿ ಸಂಖ್ಯೆ-9611404384 ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಹೇಳಿದ್ದಾರೆ.

