‘ಕಡ್ಡಾಯ ಮುಟ್ಟು ರಜೆ’ – ಉದ್ಯೋಗದ ಮೇಲೆ ನಕಾರಾತ್ಮಕ ಪರಿಣಾಮ :  ಸುಪ್ರೀಂ ಕೋರ್ಟ್‌ ಕಳವಳ

ನವದೆಹಲಿ : ಮಹಿಳೆಯರಿಗೆ ಮುಟ್ಟಿನ ಸಮಯದಲ್ಲಿ ಕಡ್ಡಾಯ ರಜೆ ನೀಡುವ ಕಾನೂನು ಜಾರಿಗೆ ತಂದರೆ  ಉದ್ಯೋಗಾವಕಾಶಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಕಳವಳ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಪೀಠವು ಈ ಎಚ್ಚರಿಕೆ ನೀಡಿದೆ. ಅರ್ಜಿದಾರರು ದೇಶಾದ್ಯಂತ ವಿದ್ಯಾರ್ಥಿನಿಯರು ಮತ್ತು ಉದ್ಯೋಗಿ ಮಹಿಳೆಯರಿಗೆ ಮುಟ್ಟಿನ ರಜೆ ನಿಯಮಗಳನ್ನು ರೂಪಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಬೇಕು ಎಂದು ಕೋರಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, ಮುಟ್ಟಿನ ರಜೆ ಕಡ್ಡಾಯ ಮಾಡಿದರೆ, ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ಸೇರಿಸಿಕೊಳ್ಳುವುದನ್ನೇ ನಿಲ್ಲಿಸುತ್ತಾರೆ. ಇದು ಮಹಿಳೆಯರ ಉದ್ಯೋಗದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದರು.

ಇಂತಹ ಕಾನೂನು ಕೆಲಸ ಮಾಡುವ ಮಹಿಳೆಯರಲ್ಲಿ ನಾವು ಪುರುಷರಿಗಿಂತ ಕಡಿಮೆ ಅಥವಾ ಅಸಮರ್ಥರು ಎಂಬ ಮಾನಸಿಕ ಭಯ ಅಥವಾ ಕೀಳರಿಮೆಯನ್ನು ಉಂಟುಮಾಡಬಹುದು ಎಂದು ಸಿಜೆಐ ಅಭಿಪ್ರಾಯಪಟ್ಟರು.

ಕಾನೂನು ಕಡ್ಡಾಯವಾದರೆ, ಖಾಸಗಿ ಸಂಸ್ಥೆಗಳಷ್ಟೇ ಅಲ್ಲ, ನ್ಯಾಯಾಂಗ ಅಥವಾ ಸರ್ಕಾರಿ ಕೆಲಸಗಳಲ್ಲೂ ಮಹಿಳೆಯರನ್ನು ತೆಗೆದುಕೊಳ್ಳಲು ಹಿಂದೇಟು ಹಾಕಬಹುದು. ಇದು ಅವರ ವೃತ್ತಿಜೀವನವನ್ನೇ ಅಂತ್ಯಗೊಳಿಸಬಹುದು ಎಂದು ಎಚ್ಚರಿಸಿದರು.

ಉದ್ಯೋಗ ಮಾರುಕಟ್ಟೆಯ ಪ್ರಾಯೋಗಿಕ ವಾಸ್ತವತೆಯನ್ನು ಪರಿಗಣಿಸಬೇಕು. ಮಾನವ ಸಂಪನ್ಮೂಲ ಕಡಿಮೆ ಇದ್ದರೆ, ಆಯ್ಕೆಯ ಸಾಧ್ಯತೆ ಕಡಿಮೆಯಾಗುತ್ತದೆ. ಈ ಎಲ್ಲ ಅಂಶಗಳನ್ನೂ ಪರಿಶೀಲಿಸಬೇಕು. ವ್ಯವಹಾರದ ದೃಷ್ಟಿಯಿಂದಲೂ ಇದನ್ನು ನೋಡಬೇಕಿದೆ ಎಂದು ನ್ಯಾಯಮೂರ್ತಿ ಬಾಗ್ಚಿ ತಿಳಿಸಿದರು.

ಅರ್ಜಿದಾರರು ಸೂಚಿಸಿದಂತೆ ತಿಂಗಳಿಗೆ ಮೂರು ಅಥವಾ ನಾಲ್ಕು ದಿನಗಳ ರಜೆ ತೆಗೆದುಕೊಳ್ಳುವ ಕಾನೂನು ರಚಿಸಿದರೆ, ಅದು ಮಹಿಳೆಯರ ವೃತ್ತಿಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಸಿಜೆಐ ಮೌಖಿಕವಾಗಿ ಅಭಿಪ್ರಾಯಪಟ್ಟರು.

More articles

Latest article

Most read