ಸಿಲಿಂಡರ್ ಪೂರೈಕೆ – ಯಾವುದೇ ಸಮಸ್ಯೆಯಾಗದಂತೆ ಕ್ರಮ‌  :  ಕೆ.ಹೆಚ್. ಮುನಿಯಪ್ಪ 

ಅನಿಲ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಮಹತ್ವದ ಸಭೆ

ಬೆಂಗಳೂರು : ಇರಾನ್‌ ಮತ್ತು ಇಸ್ರೇಲ್-ಅಮೆರಿಕ ಸಂಘರ್ಷದಲ್ಲಿ ದೇಶಾದ್ಯಂತ ಅಡುಗೆ ಅನಿಲಕ್ಕೆ ಸಮಸ್ಯೆಯಾಗಿದೆ. ಇದರಿಂದ ಗ್ರಾಹಕರು ಹಾಗೂ ವಾಣಿಜ್ಯ ಬಳಕೆಗೆ ಬಳಸುತ್ತಿದ್ದ ಹೊಟೇಲ್‌ಗಳು ಇದೀಗ ಸಿಲಿಂಡರ್‌ ಸಿಗದೆ ಹೋಟೆಲ್‌ ಮುಚ್ಚುವ ಸ್ಥಿತಿ ತಲುಪಿದ್ದಾರೆ.
ರಾಜ್ಯಾದ್ಯಂತ ಸಿಲಿಂಡರ್‌ ವಿತರಣೆ ಹಾಗೂ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನಲೆ ಅಡುಗೆ ಅನಿಲ ಕುರಿತು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ ನೇತೃತ್ವದಲ್ಲಿ ಇಂದು ವಿಧಾನಸೌಧದ ಕೊಠಡಿಯಲ್ಲಿ  ಸಭೆ ನಡೆಯಿತು. 

IOC ,BPC, HPC, GAIL ನ ಸಂಸ್ಥೆಗಳ ಅಧಿಕಾರಿಗಳು ಹಾಗೂ ಹೊಟೆಲ್ ಮಾಲಿಕರ ಸಂಘದ ಅಧ್ಯಕ್ಷರುಗಳು ಸಭೆಯಲ್ಲಿ ಭಾಗವಹಿಸಿದ್ದರು. ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಕ್ರಮ ವಹಿಸಲಾಗುತ್ತಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ. 

ಸಭೆಯಲ್ಲಿ  ಸರ್ಕಾರದ ಕಾರ್ಯದರ್ಶಿ ಕನಗವಲ್ಲಿ, ಆಯುಕ್ತರಾದ ರವಿಕುಮಾರ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್, ಅನಿಲ ಕಂಪನಿಗಳ ಅಧಿಕಾರಿಗಳಾದ ನೀರಾ ಸಿಂಗ್, ಅರುಂದಿ ಗೊಯಲ್, ದಿವ್ಯ, ಮುರಳಿ ಚಾರ್, ಸುಬ್ರತ್ ಚಟರ್ಜಿ, ರಾಜೇಶ್ ಸಿಂಗ್, ಸಂಜಯ್ ಕುಮಾರ್ ಸಿಂಗ್, ಪ್ರಣಯ ದೇವನಾಗನ್, ರವಿಕುಮಾರ್ ತಂಡಲ್, ಪ್ರಸೂನ್ ಮಾಲಿ ಹಾಗೂ ನಿಗಮದ ಪ್ರಧಾನ ವ್ಯವಸ್ಥಾಪಕರಾದ ಮಂಜುನಾಥ್ ಹಾಗೂ  ಅಧಿಕಾರಿಗಳು ಉಪಸ್ಥಿತರಿದ್ದರು.

More articles

Latest article

Most read