ನಿರಂತರ ಸಾಮೂಹಿಕ ಸ್ವಚ್ಛತೆ ಕಾರ್ಯ :  ರಸ್ತೆ ಬದಿಗಳ 41 ಲೋಡ್ ತ್ಯಾಜ್ಯ ತೆರವು

8.45 ಕಿಲೋಮೀಟರ್ ಸ್ವಚ್ಛತೆ : 10 ಬ್ಲ್ಯಾಕ್ ಸ್ಪಾಟ್‌ ತೆರವು

ಬೆಂಗಳೂರು :  ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಗರದ ಸ್ವಚ್ಛತೆ ಕಾಪಾಡುವ ಹಾಗೂ ನಾಗರಿಕರಿಗೆ ಆರೋಗ್ಯಕರ ಪರಿಸರ ಒದಗಿಸುವ ಉದ್ದೇಶದಿಂದ ವಿವಿಧ ಪ್ರದೇಶಗಳಲ್ಲಿ ವಿಶೇಷ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ  ರಾಜೇಂದ್ರ ಚೋಳನ್  ತಿಳಿಸಿದ್ದಾರೆ.

ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ 6 ವಿಧಾನಸಭಾ ಕ್ಷೇತ್ರಗಳಲ್ಲಿನ ವಿವಿಧ ಭಾಗಗಳಲ್ಲಿ ಕಸ ಸಂಗ್ರಹವಾಗುವ ಸ್ಥಳಗಳನ್ನು ಗುರುತಿಸಿ ಅವುಗಳನ್ನು ತೆರವುಗೊಳಿಸುವ ಕಾರ್ಯವನ್ನು ನಿರಂತರವಾಗಿ ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ ನಿಯಮಿತ ಸ್ವಚ್ಛತಾ ಕಾರ್ಯಗಳ ಜೊತೆಗೆ ವಿಶೇಷ ಕಾರ್ಯಾಚರಣೆಗಳನ್ನು ರೂಪಿಸಿ ಜಾರಿಗೆ ತರಲಾಗಿದೆ. ನಗರದಲ್ಲಿ ಗುರುತಿಸಲ್ಪಟ್ಟ ಬ್ಲ್ಯಾಕ್ ಸ್ಪಾಟ್ ಪ್ರದೇಶಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡುವುದಕ್ಕೆ ನಗರ ಪಾಲಿಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು.

ಸಾರ್ವಜನಿಕರು ರಸ್ತೆ ಬದಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯದೇ, ನಿಗದಿತ ಸ್ಥಳಗಳಲ್ಲಿ ಮಾತ್ರ ತ್ಯಾಜ್ಯ ವಿಸರ್ಜಿಸುವ ಮೂಲಕ ನಗರ ಸ್ವಚ್ಛತೆ ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡಿದರು.

ಇಂದು ನಡೆದ ವಿಶೇಷ ಸ್ವಚ್ಛತಾ ಕಾರ್ಯಾಚರಣೆಗಳು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಿತು. ಚಾಮರಾಜಪೇಟೆ, ಚಿಕ್ಕಪೇಟೆ, ಗಾಂಧಿನಗರ, ಶಾಂತಿನಗರ, ಶಿವಾಜಿನಗರ ಮತ್ತು ಸಿ.ವಿ. ರಾಮನ್ ನಗರ ಕ್ಷೇತ್ರಗಳ ಪ್ರಮುಖ ರಸ್ತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಲಾಯಿತು.

ಚಾಮರಾಜಪೇಟೆ ಕ್ಷೇತ್ರದ ವಾರ್ಡ್ 140 ರಲ್ಲಿ 4ನೇ ಮತ್ತು 5ನೇ ಮುಖ್ಯರಸ್ತೆಗಳಲ್ಲಿ ಸ್ವಚ್ಛತಾ ಕಾರ್ಯಾಚರಣೆ ನಡೆಸಲಾಯಿತು.  ಚಿಕ್ಕಪೇಟೆ ಕ್ಷೇತ್ರದ ವಾರ್ಡ್-118 ರ ನಗರತ್ ಪೇಟೆ, ಎಸ್.ಜೆ.ಪಿ ರಸ್ತೆ, ಕುಂಬಾರ ಪೇಟೆ, ಎಸ್.ಪಿ ರಸ್ತೆ, ಓ.ಟಿ.ಸಿ ರಸ್ತೆ ಮತ್ತು ತಿಗಳರಪೇಟೆ ಮುಖ್ಯರಸ್ತೆ ಸೇರಿದಂತೆ ಧರ್ಮರಾಯಸ್ವಾಮಿ ದೇವಸ್ಥಾನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಶೇಷ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.

ಗಾಂಧಿನಗರ ಕ್ಷೇತ್ರದ ವಾರ್ಡ್ 96 ರಲ್ಲಿ ಓಕಳಿಪುರಂ 5ನೇ ಮುಖ್ಯರಸ್ತೆ, ಅಂಬೇಡ್ಕರ್ ಸ್ಲಮ್, ಕಿಲಾರಿ ರಸ್ತೆ ಹಾಗೂ ಬಳೆಪೇಟೆ ಮುಖ್ಯರಸ್ತೆ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯಗಳನ್ನು ನಡೆಸಲಾಯಿತು. 

ಶಾಂತಿನಗರ ಕ್ಷೇತ್ರದ ವಾರ್ಡ್ 111ರ ಶಾಂತಲಾ ನಗರ ವ್ಯಾಪ್ತಿಯ ಚರ್ಚ್ ಸ್ಟ್ರೀಟ್ ಪಾದಚಾರಿ ಮಾರ್ಗದಲ್ಲಿ ಸ್ವಚ್ಛತೆ ಹಾಗೂ ಪಾದಚಾರಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು. 

ಶಿವಾಜಿನಗರ ಕ್ಷೇತ್ರದಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರದೇಶದಿಂದ ಟಾಸ್ಕರ್ ಟೌನ್ ವರೆಗೆ ರಸ್ತೆಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು. 

ಸಿ.ವಿ. ರಾಮನ್ ನಗರ ಕ್ಷೇತ್ರದ ವಾರ್ಡ್ 113 ರಲ್ಲಿ ಹೊಯ್ಸಳನಗರದಿಂದ ಹಳೆಯ ಮದ್ರಾಸ್ ರಸ್ತೆ ಮೂಲಕ ದೊಮ್ಮಲೂರು ಫ್ಲೈಓವರ್ ಹಾಗೂ 100 ಅಡಿ ರಸ್ತೆಯವರೆಗೆ ಸ್ವಚ್ಛತಾ ಕಾರ್ಯಾಚರಣೆ ನಡೆಸಲಾಯಿತು.

ಈ ಅಭಿಯಾನವು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಅಭಿವೃದ್ಧಿ ಅಪರ ಆಯುಕ್ತ ದಲ್ಜಿತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆಯಿತು. ಒಟ್ಟು 8.45 ಕಿಲೋಮೀಟರ್ ವ್ಯಾಪ್ತಿಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ 6 ಜೆಸಿಬಿ ಯಂತ್ರಗಳು ಮತ್ತು 31 ಟ್ರ್ಯಾಕ್ಟರ್‌ಗಳ ಬಳಕೆಯೊಂದಿಗೆ ದಿಂದ ರಸ್ತೆ ಬದಿಗಳಲ್ಲಿ ಸಂಗ್ರಹವಾಗಿದ್ದ 41 ಲೋಡ್ ತ್ಯಾಜ್ಯವನ್ನು ತೆರವುಗೊಳಿಸಲಾಯಿತು. ಅಲ್ಲದೇ ವಿವಿಧ ಪ್ರದೇಶಗಳಲ್ಲಿ ಗುರುತಿಸಲ್ಪಟ್ಟಿದ್ದ 10 ಬ್ಲ್ಯಾಕ್ ಸ್ಪಾಟ್‌ಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಯಿತು.

ಈ ಕಾರ್ಯಾಚರಣೆಯಲ್ಲಿ 144 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿ ಭಾಗವಹಿಸಿದ್ದರು. ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯ ಸಹಕಾರದಿಂದ ಅಭಿಯಾನ ಪೂರ್ಣಗೊಂಡಿತು.

cl

More articles

Latest article

Most read