ವಾಂಗ್‌ಚುಕ್‌ ಬಿಡುಗಡೆಗೆ ನಿರ್ಧಾರ : ಗೃಹ ಸಚಿವಾಲಯ

ಕಳೆದ ಸೆ. 26 ರಂದು ಎನ್‌ಎಸ್‌ಎ ನಿಬಂಧನೆಗಳ ಅಡಿಯಲ್ಲಿ ಬಂಧಿಸಲಾಗಿತ್ತು 

ನವದೆಹಲಿ : ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಶನಿವಾರ ರದ್ದುಗೊಳಿಸಿದೆ.  

ಗೃಹ ವ್ಯವಹಾರಗಳ ಸಚಿವಾಲಯ ಈ ಮಾಹಿತಿ ನೀಡಿದ್ದು, ಲಡಾಖ್‌ನಲ್ಲಿ ಶಾಂತಿ, ಸ್ಥಿರತೆ ಮತ್ತು ಪರಸ್ಪರ ನಂಬಿಕೆಯ ವಾತಾವರಣವನ್ನು ಬೆಳೆಸಲು ಸರ್ಕಾರ ಬದ್ಧವಾಗಿದೆ. ಸೂಕ್ತ ಪರಿಗಣನೆಯ ನಂತರ  ಸಂಬಂಧಪಟ್ಟ ಪ್ರದೇಶದಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಮತ್ತು ಸಂವಾದವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಂಧನವನ್ನು ರದ್ದುಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ.

ಕಳೆದ ಸೆಪ್ಟೆಂಬರ್‌ನಲ್ಲಿ ಲೇಹ್‌ನಲ್ಲಿ ನಡೆದ ಪ್ರತಿಭಟನೆಗಳು ಈ ಪ್ರದೇಶದಲ್ಲಿ ಉದ್ವಿಗ್ನಕ್ಕೆ ಹಾಗೂ  ಕಾನೂನು ಸುವ್ಯವಸ್ಥೆ ಅಸ್ಥಿರವಾಲು  ಕಾರಣವಾಗಿತ್ತು. ಕೆಲ ತಿಂಗಳುಗಳ ನಂತರ, ಲಡಾಖ್‌ನಲ್ಲಿ ನಡೆದ ವಿದ್ಯಮಾನಗಳಿಗೆ ಸಂಬಂಧಿಸಿದ ಅಶಾಂತಿಯ ನಂತರ ವಾಂಗ್‌ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಿ ರಾಜಸ್ಥಾನದ ಜೋಧ್‌ಪುರದ ಜೈಲಿನಲ್ಲಿ ಇರಿಸಲಾಗಿತ್ತು.  ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಅಧಿಕಾರಗಳನ್ನು ಚಲಾಯಿಸುವ ಮೂಲಕ ತಕ್ಷಣದಿಂದ ಜಾರಿಗೆ ಬರುವಂತೆ ವಾಂಗ್‌ಚುಕ್ ಅವರ ಬಂಧನವನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದೆ. 

ಲೇಹ್‌ನಲ್ಲಿ ನಡೆದ ಪ್ರತಿಭಟನೆಗಳ ನಂತರ ಬಂಧನ : ಗೃಹ ಸಚಿವಾಲಯದ ಪ್ರಕಾರ, ಸೆಪ್ಟೆಂಬರ್ 24 ರಂದು ಪಟ್ಟಣದಲ್ಲಿ ಗಂಭೀರ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಹದಗೆಟ್ಟ ನಂತರ ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು  ಲೇಹ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಹೊರಡಿಸಿದ ಆದೇಶದ ನಂತರ ವಾಂಗ್‌ಚುಕ್ ಅವರನ್ನು ಸೆಪ್ಟೆಂಬರ್ 26 ರಂದು ಎನ್‌ಎಸ್‌ಎ ನಿಬಂಧನೆಗಳ ಅಡಿಯಲ್ಲಿ ಬಂಧಿಸಲಾಯಿತು. 

ಈಗಾಗಲೇ ವಾಂಗ್‌ಚುಕ್ ಕಾನೂನಿನಡಿಯಲ್ಲಿ ನಿಗದಿಪಡಿಸಲಾದ ಬಂಧನ ಅವಧಿಯ ಸುಮಾರು ಅರ್ಧದಷ್ಟು ಭಾಗವನ್ನು ಪೂರೈಸಿದ್ದಾರೆ ಎಂದು ಸಚಿವಾಲಯ ಗಮನಿಸಿದೆ.

More articles

Latest article

Most read