ಕೆಲ ವಿಮಾನಗಳ ಹಾರಾಟ ಆರಂಭಿಸಿದ ದುಬೈ ಏರ್‌ಪೋರ್ಟ್‌

ಮೂರು ಡ್ರೋನ್‌ಗಳನ್ನು ತಡೆಹಿಡಿದಿದೆ ಎಂದು ರಕ್ಷಣಾ ಸಚಿವಾಲಯ

ದುಬೈ :  ಅಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿರಳವಾಗಿ ವಿಮಾನಗಳು ಸಂಚಾರ ಆರಂಭಿಸಿದೆ ಎಂದು  ದುಬೈ ನಾಗರಿಕ ವಿಮಾನಯಾನ ಪ್ರಾಧಿಕಾರ  ತಿಳಿಸಿದೆ.

ಇರಾನ್ ನಡೆಸಿದ ಡ್ರೋನ್​ ದಾಳಿ ಬಳಿಕ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ವಿಮಾನ ನಿಲ್ದಾಣದ ಸಮೀಪದಲ್ಲೇ ಬೆಂಕಿ ಕಾಣಿಸಿಕೊಂಡ ನಂತರ ಸೋಮವಾರ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಸೌದಿ ಅರೇಬಿಯಾ ಸೋಮವಾರ ರಿಯಾದ್ ಮೇಲೆ ಮತ್ತು ಪೂರ್ವ ಪ್ರದೇಶಗಳಲ್ಲಿ ಹಾರಿ ಬಂದಿದ್ದ ಮೂರು ಡ್ರೋನ್‌ಗಳನ್ನು ತಡೆಹಿಡಿದಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಈ ಘಟನೆಯಿಂದ ಇಂಧನ ಟ್ಯಾಂಕ್‌ಗಳಿಗೆ ಹಾನಿಯಾಗಿದ್ದು, ತುರ್ತು ತಂಡಗಳು ಪರಿಸ್ಥಿತಿಯನ್ನು ನಿಭಾಯಿಸುವವರೆಗೆ ಹಲವಾರು ವಿಮಾನಗಳು ವಿಮಾನ ನಿಲ್ದಾಣದ ಹೊರಗೆ ಸುತ್ತುವಂತೆ ಮಾಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದುಬೈನ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣದಿಂದ ಕಾರ್ಯನಿರ್ವಹಿಸುವ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಎಮಿರೇಟ್ಸ್ ಸಹ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ದೃಢಪಡಿಸಿದೆ.

ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿರುವ ದುಬೈ ನಾಗರಿಕ ವಿಮಾನಯಾನ ಪ್ರಾಧಿಕಾರ, ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮವಾಗಿ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಘೋಷಿಸಿದೆ. ಪ್ರಯಾಣಿಕರು ಇತ್ತೀಚಿನ ಅಪ್ಡೇಟ್​ಗಳಿಗಾಗಿ ಸಂಬಂಧಿತ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ ಎಂದು ತಿಳಿಸಿದೆ.

More articles

Latest article

Most read