ಕನ್ನಡಿಗರ ಬೆನ್ನಿಗೆ ಚೂರಿ ಇರಿದ ರೈಲ್ವೆ ಇಲಾಖೆ, ದ್ರೋಹ ಖಂಡಿಸಿ ಕರವೇ ಪ್ರತಿಭಟನೆ

ಯಾವುದೇ ಬೆಲೆ ತೆತ್ತಾದರೂ ಕನ್ನಡಿಗರ ಹಕ್ಕುಗಳನ್ನು ರಕ್ಷಣೆಗೆ ಬದ್ಧ

ಬೆಂಗಳೂರು :  ನೈರುತ್ಯ ರೈಲ್ವೆಯ ಗೂಡ್ಸ್ ರೈಲು ಮ್ಯಾನೇಜರ್, ಎಲ್ ಡಿಸಿಇ ಹುದ್ದೆಗಳಿಗೆ ರೈಲ್ವೆ ಪರೀಕ್ಷಾ ಮಂಡಳಿ ಮಾರ್ಚ್ 17ರಂದು ಪರೀಕ್ಷೆಗಳನ್ನು ನಡೆಸುತ್ತಿದ್ದು, ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪರೀಕ್ಷೆ ನಡೆಸಲು ಹೊರಟಿದೆ. ರೈಲ್ವೆ ಅಧಿಕಾರಿಗಳು ಮಾತಿಗೆ ತಪ್ಪಿದ್ದಾರೆ, ಕನ್ನಡಿಗರಿಗೆ ಮತ್ತೆ ದ್ರೋಹವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಬೇಸರ ವ್ಯಕ್ತಪಡಿಸಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೈರುತ್ಯ ರೈಲ್ವೆ ಇಲಾಖೆ ಪದೋನ್ನತಿ ಪರೀಕ್ಷೆಗಳಲ್ಲಿ ಕನ್ನಡವನ್ನು ಹೊರಗೆ ಇಡುವ ಮೂಲಕ ಕನ್ನಡಿಗರ ಬೆನ್ನಿಗೆ ಚೂರಿ ಹಾಕಿದೆ. ಇದು ಮೋಸದ, ಅನ್ಯಾಯದ, ನಂಬಿಕೆದ್ರೋಹದ, ಮಹಾವಂಚನೆಯ ನಿರ್ಧಾರವಾಗಿದೆ. ಈ ಕ್ರೂರ ದ್ರೋಹದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ನಾಳೆಯಿಂದಲೇ ತೀವ್ರ ಸ್ವರೂಪದ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.  

2025ರ ಸೆ.25ರಂದು ಗೂಡ್ಸ್ ಟ್ರೇನ್ ಮ್ಯಾನೇಜರ್ (ಶೇ.60 ಪ್ರಮೋಷನಲ್ ಕೋಟಾ)’ 194 ಹುದ್ದೆ ಹಾಗೂ 2025ರ ನ.5ರಂದು ಹುಬ್ಬಳ್ಳಿ ವಿಭಾಗದಲ್ಲಿ ಎಲ್‌ಡಿಇ (Limited departmental compitetive examination) (ಶೇ.15 ಪ್ರಮೋಷನಲ್ ಕೋಟಾ) 101 ಮುಂಬಡ್ತಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಲಾಗಿತ್ತು. ಅಧಿಸೂಚನೆಯ ಪ್ರಕಾರ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆಗಳನ್ನು ನಡೆಸಲು ಹೊರಟಿದ್ದ ರೈಲ್ವೆ ಇಲಾಖೆಯ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ಈ ಸಂದರ್ಭದಲ್ಲಿ ರೈಲ್ವೆ ಇಲಾಖೆ ಉನ್ನತ ಅಧಿಕಾರಿಗಳ ಆಹ್ವಾನದ ಮೇರೆಗೆ ನಾನು ಇಲಾಖೆಯ ಪ್ರಧಾನ ಕಚೇರಿಯಲ್ಲಿ ಸುದೀರ್ಘ ಸಭೆ ನಡೆಸಿದ್ದೆ. ಈ ಸಂದರ್ಭದಲ್ಲಿ ಆಗಿರುವ ತಪ್ಪನ್ನು ಒಪ್ಪಿಕೊಂಡ ಅಧಿಕಾರಿಗಳು ನಿಯಮಾವಳಿಗಳ ಪ್ರಕಾರ ಕನ್ನಡದಲ್ಲೂ ಪರೀಕ್ಷೆ ನಡೆಸುವುದಾಗಿ ಭರವಸೆ ನೀಡಿದ್ದರು. ಪರೀಕ್ಷಾರ್ಥಿಗಳೂ ಸಹ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು.

ಈ ವಿಷಯವನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹಾಗು ಹಿರಿಯ ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಅವರ ಗಮನಕ್ಕೂ ತರಲಾಗಿತ್ತು. ಕನ್ನಡಿಗರಿಗೆ ಯಾವುದೇ. ಅನ್ಯಾಯವಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದರು.
ಉಭಯ ಸಚಿವರ ಭರವಸೆಯೂ ಸುಳ್ಳಾಗಿದೆ. ಪದೋನ್ನತಿ ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ಕನ್ನಡದಲ್ಲಿ ಅಭ್ಯಾಸ ನಡೆಸಿದ್ದ ಕನ್ನಡಿಗ ಉದ್ಯೋಗಿಗಳು ಅತಂತ್ರರಾಗಿದ್ದಾರೆ. ಈ ವಂಚನೆಯನ್ನು ಹೇಗೆ ಸಹಿಸಿಕೊಳ್ಳುವುದು? ನಾಳೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಇಲ್ಲದೇ ಹೋದರೆ ಈ ಕನ್ನಡಿಗ ಖದ್ಯೋಗಿಗಳ ಭವಿಷ್ಯವೇ ಹಾಳಾಗಲಿದೆ. ಇವರಿಗೆ ಆಗುವ ಅನ್ಯಾಯಕ್ಕೆ ಜವಾಬ್ದಾರಿ ಹೊರುವವರು ಯಾರು? ಎಂದು ಪ್ರಶ್ನಿಸಿದ್ದಾರೆ.
ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ, ಆಹಾರ ಸರಬರಾಜು-ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ, ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿಯವರನ್ನು ಉಲ್ಲೇಖಿಸಿ ಮಾತನಾಡಿದ ಅವರು ನೀವೆಲ್ಲರೂ ದೊಡ್ಡ ದೊಡ್ಡ ಹುದ್ದೆಗಳನ್ನು ನಿಭಾಯಿಸಿದ ಹಿರಿಯರು. ಸ್ವಾಭಿಮಾನಕ್ಕೆ ಧಕ್ಕೆಯಾದರೆ ಆ ಸ್ಥಾನದಲ್ಲಿ ಇರುವುದು ಒಳಿತಲ್ಲ. ನಿಮಗೆ ಅಧಿಕಾರ ಕೊಟ್ಟಿದ್ದು ಕನ್ನಡಿಗರು. ಅವರ ಋಣವನ್ನು ತೀರಿಸಿ ಎಂದು ಹೇಳಿದರು.

ನೀವು ಗಟ್ಟಿಯಾದ ತೀರ್ಮಾನ ತೆಗೆದುಕೊಂಡು ಸಾಮೂಹಿಕ ರಾಜೀನಾಮೆ ಕೊಟ್ಟು ಹೊರಬನ್ಜಿ. ಆಗ ನಿಮ್ಮ ಮಾತುಗಳನ್ನು ಕೇಂದ್ರ ಸರ್ಕಾರದ ಆಯಕಟ್ಟಿನ ಸ್ಥಳಗಳಲ್ಲಿ ಕುಳಿತುಕೊಂಡಿರುವ ಹಿಂದಿವಾಲಾಗಳು ಆಲಿಸುತ್ತಾರೆ. ಇಲ್ಲವಾದಲ್ಲಿ ನಿಮ್ಮ ಇದೇ ಅಸಹಾಯಕತೆ ಮುಂದುವರೆಯುತ್ತದೆ. ಇದೇ ಅನ್ಯಾಯ ತಮಿಳುನಾಡಿನ ಜನರಿಗೆ ಆಗಿದ್ದರೆ ಅಲ್ಲಿನ ಸಂಸದರು ಸುಮ್ಮನೆ ಇರುತ್ತಿದ್ದರೆ ಎಂದು ಅವರು ಪ್ರಶ್ನಿಸಿದರು.

ಪರೀಕ್ಷೆಗೆ ಕೇವಲ ನಾಲ್ಕು ದಿನಗಳು ಇರುವಂತೆ ನೋಟಿಫಿಕೇಷನ್ ಹೊರಡಿಸಲಾಗಿದೆ. ಪರೀಕ್ಷಾರ್ಥಿಗಳು ಯಾವುದೇ ರೀತಿಯ ಮೇಲ್ಮನವಿ ಸಲ್ಲಿಸದಂತೆ ತರಾತುರಿಯಲ್ಲಿ ಪರೀಕ್ಷೆಗಳನ್ನು ನಿಗದಿಪಡಿಸಲಾಗಿದೆ. ಇದರ ಹಿಂದೆ ಬಹುದೊಡ್ಡ ಷಡ್ಯಂತ್ರವೇ ಇರುವ ಹಾಗೆ ಕಾಣುತ್ತಿದೆ. ಕಾಣದ ಕೈಗಳು ಕನ್ನಡಿಗ ನೌಕರರ ಬಡ್ತಿಗೆ ಅಡ್ಡಿಯಾಗಿರುವ ಹಾಗೆ ಕಾಣುತ್ತಿದೆ. ಕದ್ದುಮುಚ್ಚಿ ಕುತಂತ್ರ ನಡೆಸುತ್ತಿರುವ ಈ ದ್ರೋಹಿಗಳನ್ನು ಬಯಲಿಗೆಳೆಯುವ ಕಾರ್ಯವನ್ನು ಕರ್ನಾಟಕ ರಕ್ಷಣಾ ವೇದಿಕೆ ಮಾಡಲಿದೆ.

ರೈಲ್ವೆ ಇಲಾಖೆಯಲ್ಲಿರುವ ಉತ್ತರ ಭಾರತೀಯ ಅಧಿಕಾರಿಗಳು ಪದೇಪದೇ ಕನ್ನಡಿಗರಿಗೆ ಅನ್ಯಾಯದೆಸಗುತ್ತ, ನಮ್ಮ ತಾಳ್ಮೆ ಪರೀಕ್ಷೆ ಮಾಡುತ್ತಿದ್ದಾರೆ. ಕನ್ನಡಿಗರು ಇಂಥ ಅನ್ಯಾಯಗಳ ವಿರುದ್ಧ ಸಿಡಿದ್ದೆದ್ದರೆ ಏನಾಗುತ್ತದೆ ಎಂಬುದು ಇವರಿಗೆ ಅರಿವಿಲ್ಲವೇ? ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳಾದರೆ ಅದಕ್ಕೆ ಈ ಬೇಜವಾಬ್ದಾರಿಯುತ ಅಧಿಕಾರಿಗಳೇ ಕಾರಣರಾಗುತ್ತಾರೆ. ಕರ್ನಾಟಕ ರಕ್ಷಣಾ ವೇದಿಕೆ ಯಾವುದೇ ಕಾರಣಕ್ಕೂ ಈ ಪರೀಕ್ಷೆಗಳನ್ನು ನಡೆಯಲು ಬಿಡುವುದಿಲ್ಲ. ಯಾವುದೇ ಬೆಲೆ ತೆತ್ತಾದರೂ ಕನ್ನಡಿಗರ ಹಕ್ಕುಗಳನ್ನು ರಕ್ಷಿಸುವ ಕಾರ್ಯವನ್ನು ನಾವು ಮಾಡುತ್ತೇವೆ ಎಂದು ಹೇಳಿದರು. 

ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ವಿಭಾಗೀಯ ಕಚೇರಿ ಮುಂದೆ ನಡೆಸಲು ಉದ್ದೇಶಿಸಿರುವ ಪ್ರತಿಭಟನೆ ನಿಗದಿಯಂತೆ ನಡೆಯುತ್ತದೆ. ಪ್ರತಿಭಟನೆ ನಡೆಸದಂತೆ ಕಾಟನ್‌ ಪೇಟೆ ಪೊಲೀಸರು ನೀಡಿರುವ ನೋಟಿಸ್‌ ಗೆ ನಾವು ಅಂಜುವುದಿಲ್ಲ. ಇನ್ನೂ ನೂರು ನೋಟೀಸ್‌ ಕೊಟ್ಟರೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಕನ್ನಡದ ಮಕ್ಕಳ ಭವಿಷ್ಯ ಆತಂಕದಲ್ಲಿರುವಾಗ ನಾವು ಸುಮ್ಮನೆ ಕೂರುವುದಿಲ್ಲ. ನಮ್ಮನ್ನು ಜೈಲಿಗೆ ಕಳುಹಿಸಿದರೂ ಚಿಂತೆಯಿಲ್ಲ. ಈ ಬಾರಿ ಜೈಲಿನಲ್ಲೇ ಯುಗಾದಿ ಆಚರಿಸುತ್ತೇವೆ ಎಂದರು.

ನಾಳೆ ಪರೀಕ್ಷೆ ನಿಗದಿಯಾಗಿರುವ ಹುಬ್ಬಳ್ಳಿ ಮತ್ತು ಬೆಂಗಳೂರು ಪರೀಕ್ಷಾ ಕೇಂದ್ರಗಳ ಬಳಿ ಕರ್ನಾಟಕ ರಕ್ಷಣಾ ವೇದಿಕೆ ಸಾವಿರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ನಂತರ ಆಗುವ ಎಲ್ಲ ಅನಾಹುತಗಳಿಗೆ ರೈಲ್ವೆ ಇಲಾಖೆಯೇ ಹೊಣೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ನಮ್ಮನ್ನು ದೂರಬೇಡಿ ಎಂದು ಹೇಳಿದರು.

More articles

Latest article

Most read