ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆಯುತ್ತಿದ್ದ ಪದೋನ್ನತಿ ಪರೀಕ್ಷೆಗಳು ರದ್ದಾದ ಬೆನ್ನಲ್ಲೇ ಬೆಂಗಳೂರು ಮೈಸೂರುಗಳಲ್ಲಿ ನಡೆಯುತ್ತಿದ್ದ ಪರೀಕ್ಷೆಗಳೂ ರದ್ದುಗೊಂಡಿವೆ. ಪರೀಕ್ಷೆ ರದ್ದತಿಯನ್ನು ರೈಲ್ವೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಸ್ವತಃ ಕರವೇ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡರಿಗೆ ಪರೀಕ್ಷೆ ರದ್ದತಿಯನ್ನು ರೈಲ್ವೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಬೆಂಗಳೂರಲ್ಲಿ ಕಿಚ್ಚು ಹೊತ್ತಿಸಿದ ಕರವೇ ಹೋರಾಟ ಪೊಲೀಸರ ನೋಟಿಸ್ ಗೆ ಕ್ಯಾರೇ ಅನ್ನದ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿ.ಸಣ್ಣೀರಪ್ಪ, ಧರ್ಮರಾಜ ಗೌಡ, ಸಹನಾ ನೇತೃತ್ವದಲ್ಲಿ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

