ಇರಾನ್ : ಮೂರು ದೇಶಗಳ ನಡುವಿನ ಯುದ್ಧವು ಸದ್ಯ 23ನೇ ದಿನಕ್ಕೆ ಕಾಲಿಟ್ಟಿದ್ದು, ಮಿಲಿಟರಿ ಸಂಘರ್ಷ ತಣ್ಣಗಾಗುವ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಭಾನುವಾರ ಮತ್ತೆ ಇರಾನ್ಗೆ ಎಚ್ಚರಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ತೆರೆಯಲು ವಿಫಲವಾದರೆ, ಇರಾನ್‌ನ ವಿದ್ಯುತ್ ಸ್ಥಾವರಗಳನ್ನು ಸಂಪೂರ್ಣವಾಗಿ ನಾಶಪಡಿಸುತ್ತೇವೆ ಎಂದು ಹೇಳಿದ್ದಾರೆ.
ವಿಶ್ವದ ತೈಲ ಪೂರೈಕೆಯ ಐದನೇ ಒಂದು ಭಾಗದಷ್ಟು ತೈಲವನ್ನು ಸಾಗಿಸುವ ಹಾರ್ಮುಜ್ ಜಲಸಂಧಿಯನ್ನು ಹಡಗು ಸಂಚಾರಕ್ಕಾಗಿ ಇರಾನ್ ಮತ್ತೆ ತೆರೆಯಬೇಕು. ಇಲ್ಲದಿದ್ದರೆ, ಇರಾನ್‌ನ ವಿದ್ಯುತ್ ಸ್ಥಾವರಗಳನ್ನು ನಾಶಪಡಿಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದಾರೆ.
ಟ್ರಂಪ್ ಅವರ ಎಚ್ಚರಿಕೆಗೆ ಪ್ರತಿಕ್ರಿಯಿಸಿರುವ ಇರಾನ್ ಸೇನೆಯು, ಈ ಪ್ರದೇಶದಲ್ಲಿ ಅಮೆರಿಕಕ್ಕೆ ಸೇರಿದ ಎಲ್ಲಾ ಇಂಧನ, ತಂತ್ರಜ್ಞಾನ ಮತ್ತು ಉಪ್ಪುನೀರಿನ ನಿರ್ಮೂಲನ ಮೂಲಸೌಕರ್ಯಗಳನ್ನು ಟಾರ್ಗೆಟ್ ಮಾಡಿ ಹೊಡೆಯುವುದಾಗಿ ಬೆದರಿಕೆ ಹಾಕಿದೆ.
ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ದೇಶದಲ್ಲಿ ಕಚ್ಚಾ ತೈಲ, ಎಲ್ಪಿಜಿ ಸೇರಿದಂತೆ ನಾನಾ ಬಿಕ್ಕಟ್ಟು ಎದುರಾಗಿದೆ. ವಿಶ್ವದ ಪ್ರಮುಖ ಸರಕು ಸಾಗಾಣಿಕಾ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಇರಾನ್ ನಿಯಂತ್ರಣಕ್ಕೆ ಪಡೆದ ಪರಿಣಾಮ, ಹಲವು ತೈಲ ಟ್ಯಾಂಕರ್ಗಳು ಸಮುದ್ರದಲ್ಲಿಯೇ ನಿಂತಿವೆ.
ಪರಿಣಾಮ ಕಚ್ಚಾ ತೈಲವು ಬ್ಯಾರೆಲ್‌ಗೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಯುದ್ದ ಕೊನೆಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲವಾದ್ದರಿಂದ ಇತ್ತೀಚೆಗೆ ಭಾರತ ಸೇರಿದಂತೆ ಇತರೆ ದೇಶಗಳು ತಾತ್ಕಾಲಿಕವಾಗಿ ರಷ್ಯಾದ ತೈಲ ಖರೀದಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅನುಮತಿಸಿದ್ದರು.
ಹಾರ್ಮುಜ್ ಜಲಸಂಧಿ ತೆರೆಯಲು ಅಮೆರಿಕ ಖಡಕ್ ಎಚ್ಚರಿಕೆ