Wednesday, March 25, 2026

ರಾಹುಕಾಲ ನೋಡಿಕೊಂಡು ಬಜೆಟ್‌ ಮಂಡಿಸಿದ್ದು ನಿಜ : ಸಿಎಂ ಸಿದ್ದರಾಮಯ್ಯ

ಯುಗಾಗಿ, ಶಿವರಾತ್ರಿ ದಿನ ಮಾಂಸ ತಿಂತೀನಿ... ನನ್ನಿಷ್ಟ

ಬೆಂಗಳೂರು : ರಾಹುಕಾಲ, ಗುಳಿಕ ಕಾಲ, ಯಮಗಂಡ ಕಾಲ ನೋಡಲ್ಲ,  ಯುಗಾದಿ ಮತ್ತು ಶಿವರಾತ್ರಿ ಹಬ್ಬದಂದು ಮಾಂಸ ತಿಂದಿದ್ದೀನಿ. ಹೀಗೆಂದು ಹೇಳಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ.

ರಾಹುಕಾಲ ತಪ್ಪಿಸಿ ಈ ಬಾರಿ ಬಜೆಟ್‌ ಮಂಡಿಸಿದ್ದೀರಿ ಎಂಬ ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆಗೆ ಸದನದಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು ಹೀಗೆ. 

ಅಶೋಕ್‌ ಅವರು, ರಾಹುಕಾಲ ನೋಡಿಕೊಂಡು ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದ ಬಗ್ಗೆ ಉಲ್ಲೇಖಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಹೌದು, ‘ರಾಹುಕಾಲ ನೋಡಿಕೊಂಡು ಬಜೆಟ್ ಮಂಡಿಸಿದ್ದು ನಿಜ ಎಂದರು.

ರಾಹುಕಾಲ ನೋಡಿಕೊಂಡು ಬಜೆಟ್ ಮಂಡಿಸಿದ್ದಾರೆ ಎಂಬುದು ನಿಜ. ಮನೆಯವರು, ಅಧಿಕಾರಿಗಳ ಮಾತು ಕೇಳಬೇಕು ಅಲ್ಲವೇ? ನಿಮ್ಮಂಥವರ ಮಾತು ಕೇಳಬೇಕು ಅಲ್ಲವೇ ಎಂದು ಸಿದ್ದರಾಮಯ್ಯ ಹೇಳಿದರು. ಇದೇ ವೇಳೆ ಮಧ್ಯ ಪ್ರವೇಶ ಮಾಡಿದ ಅಶೋಕ್, ಅವತ್ತಿನ ಪರಿಸ್ಥಿತಿ ಬೇರೆ ಇತ್ತು. ಇಂದಿನ ಪರಿಸ್ಥಿತಿ ಬೇರೆ ಇದೆ. ಮುಂದೆಯೂ ನೀವು ಬಜೆಟ್ ಮಂಡನೆ ಮಾಡಬೇಕು ಅಲ್ಲವೇ? ಅದಕ್ಕಾಗಿ ಈ ಬಾರಿ ಕಾಲ ನೋಡಿದ್ದೀರಿ. ಕಾಲಾಯ ತಸ್ಮೈ ನಮ: ಎಂದರು.

ಅಶೋಕ್ ಮಾತಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ರಾಹುಕಾಲ, ಯಮಗಂಡಕಾಲ ಮತ್ತು ಗುಳಿಕಕಾಲ ಇದನ್ನೆಲ್ಲಾ ನಾನು ನಂಬಲ್ಲ. ಅಧಿಕಾರಿಗಳ ಹಾಗೂ ಮನೆಯವರ ಮಾತು ಕೇಳಿ ಸಮಯ ನೋಡಿದ್ದೇನೆ ಅಷ್ಟೇ. ನಾನು ಶಿವರಾತ್ರಿ ಹಾಗೂ ಯುಗಾದಿಯಲ್ಲಿ ಮಾಂಸ ತಿಂದಿದ್ದೇನೆ. ನೀವು ತಿಂದಿದ್ದೀರಾ ಎಂದು ಪ್ರಶ್ನಿಸಿದರು.

ಸಾಮಾನ್ಯವಾಗಿ ಬಜೆಟ್ ಮಂಡನೆ ಬೆಳಗ್ಗೆ 10 ಗಂಟೆ ಅಥವಾ 11 ಗಂಟೆಗೆ ಮಾಡುತ್ತಾರೆ. ಆದರೆ ಈ ಬಾರಿ 10.15ಕ್ಕೆ ಸಿದ್ದರಾಮಯ್ಯರ ಅಧಿಕಾರಿಗಳು ಬಜೆಟ್ ಮಂಡನೆ ಸಮಯ ನಿಗದಿ ಮಾಡಿಕೊಂಡಿದ್ದರು. 

More articles

Latest article

Most read