ಸಿಎಂ ಸಿದ್ದರಾಮಯ್ಯರನ್ನು ಅಭಿನಂದಿಸಿದ ಟಿ.ಎ.ನಾರಾಯಣಗೌಡ

ಬೆಂಗಳೂರು : ಹಿಂದಿ ಭಾಷೆಯ ಪರೀಕ್ಷೆಯಲ್ಲಿ ಅಂಕ ಪರಿಗಣನೆಗೆ ತೆಗೆದುಕೊಳ್ಳದಿರುವ ನಿರ್ಧಾರ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಕರವೇ ನಿಯೋಗದೊಂದಿಗೆ ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಭೇಟಿಯಾಗಿ ಅಭಿನಂದಿಸಿದರು.
ದಶಕಗಳ ಬೇಡಿಕೆಯನ್ನು ಈಡೇರಿಸಿದ ಸಿದ್ಧರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಿದ ಗೌಡರು, ಕನ್ನಡದ ಮಕ್ಕಳಿಗೆ ಈ ನಿರ್ಧಾರದಿಂದ ಶಾಪವಿಮೋಚನೆ ಆದಂತಾಗಿದೆ ಎಂದು ಹೇಳಿದರು.
ಕರವೇ ನಿಯೋಗದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ, ರಾಜ್ಯ ಉಪಾಧ್ಯಕ್ಷ ಅಬ್ಬಿಗೆರೆ ವಿನೋದ್‌, ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್‌ ಜಾವಗಲ್‌, ರಾಜ್ಯ ಪ್ರಧಾನ ಸಂಚಾಲಕ ಮೋಹನ್‌ ಗೌಡ, ಬೆಂಗಳೂರು ನಗರ ಘಟಕದ ಅಧ್ಯಕ್ಷ ಧರ್ಮರಾಜ್‌ ಗೌಡ, ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷೆ ಶ್ವೇತಾ ಮೋಹನ್‌ ಗೌಡ ಉಪಸ್ಥಿತರಿದ್ದರು.

More articles

Latest article

Most read