ಬೆಂಗಳೂರು : ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್ ಮಲ್ಲೂ ಎಂಬ ವ್ಯಕ್ತಿ ತಮ್ಮದೇ ಕಚೇರಿಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ್ದು, ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತೆ ಮಹಿಳೆ ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್ ಮಲ್ಲೂ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ. ಉಪ್ಪಾರ ಪೇಟೆ ಪೊಲೀಸರು ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ನಗರದ ಗಾಂಧೀನಗರದಲ್ಲಿರುವ ಕರ್ನಾಟಕ ನರ್ಸಿಂಗ್ ಕೌನ್ಸಿಲ್ ಕಚೇರಿಯಲ್ಲಿ ಈ ಕೃತ್ಯ ನಡೆದಿದೆ. ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಸಂತ್ರಸ್ತೆ. ಆದರೆ ಕೆಲಸದ ನೆಪದಲ್ಲಿ ಸಂತ್ರಸ್ತೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಸಂತ್ರಸ್ತೆ ಮಹಿಳೆಯ ಹೇಳಿಕೆಯಂತೆ, ಆರೋಪಿ ಮಲ್ಲು ಸಂತ್ರಸ್ತೆ ಮಹಿಳೆಯ ಬಳಿ ಬಂದು ಬಲವಂತವಾಗಿ ಅಂಗಾಂಗ ಮುಟ್ಟಿ ಎಳೆದಾಡಿದ್ದಾನೆ. ಈ ವೇಳೆ ಸಂತ್ರಸ್ತೆ ವಿರೋಧ ವ್ಯಕ್ತಪಡಿಸಿದರೂ ಸಂತ್ರಸ್ತೆಯನ್ನು ಎಳೆದಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಬಲವಂತವಾಗಿ ಮೈ ಮುಟ್ಟುತ್ತಿದ್ದ ಮಲ್ಲು : ಆರೋಪಿ ಮಲ್ಲು ಕಚೇರಿಯಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೆ ಸಾರ್ವಜನಿಕ ಸ್ಥಳದಲ್ಲೂ ಸಂತ್ರಸ್ತೆಯ ಮೈ ಮುಟ್ಟಿ ಬಲವಂತವಾಗಿ ಎಳೆದಾಡಿದ್ದಲ್ಲದೆ ಕಾರೊಳಗೆ ಹತ್ತಿಸಲು ಯತ್ನಿಸಿದ್ದಾನೆ. ಇದಕ್ಕೆ ಮಹಿಳೆ ವಿರೋಧ ವ್ಯಕ್ತಪಡಿಸಿದ್ದಾರೆ. ಇಷ್ಟಕ್ಕೂ ಬಿಡದ ಆರೋಪಿ ಮಲ್ಲು, ಈ ವೇಳೆ ಆಕೆಯನ್ನು ಬಲವಂತವಾಗಿ ತಬ್ಬಿಕೊಂಡು, ಮುತ್ತು ಕೊಡಲು ಯತ್ನಿಸಿ ವಿಕೃತಿ ಮೆರೆದಿದ್ದಾನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಬಂಧನ : ರಿಜಿಸ್ಟ್ರಾರ್ ಮಲ್ಲು ವಿರುದ್ಧ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು. ಬಳಿಕ ಆರೋಪಿ ತಲೆಮಡೆಸಿಕೊಂಡಿದ್ದ. ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

