ಗ್ಯಾಸ್ ಸಿಲಿಂಡರ್ ಕೊರತೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ವಿಜಯ್ ವಾಗ್ದಾಳಿ

ತಮಿಳುನಾಡು: ಚುನಾವಣಾ ಪ್ರಚಾರದ ಭಾಗವಾಗಿ ಕೊಯಮತ್ತೂರಿನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ವಿಜಯ್. ಕೊಯಮತ್ತೂರು ಕೈಗಾರಿಕಾ ಕೇಂದ್ರವಾಗಿರುವುದರಿಂದ ಅಲ್ಲಿ ಗ್ಯಾಸ್ ಸಿಲಿಂಡರ್ ಕೊರತೆಯಿಂದ ಹೋಟೆಲ್ ಮತ್ತು ಸಣ್ಣ ಉದ್ದಿಮೆಗಳಿಗೆ ಆಗುತ್ತಿರುವ ತೊಂದರೆಯನ್ನು ಮುಂದಿಟ್ಟುಕೊಂಡು ಅವರು ಸರ್ಕಾರಗಳ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಉಂಟಾಗಿರುವ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಕೊರತೆಯ ಬಗ್ಗೆ ತಮಿಳಗ ವೆಟ್ರಿ ಕಳಗಂ (TVK) ಮುಖ್ಯಸ್ಥ ವಿಜಯ್ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ತೀವ್ರವಾಗಿ ಟೀಕಿಸಿದ್ದಾರೆ. ಸರಿಯಾದ ಮುನ್ನೆಚ್ಚರಿಕೆ ಮತ್ತು ಯೋಜನೆ ಇಲ್ಲದ ಕಾರಣ ಈ ಬಿಕ್ಕಟ್ಟು ಸೃಷ್ಟಿಯಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ಯಾಸ್ ಸಿಲಿಂಡರ್ ಕೊರತೆಯನ್ನು ತಡೆಯಲು ಎರಡೂ ಸರ್ಕಾರಗಳು ವಿಫಲವಾಗಿವೆ. ಮುಂಚಿತವಾಗಿ ನಿಯಂತ್ರಣ ಕ್ರಮಗಳನ್ನು ಕೈಗೊಂಡಿದ್ದರೆ ಹೋಟೆಲ್ ಮತ್ತು ಟೀ ಅಂಗಡಿಗಳು ಮುಚ್ಚುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ವಿಜಯ್ ಹೇಳಿದರು.”ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ತಮ್ಮ ಕುಟುಂಬದ ಮೇಲೆ ರೈಡ್ ಆದಾಗ ಅಥವಾ ಮನೆಯಲ್ಲಿ ಸಮಸ್ಯೆ ಉಂಟಾದಾಗ ತಕ್ಷಣ ದೆಹಲಿಗೆ ಓಡುತ್ತಾರೆ. ಆದರೆ, ಜನಸಾಮಾನ್ಯರನ್ನು ಕಾಡುತ್ತಿರುವ ಈ ಗ್ಯಾಸ್ ಬಿಕ್ಕಟ್ಟನ್ನು ಬಗೆಹರಿಸಲು ಅವರು ಯಾಕೆ ದೆಹಲಿಗೆ ಹೋಗಿ ಕೇಂದ್ರದ ಮೇಲೆ ಒತ್ತಡ ಹೇರುತ್ತಿಲ್ಲ?” ಎಂದು ವಿಜಯ್ ಪ್ರಶ್ನಿಸಿದರು.

ಅಡುಗೆ ಅನಿಲದ ಕೊರತೆಯಿಂದಾಗಿ ಹೋಟೆಲ್ ಉದ್ಯಮಕ್ಕೆ ಭಾರಿ ನಷ್ಟ ಉಂಟಾಗಿದೆ ಮತ್ತು ಸಾಮಾನ್ಯ ಜನರ ಜೀವನ ಕಷ್ಟಕರವಾಗಿದೆ. ಇದಕ್ಕೆ ಕೇಂದ್ರದ ಬಿಜೆಪಿ ಮತ್ತು ರಾಜ್ಯದ ಡಿಎಂಕೆ ಎರಡೂ ಪಕ್ಷಗಳೇ ಹೊಣೆ ಎಂದು ಅವರು ದೂರಿದರು. ಬಿಜೆಪಿ ಮತ್ತು ಡಿಎಂಕೆ ಎರಡೂ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಇವರನ್ನು ನಂಬಬೇಡಿ, ಮುಂಬರುವ ಚುನಾವಣೆಯಲ್ಲಿ ಈ ಪಕ್ಷಗಳನ್ನು ತಿರಸ್ಕರಿಸಿ ಟಿವಿ ಕೆ (TVK) ಪಕ್ಷಕ್ಕೆ ಒಂದು ಅವಕಾಶ ನೀಡಿ ಎಂದು ವಿಜಯ್ ಜನರಲ್ಲಿ ಮನವಿ ಮಾಡಿದರು.

ಸಭೆಯಲ್ಲಿ ಸಿನೆಮಾ ಧಾಟಿಯಲ್ಲಿ ಮಾತನಾಡಿದ ವಿಜಯ್, “ಈ ಬಿಕ್ಕಟ್ಟಿನ ಬಗ್ಗೆ ಸ್ಟಾಲಿನ್ ಸರ್ ಅವರನ್ನು ಕೇಳಿದರೆ, ತಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂದು ಹೇಳುತ್ತಾರೆ. ಆದರೆ ಮನೆಯಲ್ಲಿ ಸಮಸ್ಯೆ ಎದುರಾದಾಗ ಮಾತ್ರ ಅವರಿಗೆ ದೆಹಲಿ ನೆನಪಾಗುತ್ತದೆ” ಎಂದು ಲೇವಡಿ ಮಾಡಿದರು. ಈ ಮಾತಿಗೆ ನೆರೆದಿದ್ದ ಜನರಿಂದ ಭಾರಿ ಚಪ್ಪಾಳೆ ಮತ್ತು ಹರ್ಷೋದ್ಗಾರ ವ್ಯಕ್ತವಾಯಿತು.

More articles

Latest article

Most read