ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು :  ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಮಧ್ಯಾಹ್ನದೊಳಗೆ karresults.nic.in ನಲ್ಲಿ ಲಭ್ಯವಿದೆ. ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಇಂದು ಸಂಜೆ 6ಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ  ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಅಧಿಕೃತವಾಗಿ  ಪ್ರಕಟಿಸಲಿದ್ದಾರೆ. 

ಅಧಿಕೃತ ವೆಬ್‌ಸೈಟ್‌ https://karresults.nic.in ಲಿಂಕ್ ಮೂಲಕ ರಿಸಲ್ಟ್ ವೀಕ್ಷಿಸಬಹುದಾಗಿದೆ. ಲಿಂಕ್ ಮೇಲೆ ಕ್ಲಿಕ್ ಮಾಡಿ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ, ‘Submit’ ಬಟನ್ ಒತ್ತಿದ ತಕ್ಷಣ ಅಂಕಪಟ್ಟಿ ಪರದೆ ಓಪನ್ ಆಗಲಿದೆ.

ಸುಮಾರು 7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಉನ್ನತ ವ್ಯಾಸಂಗದ ಕನಸಿನಲ್ಲಿದ್ದಾರೆ. ಫಲಿತಾಂಶದ ಅಂಕಗಳ ಬಗ್ಗೆ ಅಸಮಾಧಾನವಿದ್ದರೆ, ಮರುಮೌಲ್ಯಮಾಪನ ಅಥವಾ ಉತ್ತರ ಪತ್ರಿಕೆಯ ಸ್ಕ್ಯಾನ್ಡ್ ಪ್ರತಿಯನ್ನು ಪಡೆಯಲು ಅರ್ಜಿ ಸಲ್ಲಿಸಬಹುದು.

ಹೊಸ ಮೂರು ಪರೀಕ್ಷೆಗಳ ವ್ಯವಸ್ಥೆಯಡಿ  1, 2,  3 ಪರೀಕ್ಷೆಗಳಲ್ಲಿ ಅಂಕ ಸುಧಾರಿಸಿಕೊಳ್ಳಲು ಹಾಗೂ ಅನುತ್ತೀರ್ಣರಾದ ವಿಷಯಗಳನ್ನು ಪಾಸು ಮಾಡಲು ಉತ್ತಮ ಅವಕಾಶವಿದೆ. 

More articles

Latest article

Most read