ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹಮದ್ ಔಟ್

ಬೆಂಗಳೂರು : ದಾವಣಗೆರೆ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿದ ಕಾರಣಕ್ಕೆ ಉಂಟಾಗಿದ್ದ ಅಸಮಾಧನಕ್ಕೆ ಇದೀಗ ಮತ್ತೊಂದು ತಲೆದಂಡವಾಗಿದೆ. ನಸೀರ್ ಅಹಮದ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ.

ದಾವಣಗೆರೆ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪ ನಸೀರ್ ಅಹಮದ್ ಅವರ ಮೇಲಿದ್ದು. ಈ ಕಾರಣದಿಂದಾಗಿ ಅವರನ್ನು ಮುಖ್ಯಮಂತ್ರಿಗಳ ಆಪ್ತ ರಾಜಕೀಯ ಕಾರ್ಯದರ್ಶಿಯ ಹುದ್ದೆಯಿಂದ ತೆಗೆದುಹಾಕಲಾಗಿದೆ.

ನಸೀರ್ ಅಹಮದ್ ಅವರಿಗೆ ಬಾಗಲಕೋಟೆ ಚುನಾವಣೆ ಜವಾಬ್ದಾರಿ ನೀಡಲಾಗಿತ್ತು : ಈ ಬೆಳವಣಿಗೆಯ ಕುರಿತು ಪ್ರತಿಕ್ರಿಯಿಸಿರುವ ಸಚಿವ ಜಮೀರ್ ಅಹಮದ್, ನಸೀರ್ ಅಹಮದ್ ಅವರು ಬಾಗಲಕೋಟೆ ಚುನಾವಣಾ ಜವಾಬ್ದಾರಿಯನ್ನು ಹೊತ್ತಿದ್ದರು ಎಂದು ಸ್ಪಷ್ಟಪಡಿಸಿದ್ದಾರೆ. ” ಮುಖ್ಯಮಂತ್ರಿಗಳೇ ನಸೀರ್ ಅಹಮದ್ ಅವರಿಗೆ ಬಾಗಲಕೋಟೆಯಲ್ಲಿ ಇರಲು ಸೂಚಿಸಿದ್ದರು. ದಾವಣಗೆರೆಗೆ ಬಂದು ಹೋಗುವ ಕುರಿತು ನಸೀರ್ ಅಹಮದ್ ಕೇಳಿಕೊಂಡಾಗ, ಬಾಗಲಕೋಟೆಯಲ್ಲಿಯೇ ಉಳಿದು ಕೆಲಸ ಮಾಡಲು ಸಿಎಂ ಸಿದ್ದರಾಮಯ್ಯನವರು ಸೂಚಿಸಿದ್ದರು, ಮುಖ್ಯಮಂತ್ರಿಗಳ ಸೂಚನೆಯಂತೆ ನಸೀರ್ ಅಹಮದ್ ಅವರು ಬಾಗಲಕೋಟೆಯಲ್ಲಿ 10 ದಿನಗಳ ಕಾಲ ಕಾರ್ಯ ನಿರ್ವಹಿಸಿದ್ದರು” ಎಂದು ಜಮೀರ್ ಅಹಮದ್ ಹೇಳಿದ್ದಾರೆ.

ಇನ್ನು ಕಳೆದ ವಾರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮತ್ತು ಎಂಎಲ್‌ಸಿ ಅಬ್ದುಲ್ ಜಬ್ಬಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಈ ರಾಜಕೀಯ ಬಿಕ್ಕಟ್ಟಿನ ಮುಂದುವರಿದ ಭಾಗವಾಗಿ ಮುಖ್ಯಮಂತ್ರಿಗಳ ಆಪ್ತ ರಾಜಕೀಯ ಕಾರ್ಯದರ್ಶಿಯ ತಲೆದಂಡವಾಗಿದೆ.

More articles

Latest article

Most read