ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು : ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಿ ಸೆಷನ್‌ ಕೋರ್ಟ್‌ ಆದೇಶ ಹೊರಡಿಸಿದೆ. ಅಲ್ಲದೇ ಉಳಿದ 16 ಆರೋಪಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಯೋಗಿಶ್‌ ಗೌಡ ಮಕ್ಕಳಿಗೆ 16 ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶಿಸಿದೆ.
ಒಬ್ಬ ಆರೋಪಿ ಚನ್ನಕೇಶವ ಟಿಂಗರಿಕರಿಗೆ 7 ವರ್ಷ 30 ಸಾವಿರ ದಂಡ ವಿಧಿಸಲಾಗಿದೆ.

19 ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿತ್ತು. ಎ1 ಬಸವರಾಜ ಮುತ್ತಗಿ ಮಾಫಿಸಾಕ್ಷಿಯಾಗಿ ಹೇಳಿಕೆ ನೀಡಿದ್ದಾರೆ.  ಎ17 ಶಿವಾನಂದ ಮಾಫಿ ಸಾಕ್ಷಿಯಾದ ಬಳಿಕವೂ ಪ್ರತಿಕೂಲ ಹೇಳಿಕೆ ನೀಡಿದ್ದಾರೆ. ಹೀಗಾಗಿ ಮತ್ತೆ ಎ17 ಆರೋಪಿಯನ್ನಾಗಿಸುವಂತೆ ಸಿಬಿಐ ಅರ್ಜಿ ಸಲ್ಲಿಸಿದೆ. ಇನ್ನು ಪ್ರಕರಣದ A 20 ವಾಸುದೇವ ನಿಲೇಕಣಿ, A21 ಸೋಮಶೇಖರ ಅವರನ್ನ ಬಿಡುಗಡೆಗೆ ಕೋರ್ಟ್ ಆದೇಶಿಸಿತ್ತು. ಎ 19 ಚನ್ನಕೇಶವ ಟಿಂಗರಿಕರ್​​ ಸಾಕ್ಷಿಗಳನ್ನು ತಿರುಚಿ, ಇರುವ ಸಾಕ್ಷಿ ನಾಶಕ್ಕಾಗಿ 7 ವರ್ಷ ಶಿಕ್ಷೆ ವಿಧಿಸಲಾಗಿದೆ. 

ಅಪರಾಧಿಗಳಿಗೆ ಐಪಿಸಿ ಸೆಕ್ಷನ್ 302(ಕೊಲೆ) ಅಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು ಸೆಕ್ಷನ್ 120(ಬಿ) (ಕೊಲೆಗೆ ಪಿತೂರಿ) ಅಡಿಯಲ್ಲಿ 7 ವರ್ಷ ಕಠಿಣ ಶಿಕ್ಷೆ ವಿಧಿಸಲಾಗಿದೆ. ಎರಡೂ ಶಿಕ್ಷೆಗಳನ್ನು ಏಕಕಾಲಕ್ಕೆ ಅನುಭವಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಕರಣ ಸಂಬಂಧ ಸಿಬಿಐ ತನಿಖೆ ನಡೆಸಿ ಸಲ್ಲಿಸಿದ್ದ ಆರೋಪಪಟ್ಟಿಯನ್ನು ಪರಿಗಣಿಸಿದ್ದ ನ್ಯಾಯಾಲಯ ಬುಧವಾರ ಎಲ್ಲ ಆರೋಪಿಗಳನ್ನು ‘ದೋಷಿಗಳು’ ಎಂದು ಪ್ರಕಟಿಸಿತ್ತು

ಯೋಗೀಶ್‌ ಗೌಡ ಹತ್ಯೆ ಹಿನ್ನೆಲೆ
2016ರ  ಜೂನ್ 15ರಂದು ಬೆಳಿಗ್ಗೆ ಯೋಗೀಶ್ ಗೌಡ  ಧಾರವಾಡದ ಸಪ್ತಾಪುರದಲ್ಲಿರುವ ತಮ್ಮ ಉದಯ್ ಜಿಮ್‌ಗೆ ಬಂದು ಪೇಪರ್‌  ಓದುತ್ತಿರುವಾಗ  ಬೈಕ್‌ನಲ್ಲಿ ಬಂದ ಐವರು ದುಷ್ಕರ್ಮಿಗಳು
ಅವರ ಮುಖಕ್ಕೆ ಖಾರದ ಪುಡಿ ಎರಚಿದರು. ಕಣ್ಣು ಕಾಣದಂತೆ ಮಾಡಿ, ತಕ್ಷಣವೇ ಲಾಂಗ್ ಮತ್ತು ಮಚ್ಚುಗಳಿಂದ ಅವರ ಮೇಲೆ ಮುಗಿಬಿದ್ದರು. ಯೋಗೀಶ್ ಗೌಡ ಅವರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಹಂತಕರು ಬಿಡಲಿಲ್ಲ.

ಜಿಮ್‌ನ ಒಳಗೇ ಹಂತಕರು ಯೋಗೀಶ್ ಗೌಡ ಅವರನ್ನು ಅಟ್ಟಾಡಿಸಿ ಕತ್ತರಿಸಿದರು. ಕುತ್ತಿಗೆ ಮತ್ತು ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಯೋಗೀಶ್ ಗೌಡ ಅವರು ಸ್ಥಳದಲ್ಲೇ ರಕ್ತದ ಮಡುವಿನಲ್ಲಿ ಬಿದ್ದು ಪ್ರಾಣ ಬಿಟ್ಟರು. ಹತ್ಯೆ ಮಾಡಿದ ನಂತರ ಹಂತಕರು ಸಲೀಸಾಗಿ ಬೈಕ್ ಏರಿ ಅಲ್ಲಿಂದ ಪರಾರಿಯಾಗಿದ್ದರು.
ಹತ್ಯೆ ಬಳಿಕ ಆರು ಮಂದಿಯನ್ನು ಬಂಧಿಸಲಾಗಿತ್ತು. ಆದರೆ, ಕುಟುಂಬಸ್ಥರು ಅದನ್ನು ಒಪ್ಪದೇ ಅಂದು ಸಚಿವರಾಗಿದ್ದ ವಿನಯ್‌ ಕುಲಕರ್ಣಿ ವಿರುದ್ಧ ಆರೋಪ ಮಾಡಿದ್ದರು. ಬಳಿಕ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಾಯಿತು.
ಸಿಬಿಐ ತನಿಖೆ ಶುರು ಮಾಡಿದ ಮೇಲೆ ಅಸಲಿ ಸತ್ಯಗಳು ಹೊರಬರತೊಡಗಿದವು. ಬಂಧಿತರಾಗಿದ್ದವರು ನಕಲಿ ಆರೋಪಿಗಳು ಮತ್ತು ಹಣದ ಆಸೆಗಾಗಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡಿದ್ದರು ಎನ್ನಲಾಗಿದೆ.   ಹತ್ಯೆಯ ಹಿಂದೆ ರಾಜಕೀಯ ದ್ವೇಷ ಇರುವುದು ತಿಳಿದುಬಂದಿತು. ಅಂತಿಮವಾಗಿ ವಿನಯ್ ಕುಲಕರ್ಣಿ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿ ಎಂದು ಹೆಸರಿಸಿದ ಸಿಬಿಐ, ಅವರನ್ನು ಬಂಧಿಸಿ ಜೈಲಿಗೂ ಕಳುಹಿಸಿತು.

More articles

Latest article

Most read