ಇತ್ತೀಚೆಗೆ ಅಬಕಾರಿ ನೀತಿ ಹಗರಣದ ಆಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ದಾಖಲಿಸಿದ ದೂರಿನ ವಿಚಾರವಾಗಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರೋಸ್ ಅವೆನ್ಯೂ ನ್ಯಾಯಾಲಯದ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಹಾಗೂ ಬಜೆಟ್ ಅಧಿವೇಶನ ನಡೆಯುತ್ತಿರುವುದರಿಂದ ದೈಹಿಕವಾಗಿ ನ್ಯಾಯಾಲಯದ ಮುಂದೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.
ಅಬಕಾರಿ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯವು ವಿಚಾರಣೆಗೆ ಹಾಜರಾಗುವಂತೆ ಆರನೇ ಬಾರಿಗೆ ಸಮನ್ಸ್ ನೀಡಿತ್ತು ಮತ್ತು ಕೇಜ್ರಿವಾಲ್ ಅವರಿಗೆ ಕೆಳದ ತಿಂಗಳ ಫೆ.19 ರಂದು ಕೇಂದ್ರೀಯ ತನಿಖಾ ಸಂಸ್ಥೆಯ ಎದುರು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು.
ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ಗೆ ಪ್ರತಿಕ್ರಿಯಿಸದೆ ಇರುವುದಕ್ಕೆ ದೆಹಲಿ ಹೈಕೋರ್ಟ್ ಕೇಜ್ರಿವಾಲ್ ಅವರನ್ನು ತನ್ನ ಮುಂದೆ ಫೆ.17 ರಂದು ಹಾಜರಾಗುವಂತೆ ಆದೇಶಿಸಿತು.