ಬೆಂಗಳೂರು ಏ.18 : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಮಧ್ಯಾಹ್ನದ ಈ ಪಂದ್ಯಕ್ಕಾಗಿ ಎರಡೂ ತಂಡಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಇಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಮೈದಾನಕ್ಕೆ ಮರಳಿದ್ದಾರೆ.
ಎರಡೂ ತಂಡಗಳು ಕಳೆದ ಪಂದ್ಯದಲ್ಲಿ ಆಡಿದ್ದ ಅದೇ ತಂಡವನ್ನು ಉಳಿಸಿಕೊಂಡಿವೆ.
ಡೆಲ್ಲಿ ಕ್ಯಾಪಿಟಲ್ಸ್ : ಪತುಮ್ ನಿಸ್ಸಾಂಕ, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಸಮೀರ್ ರಿಜ್ವಿ, ಅಕ್ಷರ್ ಪಟೇಲ್ (ನಾಯಕ), ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಔಕಿಬ್ ನಬಿ ದಾರ್, ಲುಂಗಿ ಎನ್ಗಿಡಿ, ಕುಲದೀಪ್ ಯಾದವ್, ಟಿ. ನಟರಾಜನ್, ಮುಖೇಶ್ ಕುಮಾರ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು : ವಿರಾಟ್ ಕೊಹ್ಲಿ, ಫಿಲಿಪ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸುಯಶ್ ಶರ್ಮಾ, ಜೋಶ್ ಹೇಜಲ್ವುಡ್.

