ಶಾಂತಿ ಮಾತುಕತೆ ನಡೆದರೆ ಟ್ರಂಪ್‌ ಭಾಗವಹಿಸುವ ಸಾಧ್ಯತೆ ಇದೆ

ವಾಷಿಂಗ್ಟನ್‌ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಇರಾನ್ ಜೊತೆಗಿನ ಮುಖಾಮುಖಿ ಶಾಂತಿ ಮಾತುಕತೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್,  ವೈಯಕ್ತಿಕವಾಗಿ ಅಥವಾ ವರ್ಚುವಲ್ ಆಗಿ ಭಾಗವಹಿಸಬಹುದು ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪಾಕಿಸ್ತಾನದ ಮೂಲವನ್ನು ಉಲ್ಲೇಖಿಸಿ  ವರದಿ ಬಂದಿದ್ದು, ಟೆಹ್ರಾನ್ ಮತ್ತು ವಾಷಿಂಗ್ಟನ್ ನಡುವಿನ ಎರಡು ವಾರಗಳ ಕದನ ವಿರಾಮ ಬುಧವಾರ ಮುಕ್ತಾಯಗೊಳ್ಳಲಿದ್ದು, ಅದನ್ನು ವಿಸ್ತರಿಸುವ ಸಾಧ್ಯತೆ ಕಡಿಮೆ ಎಂದು ಟ್ರಂಪ್ ಹೇಳಿದ್ದಾರೆ.
ಇರಾನ್ ಅಮೆರಿಕದ ಜೊತೆ ಶಾಂತಿ ಮಾತುಕತೆಗೆ ಬರುವುದಿಲ್ಲ ಎಂದು ಹೇಳಿದೆ. ಅಮೆರಿಕ ತನ್ನ ಬೇಡಿಕೆಯಿಂದ ಹಿಂದೆ ಸರಿಯುವವರೆಗೂ ಮಾತುಕತೆಯಲ್ಲಿ ಭಾಗಿಯಾಗಲ್ಲ ಎಂದು ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್ ಹೇಳಿದ್ದಾರೆ.
ಮತ್ತೊಂದು ಕಡೆ ವಿದೇಶಾಂಗ ಇಲಾಖೆ ವಕ್ತಾರ ಇಸ್ಮಾಯಿಲ್ ಬರಾಖಿ ನಾವು ಇನ್ನೂ ಮಾತುಕತೆಯಲ್ಲಿ ಭಾಗಿಯಾಗುವ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ಹೇಳಿದ್ದಾರೆ.

ಈ ಮೂಲಕ ಇರಾನ್ ಶಾಂತಿ ಮಾತುಕತೆ ವಿಚಾರದಲ್ಲಿ ಅನೇಕ ಗೊಂದಲಗಳನ್ನು ಮೂಡಿಸುತ್ತಿದೆ. ಕಳೆದ ಬಾರಿ ಇದೇ ರೀತಿ ನಾವು ಬರಲ್ಲ ಎಂದಿದ್ದ ಇರಾನ್ ಕೊನೆಗೂ ಅಬ್ಬಾಸ್ ಅರಗ್ಚಿ ನೇತೃತ್ವದ ನಿಯೋಗವನ್ನು ಕಳುಹಿಸಿಕೊಟ್ಟಿತ್ತು.

ಪಾಕಿಸ್ತಾನದ ಆಂತರಿಕ ಸಚಿವ ಮೊಹ್ಸಿನ್ ನಖ್ವಿ, ಇರಾನ್ ರಾಯಭಾರಿ ರೆಜಾ ಅಮಿರಿ ಮೊಘದ್ದಮ್‌ಗೆ ಇಸ್ಲಾಮಾಬಾದ್‌ನಲ್ಲಿ ಮುಂಬರುವ ಶಾಂತಿ ಮಾತುಕತೆಗಳ ವ್ಯವಸ್ಥೆಗಳ ಕುರಿತು ವಿವರಿಸಿದ್ದಾರೆ. ಸಚಿವಾಲಯದ ಹೇಳಿಕೆಯ ಪ್ರಕಾರ, ಪ್ರಾದೇಶಿಕ ಉದ್ವಿಗ್ನತೆಯನ್ನು ಕಡಿಮೆ ಮಾಡಲು ರಾಜತಾಂತ್ರಿಕತೆಯ ಮೂಲಕ ಶಾಶ್ವತ ಪರಿಹಾರದ ಅಗತ್ಯವನ್ನು ಎರಡೂ ಕಡೆಯವರು ಒತ್ತಿ ಹೇಳಿದರು.

More articles

Latest article

Most read