ತಮಿಳುನಾಡಿನಲ್ಲಿ ಆರಂಭವಾದ ಮತದಾನ

ಚೆನ್ನೈ : ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆಗೆ ಗುರುವಾರ ಮತದಾನ  ಆರಂಭವಾಗಿದೆ. ತಮಿಳುನಾಡಿನಲ್ಲಿ 5.67 ಕೋಟಿಗೂ ಹೆಚ್ಚು ಮತದಾರರು ತಮ್ಮ ಮತ ಚಲಾಯಿಸಲಿದ್ದಾರೆ.

ಚೆನ್ನೈನ ದಕ್ಷಿಣದಲ್ಲಿರುವ ತಿರುವನ್ಮಿಯೂರ್ ಮತಗಟ್ಟೆಯಲ್ಲಿ ನಟ ಅಜಿತ್ ಮೊದಲು ಮತ ಚಲಾಯಿಸಿದರು. ಬೆಳಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಬೇಕಿತ್ತು. ಆದರೆ, ಅಜಿತ್ ಬೆಳಗ್ಗೆ 6.55ಕ್ಕೆ ತಮ್ಮ ಮತದಾನದ ಹಕ್ಕು ಚಲಾಯಿಸಿದರು. ಪಿ. ಚಿದಂವರಂ, ಕಮಲಹಾಸನ್‌  ನಟಿ ಶೃತಿ ಹಾಸನ್‌, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಕುಷ್ಭು ಸುಂದರ್‌ ಸೇರಿದಂತೆ ಹಲವರು ಮತ ಚಲಾಯಿಸಿದರು.

ನಟ ರಜನಿಕಾಂತ್ ಮತ ಚಲಾಯಿಸಿದರು. ಸಾಮಾನ್ಯರಂತೆ ಬಂದ ಅವರು ಚೆನ್ನೈನ ಸ್ಟೆಲ್ಲಾ ಮೇರಿ ಶಾಲೆಯಲ್ಲಿರುವ ಮತಗಟ್ಟೆಯಲ್ಲಿ ವೋಟ್ ಹಾಕಿದರು. ಆ ಬಳಿಕ ಅವರು ಮತ ಹಾಕಿದ ಬೆರಳನ್ನು ಜನರತ್ತ ತೋರಿಸಿದರು. 

ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಚುನಾವಣೆ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಉತ್ತರ ಬಂಗಾಳದ ಎಲ್ಲಾ 152 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಉತ್ತರ ಬಂಗಾಳದ ಮುರ್ಶಿದಾಬಾದ್‌, ಜರ್ಗಾಮ, ಮೇದಿನಿಪುರ, ಬಂಕುರಾ, ಪುರುಲಿಯಾ, ಪಶ್ಚಿಮ ಬರ್ಧಮಾನ್‌ ಮತ್ತು ಬಿರ್ಬುಮ್‌ನಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ 16 ಜಿಲ್ಲೆಗಳ 152 ಕ್ಷೇತ್ರಗಳಿದ್ದು, 1,478 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಹೆಚ್ಚುವರಿ 4,660 ಸಹಾಯಕ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಒಟ್ಟು ಮತಗಟ್ಟೆಗಳ ಪೈಕಿ 8,000ಕ್ಕೂ ಹೆಚ್ಚು ಮತಗಟ್ಟೆಗಳನ್ನು ಅತಿಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ. ರಾಜ್ಯದಾದ್ಯಂತ 780ಕ್ಕೂ ಹೆಚ್ಚು ಕೇಂದ್ರ ಭದ್ರತಾ ಪಡೆಗಳ ಕಂಪನಿಗಳು ನಿಯೋಜನೆ ಮಾಡಿದೆ. ಮತದಾನಕ್ಕೂ ಮುನ್ನ ಈಗಾಗಲೇ 199ಕ್ಕೂ ಹೆಚ್ಚು ಗೂಂಡಾಗಳನ್ನು ಬಂಧಿಸಲಾಗಿದೆ

More articles

Latest article

Most read