ಬೆಂಗಳೂರು : ಇತಿಹಾಸದಲ್ಲೇ ಮೊದಲ ಬಾರಿಗೆ ಶೇ.90ರಷ್ಟು ಫಲಿತಾಂಶ ದಾಖಲೆ ಸೃಷ್ಟಿಯಾಗಿದೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾದಿಸಿದ್ದಾರೆ.
ನಗರದ ಮಲ್ಲೇಶ್ವರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿವರ ನೀಡಿದರು. ಮೊದಲ ಬಾರಿಗೆ ಕರ್ನಾಟಕದಲ್ಲಿ ಈ ರೀತಿಯ ಫಲಿತಾಂಶ ಬಂದಿದ್ದು, ಮಕ್ಕಳಿಗೆ ಹಾಗೀ ಪೋಷಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. 7, 26 ಸಾವಿರ ವಿದ್ಯಾರ್ಥಿಗಳು ಪಾಸಾಗಿದ್ದಾರೆ.
ಬೆಳಗಾವಿಯ ರೂಪಾ ಪಾಟೀಲ್, ಜಾಹ್ನವಿ, ಉತ್ಸವ್, ಪ್ರಾರ್ಥನ ನಾಗಪ್ಪ ಎಂಬ ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆದಿದ್ದಾರೆ.
ಉಡುಪಿ ಜಿಲ್ಲೆ ಈ ಬಾರಿ 98.18% ಪಡೆದು ರಾಜ್ಯಕ್ಕೆ 2ನೇ ಸ್ಥಾನ ಪಡೆದರೇ, 98.09% ಫಲಿತಾಂಶ ಪಡೆದ ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನ ಪಡೆದುಕೊಂಡಿದೆ. 2024-2025 ರಲ್ಲಿ 56.89 ಫಲಿತಾಂಶ ಪಡೆದಿದ್ದ ಕಲಬುರಗಿ ಈ ಬಾರಿ 85.06% ಫಲಿತಾಂಶದೊಂದಿಗೆ ಕೊನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.
ಪರೀಕ್ಷಾ ಫಲಿತಾಂಶವನ್ನು ವಿದ್ಯಾರ್ಥಿಯ ನೋಂದಾಯಿತ ಮೊಬೈಲ್ ಸಂಖ್ಯೆಗೆ ಮಧ್ಯಾಹ್ನ 12.00 ರ ನಂತರ WhatsApp ಮೆಸೇಜ್ ಮೂಲಕ ರವಾನಿಸಲಾಗುತ್ತಿದೆ.
ಈ ವರ್ಷ ಮಂಡಳಿಯು ಪ್ರಥಮ ಬಾರಿಗೆ ವಿಶೇಷ ಹೆಜ್ಜೆಯೊಂದನ್ನು ಇಟ್ಟಿದ್ದು, ವಿದ್ಯಾರ್ಥಿಗಳ ಅಧಿಕೃತ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ತಕ್ಷಣವೇ ‘ಡಿಜಿಲಾಕರ್’ನಲ್ಲಿ ಲಭ್ಯವಾಗುವಂತೆ ಮಾಡಿದೆ.

