ಬೆಂಗಳೂರು : ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 7 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ಟಾಪರ್ಗಳಾಗಿದ್ದಾರೆ. 21 ವಿದ್ಯಾರ್ಥಿಗಳು 624 ಅಂಕ, 28 ವಿದ್ಯಾರ್ಥಿಗಳು 623 ಅಂಕ, 74 ವಿದ್ಯಾರ್ಥಿಗಳು 622 ಅಂಕ, 98 ವಿದ್ಯಾರ್ಥಿಗಳು 621 ಅಂಕ ಹಾಗೂ 150 ವಿದ್ಯಾರ್ಥಿಗಳು 620 ಅಂಕಗಳನ್ನ ಪಡೆದುಕೊಂದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕಣವೆಬಿಳಚಿ ಕಬ್ಬಳ ಗ್ರಾಮದ ಶ್ರೀ ವಿದ್ಯಾಲಕ್ಷ್ಮೀ ಕಾನ್ವೆಂಟ್ ಸ್ಕೂಲ್ ವಿದ್ಯಾರ್ಥಿ ಭರತ್ 625ಕ್ಕೆ 625 ಅಂಕ ಪಡೆದಿದ್ದಾರೆ. ಇವರು ಬಿಲ್ಡಿಂಗ್ ಕಾಂಟ್ರ್ಯಾಕ್ಟರ್ ಆಗಿರುವ ಗಿರೀಶ್ರಾವ್ ಮತ್ತು ಶಿಲ್ಪಾ ದಂಪತಿಯ ಪುತ್ರ.
ವಿಜಯಪುರಕ್ಕೆ ಕೀರ್ತಿ ತಂದ ಸೌಜನ್ಯಾ : ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಗ್ರಾಮದ ಆಕ್ಸ್ಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸೌಜನ್ಯಾ ಕೂಡ 625ಕ್ಕೆ 625 ಅಂಕ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ.
ಕುಂದಾಪುರ ತಾಲೂಕಿನ ಶಂಕರ್ ನಾರಾಯಣದ ಮದರ್ ತೆರೇಸಾ ಮೆಮೊರೇಬಲ್ ಶಂಕರ್ ನಾರಾಯಣ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೀತಂ ಜಿ. ಪೂಜಾರಿ ಕೂಡ 625ಕ್ಕೆ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದಿದ್ದಾರೆ.
ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರ ಧನುಷ್ ಮತ್ತು ರಾಯಚೂರಿನ ವಿದ್ಯಾರ್ಥಿ ಸುಖದೇವ್ ಕೂಡ 625ಕ್ಕೆ 625 ಅಂಕ ಪಡೆದಿದ್ದಾರೆ.

