ಬೆಂಗಳೂರು : ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳು ಹೈಕೋರ್ಟ್ ಮೊರೆ ಹೋಗಿದ್ದಾರೆ.
ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಪರಾಧಿ ವಿನಯ್ ಕುಲಕರ್ಣಿ ಮತ್ತು ಚಂದ್ರಶೇಖರ್ ಇಂಡಿ ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
ವಿನಯ್ ಕುಲಕರ್ಣಿ ಸೇರಿ ಇಬ್ಬರು ಜೀವಾವಧಿ ಶಿಕ್ಷೆ ತೀರ್ಪಿಗೆ ತಡೆಯಾಜ್ಞೆ ನೀಡಿ, ಅಮಾನತಿನಲ್ಲಿ ಇಡುವಂತೆ ಮನವಿ ಮಾಡಿದ್ದಾರೆ. ಅರ್ಜಿ ವಿಚಾರಣೆಯು ಏ.27ರಂದು ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ.
ತೀರ್ಪು ಪ್ರಕಟವಾದ 90 ದಿನಗಳಲ್ಲಿ ತೀರ್ಪನ್ನು ಅಮಾನತಿನಲ್ಲಿ ಇಡದೇ ಹೋದರೆ ಶಾಸಕ ಸ್ಥಾನ ಅನರ್ಹ ಆಗುವ ಭಯದಲ್ಲಿ ವಿನಯ್ ಕುಲಕರ್ಣಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೊರೆ ಹೋದ ವಿನಯ್ ಕುಲಕರ್ಣಿ