ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮೊದಲ ಮಳೆ ಭಾರಿ ಅವಘಡ ಸಂಘವಿಸಿದೆ. ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಟ್ಟಡದ ಬಳಿಯ ಕಾಂಪೌಂಡ್ ಕುಸಿದು 7 ಮಂದಿ ಸಾವನ್ನಪ್ಪಿದ್ದಾರೆ.
ಮೂವರು ಮಕ್ಕಳು ಸೇರಿದಂತೆ ಏಳು ಮಂದಿ ಮೃತರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಅವಶೇಷಗಳಡಿ ಸಿಲುಕಿರುವ ಮೃತದೇಹಗಳನ್ನು ತೆಗೆಯುತ್ತಿದ್ದಾರೆ.
ಸಂಜೆ 5 ಗಂಟೆಯಿಂದ ಸತತ 1 ಗಂಟೆ ಕಾಲ ಎಡಬಿಡದೆ ಮಳೆ ಸುರಿದಿದೆ. ಬಿರುಗಾಳಿ, ಗುಡುಗು, ಸಿಡಿಲು, ಆಲಿಕಲ್ಲು ಸಹಿತ ಮಳೆ ಜೋರಾಗುತ್ತಿದ್ದಂತೆ ಬೀದಿಬದಿ ವ್ಯಾಪಾರಿಗಳು, ಕಾಂಪೌಂಡ್ ಪಕ್ಕದಲ್ಲಿ ಆಶ್ರಯ ಪಡೆದಿದ್ದಾರೆ. ಆ ವೇಳೆ ಕಾಂಪೌಂಡ್ ಕುಸಿದಿದೆ.
ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಏಕಾಏಕಿ ಕಾಂಪೌಂಡ್ ಕುಸಿಯಲು ಕಾರಣವೇನು ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ ಸಿಎಂ. ಜಿಬಿಎ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಬೌರಿಂಗ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಗಾಯಾಳುಗಳನ್ನು ಮಾತಾಡಿಸಿದರು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಭರವಸೆ ನೀಡಿದ್ದಾರೆ.

ಮೃತದೇಹಗಳನ್ನು ಶವಗಾರಕ್ಕೆ ಸ್ಥಳಾಂತರ ಮಾಡುತ್ತಿದ್ದಾರೆ. ಇತ್ತ ಕುಟುಂಬಕ್ಕೆ ಆಧಾರವಾಗಿದ್ದವರ ಮೃತದೇಹ ಕಂಡು ಸಂಬಂಧಿಕರು ಕಣ್ಣೀರು ಹಾಕುತ್ತಿದ್ದಾರೆ. ಇನ್ಮುಂದೆ ನಮಗ್ಯಾರು ದಿಕ್ಕು ಎಂದು ರೋಧಿಸುತ್ತಿದ್ದು, ಆಕ್ರಂದನ ಮುಗಿಲುಮುಟ್ಟಿದೆ.

