ಇಂದು ಕೂಡ ಮಳೆ ಬರುವ ಸಾಧ್ಯತೆ ಇದೆ.. ಎಚ್ಚರದಿಂದಿರಿ…

ಬೆಂಗಳೂರು : ರಾಜಧಾನಿಯಲ್ಲಿ ನಿನ್ನೆ ಸುರಿದ ಭೀಕರ ಮಳೆಗೆ ಇಡೀ ನಗರ ತತ್ತರಿಸಿದೆ. ಸಾಕಷ್ಟುಅವಾಂತರಗಳು ಸೃಷ್ಟಿಯಾಗಿದೆ. ಇನ್ನೂ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಹಾಗೂ ಉತ್ತರ ಕರ್ನಾಟಕದ 17 ಜಿಲ್ಲೆಗಳ ವಿವಿಧ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನಿನ್ನೆ ಅಷ್ಟು ಜೋರಾಗಿ ಮಳೆ ಬಂದಿದ್ದರು ಇಂದು ಬೆಳಗ್ಗೆಯಿಂದಲೇ ಬಿಸಿಲು ಆವರಿಸಿದೆ. ಮತ್ತೆ ಸಂಜೆ ಬೆಂಗಳೂರಿನಲ್ಲಿ ಮತ್ತೆ ಮಳೆಯಾಗುವ ಸಾದ್ಯತೆ ದಟ್ಟವಾಗಿದೆ.

ರಾಜ್ಯದ ವಿವಿದೆಡೆ ಮಳೆ
ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಗದಗ ಭಾಗಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಹೆಚ್ಚಾಗಲಿದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಮೈಸೂರು, ಧಾರವಾಡ, ಹಾವೇರಿ, ದಾವಣಗೆರೆ, ಕಲಬುರಗಿ, ವಿಜಯಪುರ, ಕೊಪ್ಪಳ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ದೇಶಾದ್ಯಂತ ಬಿಸಿಲು
ಐಎಂಡಿ ಪ್ರಕಾರ, ಮೇ 1 ರಿಂದ ಮೇ 3 ರವರೆಗೆ ಪಶ್ಚಿಮ ರಾಜಸ್ಥಾನದಲ್ಲಿ ಬಿಸಿಗಾಳಿಯ ಅಲೆಗಳು ದೀರ್ಘಕಾಲ ಮುಂದುವರೆಯುವ ಸಾಧ್ಯತೆ ಇದೆ. ಪೂರ್ವ ಮತ್ತು ದಕ್ಷಿಣ ಭಾರತದ ಭಾಗಗಳಲ್ಲಿ ಬಿಸಿ ಮತ್ತು ತೇವಾಂಶಭರಿತ ವಾತಾವರಣ ಇರಲಿದೆ. ಏಪ್ರಿಲ್ 29 ರಿಂದ ಮೇ 1 ರವರೆಗೆ ಒಡಿಶಾದ ಕೆಲವು ಪ್ರದೇಶಗಳಲ್ಲಿ ಈ ರೀತಿಯ ಹವಾಮಾನವನ್ನು ನಿರೀಕ್ಷಿಸಲಾಗಿದೆ. ಇದೇ ರೀತಿ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಹಾಗೂ ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂನಲ್ಲಿ ಏಪ್ರಿಲ್ 29 ರಿಂದ ಮೇ 3 ರವರೆಗೆ ಇದೇ ವಾತಾವರಣ ಮುಂದುವರೆಯಲಿದೆ.

More articles

Latest article

Most read