ಬೆಂಗಳೂರು : ಬೆಂಗಳೂರು : ಕೇರಳಂನಲ್ಲಿ 80 ವರ್ಷ ವಯಸ್ಸಿನ ಪಿಣರಾಯಿ ವಿಜಯನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಅತ್ಯಂತ ಹಿರಿಯ ವಯಸ್ಸಿನ ಮುಖ್ಯಮಂತ್ರಿ ಕರ್ನಾಟಕದ ಸಿದ್ದರಾಮಯ್ಯ ಎಂದು ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಕೇರಳ ವಿಧಾನಸಭಾ ಚುನಾವಣೆಯಲ್ಲಿ LDF ಸೋತ ಹಿನ್ನೆಲೆ ಪಿಣರಾಯಿ ವಿಜಯನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ, ಕರ್ನಾಟಕದ ಮುಖ್ಯಮಂತ್ರಿ, 78 ವರ್ಷ ವಯಸ್ಸಿನ ಸಿದ್ದರಾಮಯ್ಯ ಅವರಿಗೆ ರಾಜಕೀಯ ಜೀವನದಲ್ಲಿ ಮತ್ತೊಂದು ಬಿರುದು ಸಿಕ್ಕಂತಾಗಿದೆ.
ಸಿದ್ದರಾಮಯ್ಯ ಅವರಿಗೆ ಇದೀಗ 78 ವರ್ಷ 9 ತಿಂಗಳು. ಭಾರತದ ಅತ್ಯಂತ ಹಿರಿಯ ಮುಖ್ಯಮಂತ್ರಿ ಆಗಿದ್ದಾರೆ.
ಸಿದ್ದರಾಮಯ್ಯ ಅವರು 1983 ರಲ್ಲಿ ತಮ್ಮ 36 ನೇ ವಯಸ್ಸಿನಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ, ಅಂದಿನಿಂದ ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ ಮತ್ತು ಎರಡು ಬಾರಿ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ
ಇತ್ತೀಚೆಗಷ್ಟೇ ಡಿ. ದೇವರಾಜ ಅರಸು ಅವರ ದಾಖಲೆಯನ್ನು ಮುರಿದಿದ್ದಾರೆ ಸಿದ್ದರಾಮಯ್ಯ. ಕರ್ನಾಟಕದ ಸುದೀರ್ಘ ಕಾಲದ ಸಿಎಂ ಎಂದು ಸಿದ್ದರಾಮಯ್ಯ ಹೆಸರಾಗಿದ್ದಾರೆ. ಅಲ್ಲದೇ, 17 ಬಾರಿ ರಾಜ್ಯ ಬಜೆಟ್ ಮಂಡಿಸಿರುವ ಹೆಗ್ಗಳಿಕೆಯೂ ಇವರಿಗಿದೆ.
ಡಿ. ದೇವರಾಜ ಅರಸು ಅವರು ಒಟ್ಟು 7 ವರ್ಷ 239 ದಿನಗಳ ಕಾಲ ಸಿಎಂ ಆಗಿದ್ದರು. ಸಿದ್ದರಾಮಯ್ಯ ಅವರು 2013 ರಿಂದ 2018 ರವರೆಗೆ ಪೂರ್ಣ ಅವಧಿ ಮುಗಿಸಿ, ಮೇ 2023 ರಿಂದ ಇಲ್ಲಿಯತನಕ ಅಧಿಕಾರ ನಡೆಸುತ್ತಿದ್ದಾರೆ.
ದೇಶದಲ್ಲಿರುವ ಹಿರಿಯ ಮುಖ್ಯಮಂತ್ರಿಗಳು : ಕರ್ನಾಟಕದಲ್ಲಿ ಸಿದ್ದರಾಮಯ್ಯ (78), ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು (75), ಮಿಜೋರಾಂನ ಲಾಲ್ದುಹೊಮಾ (74) ಮತ್ತು ನಾಗಾಲ್ಯಾಂಡ್‌ನ ನೆಫಿಯು ರಿಯೊ (74) ಹಿರಿಯ ಮುಖ್ಯಮಂತ್ರಿಗಳಾಗಿದ್ದಾರೆ. ಅರುಣಾಚಲ ಪ್ರದೇಶದ ಪೆಮಾ ಖಂಡು (46) ದೇಶದ ಅತ್ಯಂತ ಕಿರಿಯ ಮುಖ್ಯಮಂತ್ರಿಯಾಗಿದ್ದಾರೆ.
ಈಗ ದೇಶಕ್ಕೆ ಹಿರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ