ಪಶ್ಚಿಮ ಬಂಗಾಳದ ಸಂಪುಟವನ್ನು ವಿಸರ್ಜಿಸಿದ ರಾಜ್ಯಪಾಲರು

ಕೊಲ್ಕತ್ತಾ :  ಪಶ್ಚಿಮ ಬಂಗಾಳದ ರಾಜ್ಯಪಾಲರು ರಾಜ್ಯ ಸರ್ಕಾರದ ಅವಧಿ ಅಂತ್ಯಗೊಂಡಿರುವುದನ್ನು ಉಲ್ಲೇಖಿಸಿ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ.
ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ನೀಡಲು ನಿರಾಕರಿಸಿದ್ದರು, ಆದರೆ, ಅವರು ಇನ್ನು ಮುಂದೆ ರಾಜ್ಯದ ಮುಖ್ಯಮಂತ್ರಿಯಾಗರುವುದಿಲ್ಲ.

ಲೋಕಭವನ ಹೊರಡಿಸಿದ ಅಧಿಕೃತ ಹೇಳಿಕೆಯ ಪ್ರಕಾರ, ಟಿಎಂಸಿ ಅಧಿಕಾರದಲ್ಲಿದ್ದ ರಾಜ್ಯ ವಿಧಾನಸಭೆಯ ಅವಧಿ ಮೇ 7 ರಂದು ಕೊನೆಗೊಂಡ ನಂತರ ಈ ವಿಸರ್ಜನೆ ಮಾಡಲಾಗಿದೆ ಎಂದು ತಿಳಿಸಿದೆ. 

 ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತವನ್ನು ಗಳಿಸಿದ್ದು, 207 ಸ್ಥಾನಗಳನ್ನು ಪಡೆದುಕೊಂಡಿದೆ .  ಬಿಜೆಪಿಯ ಭರ್ಜರಿ ಗೆಲುವು ಟಿಎಂಸಿಗೆ ದೊಡ್ಡ ಹಿನ್ನಡೆಯಾಗಿದ್ದು, ಅದು 80 ಸ್ಥಾನಗಳಿಗೆ ಇಳಿಯಿತು.

ಬಿಜೆಪಿ ಸರ್ಕಾರ ರಚನೆಯಾಗಲು ಅವಕಾಶ ಸಿಕ್ಕಂತಾಗಿದೆ. ಮೇ 9ರಂದು ಬಂಗಾಳದಲ್ಲಿ ಬಿಜೆಪಿಯ ಮೊದಲ ಸರ್ಕಾರ ರಚನೆಯಾಗಲಿದೆ ಎನ್ನಲಾಗುತ್ತಿದೆ. ಆದರೆ, ಇನ್ನೂ ಬಿಜೆಪಿ ಸರ್ಕಾರ ರಚನೆಗೆ ರಾಜ್ಯಪಾಲರಿಗೆ ಹಕ್ಕು ಮಂಡನೆ ಮಾಡಿಲ್ಲ.  
ಮಮತಾ ಬ್ಯಾನರ್ಜಿ ಅವರ ಸರ್ಕಾರವು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ವಿಫಲವಾಗಿದೆ ಮತ್ತು ಸರ್ಕಾರದ ಕೆಲವು ಸಚಿವರು ಭ್ರಷ್ಟಾಚಾರದ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ ಎಂಬ ಹಿನ್ನೆಲೆಯಲ್ಲಿ ರಾಜ್ಯಪಾಲರು ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ರಾಜ್ಯಪಾಲರ ಈ ಕ್ರಮವನ್ನು ತೃಣಮೂಲ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದ್ದು, ಇದು ಸಂವಿಧಾನ ವಿರೋಧಿ ಮತ್ತು ಪ್ರಜಾಪ್ರಭುತ್ವದ ಹತ್ಯೆ ಎಂದು ಬಣ್ಣಿಸಿದೆ. ಈ ಆದೇಶದ ವಿರುದ್ಧ ನ್ಯಾಯಾಲಯದ ಮೊರೆ ಹೋಗಲು ಸರ್ಕಾರ ಸಿದ್ಧತೆ ನಡೆಸುತ್ತಿದೆ.

ಕಳೆದ ಹಲವು ತಿಂಗಳುಗಳಿಂದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಮತ್ತು ಮಮತಾ ಬ್ಯಾನರ್ಜಿ ಸರ್ಕಾರದ ನಡುವೆ ವಿಶ್ವವಿದ್ಯಾಲಯಗಳ ಕುಲಪತಿಗಳ ನೇಮಕ, ಪಂಚಾಯತ್ ಚುನಾವಣೆ ಮತ್ತು ಕೇಂದ್ರದ ಅನುದಾನದ ವಿಷಯವಾಗಿ ಸರಣಿ ವಾಕ್ಸಮರ ನಡೆಯುತ್ತಲೇ ಇತ್ತು. ಈಗ ಸಂಪುಟ ವಜಾಗೊಳಿಸುವ ಮೂಲಕ ರಾಜ್ಯಪಾಲರು ಅಂತಿಮವಾಗಿ ಶಕ್ತಿ ಪ್ರದರ್ಶನಕ್ಕಿಳಿದಿದ್ದಾರೆ.

More articles

Latest article

Most read