ಶೃಂಗೇರಿ ಅಂಚೆ ಮತ ಪತ್ರ ಮರು ಎಣಿಕೆ ಆದೇಶಕ್ಕೆ ತಡೆ ಕೋರಿ ಸುಪ್ರೀಂಗೆ ಅರ್ಜಿ

ಬೆಂಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಪತ್ರಗಳ ಮತ ಮರು ಎಣಿಕೆಗೆ ಸೂಚಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್‌ ಅಭ್ಯರ್ಥಿ ಟಿ. ಡಿ. ರಾಜೇಗೌಡ  ಸುಪ್ರೀಂ ಕೋರ್ಟ್‌ಗೆ ಶುಕ್ರವಾರ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

 ಅಂಚೆ ಮತಗಳ ಮರು ಎಣಿಕೆಗೆ ಹೈಕೋರ್ಟ್ ಆದೇಶ ನೀಡಿತ್ತು. 279 ತಿರಸ್ಕೃತಗೊಂಡ ಮತಗಳಲ್ಲಿ ಲೋಪಗಳಿಲ್ಲದಿದ್ದರೆ ಪರಿಗಣಿಸಬೇಕು ಒಟ್ಟು ಅಂಚೆ ಮತ ಪತ್ರಗಳೊಂದಿಗೆ ಪರಿಗಣಿಸಲು ಹೈಕೋರ್ಟ್ ಆದೇಶ ನೀಡಿತ್ತು. ಮರುಮತ ಎಣಿಕೆಯಲ್ಲಿ ಡಿ ಎನ್ ಜೀವರಾಜ್ ವಿಜೇತ ಎಂದು ಚುನಾವಣಾಧಿಕಾರಿ ಘೋಷಿಸಿದ್ದಾರೆ. ಇದಕ್ಕೆ ತಡೆ ನೀಡಬೇಕು ಎಂದು ಟಿ.ಡಿ.ರಾಜೇಗೌಡ ಮೇಲ್ಮನವಿ ಸಲ್ಲಿಸಿದ್ದಾರೆ.

 ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿ ಡಿ.ಎನ್. ಜೀವರಾಜ್ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಚುನಾವಣಾ ಸಂದರ್ಭದಲ್ಲಿ ತಿರಸ್ಕೃತಗೊಂಡಿದ್ದ 279 ಅಂಚೆ ಮತಗಳನ್ನು ಮರು ಪರಿಶೀಲಿಸುವಂತೆ ಸೂಚಿಸಿತ್ತು. ಈ ಮತಗಳಲ್ಲಿ ಯಾವುದೇ ತಾಂತ್ರಿಕ ಲೋಪಗಳಿಲ್ಲದಿದ್ದರೆ ಅವುಗಳನ್ನು ಸಿಂಧು ಎಂದು ಪರಿಗಣಿಸಿ, ಒಟ್ಟು ಮತಗಳೊಂದಿಗೆ ಸೇರಿಸಿ ಮರು ಎಣಿಕೆ ಮಾಡುವಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿತ್ತು.

ಹೈಕೋರ್ಟ್ ನಿರ್ದೇಶನದಂತೆ ನಡೆದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯು ಫಲಿತಾಂಶದಲ್ಲಿ ಭಾರಿ ಏರುಪೇರು ಉಂಟುಮಾಡಿತ್ತು. ಆರಂಭಿಕ ಫಲಿತಾಂಶದಲ್ಲಿ ಟಿ.ಡಿ. ರಾಜೇಗೌಡ ಅವರು ವಿಜೇತರಾಗಿದ್ದರು. ಆದರೆ, ಈ 279 ಅಂಚೆ ಮತಗಳನ್ನು ಒಳಗೊಂಡ ಮರು ಎಣಿಕೆಯ ನಂತರ ಬಿಜೆಪಿಯ ಡಿ.ಎನ್. ಜೀವರಾಜ್ ಅವರು ವಿಜೇತರೆಂದು ಘೋಷಿಸಲ್ಪಟ್ಟಿದ್ದರು. ಈ ಬೆಳವಣಿಗೆಯು ರಾಜೇಗೌಡ ಅವರಿಗೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿತ್ತು.

ಹೈಕೋರ್ಟ್ ತೀರ್ಪಿನಿಂದಾಗಿ ತಮ್ಮ ಶಾಸಕ ಸ್ಥಾನಕ್ಕೆ ಕುತ್ತು ಬಂದ ಹಿನ್ನೆಲೆಯಲ್ಲಿ, ಟಿ.ಡಿ. ರಾಜೇಗೌಡ ಅವರು ಈಗ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಹೈಕೋರ್ಟ್ ನೀಡಿರುವ ಆದೇಶವು ಕಾನೂನುಬದ್ಧವಾಗಿಲ್ಲ ಮತ್ತು ಮತ ಎಣಿಕೆಯ ಪ್ರಕ್ರಿಯೆಯಲ್ಲಿ ಕೆಲವು ಅಂಶಗಳನ್ನು ಸರಿಯಾಗಿ ಗಮನಿಸಿಲ್ಲ ಎಂಬುದು ಅವರ ವಾದವಾಗಿದೆ. ಮರು ಎಣಿಕೆಯ ಆದೇಶಕ್ಕೆ ತಡೆ ನೀಡಬೇಕು ಹಾಗೂ ತಮ್ಮನ್ನು ವಿಜೇತರೆಂದು ಘೋಷಿಸಿದ್ದ ಮೊದಲಿನ ಫಲಿತಾಂಶವನ್ನೇ ಎತ್ತಿ ಹಿಡಿಯಬೇಕು ಎಂದು ಅವರು ಅರ್ಜಿಯಲ್ಲಿ ಕೋರಿದ್ದಾರೆ.

More articles

Latest article

Most read