ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿದಿದೆ. ನಾಯಕ ಸುವೇಂದು ಅಧಿಕಾರಿ ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಮೊದಲ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಅವರ ಜನ್ಮ ದಿನಾಚರಣೆಯಂದು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಎನ್‌ಡಿಎ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹಿರಿಯ ಬಿಜೆಪಿ ನಾಯಕರ ಸಮ್ಮುಖದಲ್ಲಿ ಇಲ್ಲಿನ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಆರ್‌ಎನ್ ರವಿ ಅಧಿಕಾರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು NDAಯ ಹಲವಾರು ಹಿರಿಯ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಸುವೇಂದು ಅಧಿಕಾರಿ ಅವರ ಸಂಪುಟದಲ್ಲಿ 5 ಮಂದಿಯಲ್ಲಿ ದಿಲೀಪ್ ಘೋಷ್, ಅಗ್ನಿಮಿತ್ರ ಪಾಲ್, ನಿಸಿತ್ ಪ್ರಾಮಾಣಿಕ್, ಕ್ಷುದಿರಾಮ್ ತುಡು ಮತ್ತು ಅಶೋಕ್ ಕೀರ್ತಾನಿಯ ರಾಜ್ಯ ಸಂಪುಟದ ಸೇರಿಕೊಂಡಿದ್ದಾರೆ.
ಇದೇ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಖನ್ಲಾಲ್ ಸರ್ಕಾರ್ ಅವರ ಪಾದಗಳನ್ನು ಮುಟ್ಟಿದರು. ಸಿಲಿಗುರಿಯ ನಿವಾಸಿಯಾಗಿರುವ 97 ವರ್ಷದ ಮಖನ್ಲಾಲ್ ಸರ್ಕಾರ್, ಶ್ಯಾಮ ಪ್ರಸಾದ್ ಮುಖರ್ಜಿಯವರ ಸಹಾಯಕರಾಗಿದ್ದರು ಮತ್ತು ಅವರ ಕೊನೆಯ ಪ್ರಯಾಣದ ಭಾಗವಾಗಿದ್ದರು.

ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಪ್ರಧಾನಿ ಮೋದಿ ಹಿರಿಯ ಬಿಜೆಪಿ ನಾಯಕ ಮಖನ್ಲಾಲ್ ಸರ್ಕಾರ್ ಅವರನ್ನು ಸನ್ಮಾನಿಸಿದರು.

