ಬೆಂಗಳೂರು : ಕಿರುತೆರೆ ಹಾಗೂ ಹಿರಿ ತೆರೆಯಲ್ಲಿ ಮಿಂಚಿದ ನಟ ದಿಲೀಪ್ ರಾಜ್ ಹೃದಯಾಘಾತದಿಂದ ಬೆಂಗಳೂರಿನ ಉತ್ತರಹಳ್ಳಿಯ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ.
ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಎದೆ ನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಮೃತಪಟ್ಟಿದ್ದಾರೆ. ವಿಲೀಪ್ ರಾಜ್ ಅವರಿಗೆ 47 ವರ್ಷ ವಯಸ್ಸಾಗಿತ್ತು. ಇವರ ನಿಧನದಿಂದ ಇಡೀ ಚಿತ್ರಂಗಕ್ಕೆ ಆಘಾತ ಉಂಟಾಗಿದೆ.
2005ರಲ್ಲಿ ಬಿಡುಗಡೆಯಾದ ಬಾಯ್‌ಫ್ರೆಂಡ್ ಸಿನಿಮಾದಲ್ಲಿ ನಾಯಕನಾಗಿ ನಟಿಸುವ ಮೂಲಕ ಚಿತ್ರರಂಗ ಪ್ರವೇಶಿಸಿದ್ದರು. ಪುನೀತ್ ರಾಜ್ ಕುಮಾರ್ ಅವರೊಂದಿಗೆ ಮಿಲನ ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ನಟಿಸಿದ್ದರು. ಹಿಟ್ಲರ್ ಕಲ್ಯಾಣ ಸೀರಿಯಲ್ ಮೂಲಕ ದಿಲೀಪ್ ರಾಜ್ ಕಿರುತೆರೆಗೆ ಹಿಂತಿರುಗಿದ್ದರು. ಕಿರುತೆರೆಯಲ್ಲಿ ನಟ, ನಿರ್ದೇಶಕ, ನಿರ್ಮಾಪಕರಾಗಿಯೂ ಕಾಣಿಸಿಕೊಂಡಿದ್ದರು.
ಇತ್ತೀಚೆಗೆ ಬಿಡುಗಡೆಯಾಗಿದ್ದ ಡಾರ್ಲಿಂಗ್ ಕೃಷ್ಣ ಅವರ ಲವ್ ಮಾಕ್ಟೇಲ್ 3 ರಲ್ಲಿ ಕೊನೆಯದಾಗಿ ನಟಿಸಿದ್ದರು. ಸುಗ್ರೀವ, ಗೆಳೆಯ, ಯೂಟರ್ನ್, ಸೇರಿದಂತೆ 28 ಚಿತ್ರಗಳಲ್ಲಿ ದಿಲೀಪ್ ರಾಜ್ ನಟಿಸಿದ್ದಾರೆ. ಮನೆಯೊಂದು ಮೂರು ಬಾಗಿಲು, ರಥಸಪ್ತಮಿ, ಪ್ರೀತಿಗಾಗಿ ಧಾರಾವಾಹಿಗಳಲ್ಲಿ ಜನಪ್ರಿಯರಾಗಿದ್ದರು. ಸದ್ಯ ಜನಪ್ರಿಯ ಧಾರಾವಾಹಿ ‘ಕೃಷ್ಣ ರುಕ್ಕು’ ಧಾರವಾಹಿ ನಿರ್ಮಾಣದಲ್ಲಿ ಮೂಡಿಬರುತ್ತಿತ್ತು.

