ಜಿಟಿ ದೇವೇಗೌಡ 2028ರಲ್ಲೂ ಜೆಡಿಎಸ್‌ನಿಂದಲೇ ಸ್ಪರ್ಧೆ: ಕಾಂಗ್ರೆಸ್ ಸೇರುವ ಊಹಾಪೋಹಗಳಿಗೆ ತೆರೆ

ಬೆಂಗಳೂರು: ಪಕ್ಷ ಮತ್ತು ಪಕ್ಷದ ನಾಯಕರೊಂದಿಗೆ ಅಂತರ ಕಾಯ್ದುಕೊಂಡಿದ್ದ ಶಾಸಕ ಜಿ.ಟಿ. ದೇವೇಗೌಡ ಅವರು ಇಂದು ದಿಢೀರನೆ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿ ಕೆಲ ಕಾಲ ಚರ್ಚೆ ನಡೆಸಿದರು

ಮಾಜಿ ಸಚಿವ, ಹಾಲಿ ಶಾಸಕ ಜಿಟಿಡಿ ಪಕ್ಷದ ನಾಯಕ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಹಲವು ದಿನಗಳಿಂದ ಮುನಿಸಿಕೊಂಡಿದ್ದರು. ಪಕ್ಷದ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗಿಯಾಗಿರಲಿಲ್ಲ. ಅಲ್ಲದೆ, ಜೆಡಿಎಸ್‌ನಿಂದ ಮೈಸೂರು ಜಿಲ್ಲೆಯ ಹಲವೆಡೆ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕ್ರಮಗಳಲ್ಲಿಯೂ ಸಹ ಕಾಣಿಸಿಕೊಂಡಿರಲಿಲ್ಲ. ಇದು ಜಿಟಿಡಿ ಪಕ್ಷ ತೊರೆಯುತ್ತಾರೆ ಎಂಬ ಚರ್ಚೆಗೆ ಕಾರಣವಾಗಿತ್ತು.

ಈ ಎಲ್ಲಾ ಬೆಳವಣಿಗೆಗಳ ಮಧ್ಯೆಯೇ ಜಿ.ಟಿ. ದೇವೇಗೌಡ ಅವರು ಶುಕ್ರವಾರ ರಾತ್ರಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಪದ್ಮನಾಭನಗರದ ನಿವಾಸದಲ್ಲಿ ಭೇಟಿ ಮಾಡಿ ಕಾಂಗ್ರೆಸ್ ಸೇರುವ ಊಹಾಪೋಗಳಿಗೆ ತೆರೆ ಎಳೆಯುವುದರ ಜೊತೆಗೆ, ಮುಂದಿನ ಚುನಾವಣೆಯಲ್ಲಿಯೂ ಜೆಡಿಎಸ್‌ನಿಂದಲೇ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದಾರೆ.

ದೇವೇಗೌಡರ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಿಟಿ ದೇವೇಗೌಡ, ಇವತ್ತು ಮಾಜಿ ಪ್ರಧಾನಿ ದೇವೇಗೌಡರನ್ನ ಭೇಟಿ ಮಾಡಿದ್ದೇನೆ. ದೇವೇಗೌಡರು ದೇಶದ ಪ್ರಧಾನಿಯಾಗಿ ಪ್ರಖ್ಯಾತಿ ಪಡೆದವರು. ರೈತರ ಪರ ನಿಂತು ದುಡಿದವರು. ಹೀಗಾಗಿ ಮೋದಿಯವರೇ ಅವರನ್ನ ಗುಣಗಾನ ಮಾಡಿದ್ದಾರೆ. ನಮ್ಮನ್ನು ಜೊತೆಯಲ್ಲಿ ಕರೆದುಕೊಂಡು ಹೋಗುತ್ತಿದ್ದಾರೆ. ಅವರ ಬಗ್ಗೆ ಅಪಾರ ಗೌರವ ಇದೆ ಎಂದರು.

ಭೇಟಿ ವೇಳೆ ದೇವೇಗೌಡರು ರಾಜಕೀಯ ಮಾತಾಡಿಲ್ಲ. ನಾನು ಮಾತಾಡಿಲ್ಲ. ಚೆನ್ನಾಗಿರು, ಒಳ್ಳೆದಾಗಲಿ ಅಂತ ಅಶೀರ್ವಾದ ಮಾಡಿದ್ದಾರೆ. ನಾನು ಎಷ್ಟು ಪ್ರಮಾಣಿಕವಾಗಿ ದುಡಿದ್ದೇನೆ ಅಂತ ಅವರಿಗೆ ಗೊತ್ತಿದೆ. ಕ್ಷೇತ್ರ ದೊಡ್ಡದಿದೆ. ಹಾಗಾಗಿ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿದ್ದೇನೆ. ನಾನು ಇನ್ನೂ ಜನತಾದಳದಲ್ಲೆ ಇದ್ದೇನೆ. 2028ರಲ್ಲೂ ಚಾಮುಂಡೇಶ್ವರಿ ಕ್ಷೇತ್ರದಿಂದ ಜೆಡಿಎಸ್ ನಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು. 

More articles

Latest article

Most read