ಬುಮ್ರಾಗೊಂದು ನೀತಿ, ಶಮಿಗೊಂದು ನೀತಿ ಯಾಕೆ? ಅಗರ್ಕರ್‌ ವಿರುದ್ಧ ಟೀಕೆಗಳ ಸುರಿಮಳೆ

ಮುಂಬೈ: ಭಾರತ ಕ್ರಿಕೆಟ್ ತಂಡದ ಮುಖ್ಯ ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್ ಅಗರ್ಕರ್ ವಿರುದ್ಧ ಟೀಕೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅನುಭವಿ ವೇಗಿ ಮೊಹಮ್ಮದ್ ಶಮಿ ಅವರನ್ನು ನಿರಂತರವಾಗಿ ಭಾರತ ತಂಡದಿಂದ ದೂರ ಇಡಲಾಗುತ್ತಿರುವುದು ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಮಾಜಿ ಕ್ರಿಕೆಟಿಗರು, ಅಭಿಮಾನಿಗಳು ಹಾಗೂ ಕ್ರಿಕೆಟ್ ವಿಶ್ಲೇಷಕರು ಆಯ್ಕೆ ಸಮಿತಿಯ ನಿರ್ಧಾರವನ್ನು ಪ್ರಶ್ನಿಸುತ್ತಿದ್ದಾರೆ.

ಮೊಹಮ್ಮದ್ ಶಮಿ ಕೊನೆಯದಾಗಿ ಭಾರತ ಪರವಾಗಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಿದ್ದರು. ಆ ಬಳಿಕ ಅವರು ರಾಷ್ಟ್ರೀಯ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಆದರೆ ದೇಶೀಯ ಕ್ರಿಕೆಟ್‌ನಲ್ಲಿ ಶಮಿ ನಿರಂತರವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದರೂ ಆಯ್ಕೆ ಸಮಿತಿ ಅವರನ್ನು ಕಡೆಗಣಿಸುತ್ತಿರುವುದು ಅಚ್ಚರಿ ಮೂಡಿಸಿದೆ.

ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಈ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಮಿ ಎಲ್ಲಿದ್ದಾರೆ? ಅವರು ಯಾಕೆ ಆಡುತ್ತಿಲ್ಲ ಎಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಇದರ ನಡುವೆ ಶಮಿಯ ವೈಯಕ್ತಿಕ ಕೋಚ್ ಮೊಹಮ್ಮದ್ ಬದ್ರುದ್ದೀನ್ ಕೂಡ ಆಯ್ಕೆ ಸಮಿತಿಯನ್ನು ಟೀಕಿಸಿದ್ದಾರೆ. ಶಮಿ ಸಂಪೂರ್ಣ ಫಿಟ್ ಇದ್ದಾರೆ. ರಣಜಿ ಟ್ರೋಫಿಯಲ್ಲಿ ನಿರಂತರವಾಗಿ ಬೌಲಿಂಗ್ ಮಾಡುತ್ತಿದ್ದಾರೆ. ಆದರೂ ಆಯ್ಕೆ ಮಾಡದೇ ಇರುವುದಕ್ಕೆ ನೀಡಲಾಗುತ್ತಿರುವ ಕಾರಣಗಳು ಕೇವಲ ನೆಪಗಳು ಎಂದು ಅವರು ಹೇಳಿದ್ದಾರೆ.

ಶಮಿ ಕೂಡ ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದರು. “ನಾನು ಫಿಟ್ ಆಗಿದ್ದೇನೆ. ದೇಶೀಯ ಪಂದ್ಯಗಳಲ್ಲಿ ಆಡುತ್ತಿದ್ದೇನೆ. ಇನ್ನೇನು ಸಾಬೀತುಪಡಿಸಬೇಕು?” ಎಂಬ ರೀತಿಯಲ್ಲಿ ಅವರು ಪ್ರತಿಕ್ರಿಯಿಸಿದ್ದರು. ಆದರೆ ಆಯ್ಕೆ ಸಮಿತಿ ಮಾತ್ರ ಫಿಟ್ನೆಸ್ ಮತ್ತು ವರ್ಕ್‌ಲೋಡ್ ಮ್ಯಾನೇಜ್‌ಮೆಂಟ್ ಕಾರಣಗಳನ್ನು ಮುಂದಿಟ್ಟಿದೆ.

ಈ ವಿಚಾರದಲ್ಲಿ ಮಾಜಿ ನಾಯಕ ಸೌರವ್ ಗಂಗೂಲಿ ಕೂಡ ಆಗರ್ಕರ್ ವಿರುದ್ಧ ಪ್ರಶ್ನೆ ಎತ್ತಿದ್ದಾರೆ. ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಮತ್ತು ರಣಜಿ ಪಂದ್ಯಗಳಲ್ಲಿ ವಿಕೆಟ್‌ಗಳ ಮಳೆಗರೆದ ಶಮಿಯನ್ನು ಉಲ್ಲೇಖಿಸಿ, “ಇಷ್ಟು ಚೆನ್ನಾಗಿ ಆಡುತ್ತಿರುವ ಆಟಗಾರ ಭಾರತ ತಂಡಕ್ಕೆ ಯಾಕೆ ಆಯ್ಕೆಯಾಗುತ್ತಿಲ್ಲ?” ಎಂದು ಅವರು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲೂ ಅಭಿಮಾನಿಗಳ ಆಕ್ರೋಶ ವ್ಯಕ್ತವಾಗುತ್ತಿದೆ. ಇದೇ ಪರಿಸ್ಥಿತಿ ಜಸ್ಪ್ರೀತ್ ಬುಮ್ರಾಗೆ ಬಂದಿದ್ದರೆ ಆಯ್ಕೆ ಸಮಿತಿ ಇದೇ ರೀತಿಯಲ್ಲಿ ವರ್ತಿಸುತ್ತದೆಯೇ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ. ಕೆಲವು ಅಭಿಮಾನಿಗಳು ಭಾರತ ತಂಡ ಯುವ ಬೌಲರ್‌ಗಳ ಮೇಲೆ ಹೆಚ್ಚು ಅವಲಂಬಿತವಾಗುತ್ತಿರುವುದರಿಂದ ಅನುಭವಿಗಳ ಮಹತ್ವ ಕಡಿಮೆಯಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕ್ರಿಕೆಟ್ ತಜ್ಞರ ಅಭಿಪ್ರಾಯದ ಪ್ರಕಾರ, ಭಾರತ ತಂಡದಲ್ಲಿ ಬುಮ್ರಾ, ಸಿರಾಜ್ ಮತ್ತು ಶಮಿ ಎಂಬ ಅನುಭವಿ ವೇಗಿಗಳ ಸಮತೋಲನ ಬಹಳ ಮುಖ್ಯ. ಪ್ರಮುಖ ಟೂರ್ನಿಗಳ ಮುನ್ನ ಅನುಭವಿಗಳನ್ನೇ ಸಂಪೂರ್ಣವಾಗಿ ಕಡೆಗಣಿಸುವುದು ತಂಡಕ್ಕೆ ಹಿನ್ನಡೆಯಾಗಬಹುದು ಎಂಬ ಎಚ್ಚರಿಕೆಯನ್ನು ಹಲವರು ನೀಡಿದ್ದಾರೆ.

More articles

Latest article

Most read