ಬೆಂಗಳೂರು : ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಸಿದ್ದರಾಮಯ್ಯನವರೇ ತಿಳಿಸಿದ್ದಾರೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು.
‘ಕಾವೇರಿ’ ನಿವಾಸದಿಂದ ಉಪಹಾರ ಸಭೆಯ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಮಧ್ಯಾಹ್ನದ ವೇಳೆಗೆ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿಸಿದರು.
ಸಚಿವ ಈಶ್ವರ್ ಖಂಡ್ರೆ ಮಾತನಾಡಿ, ಇಷ್ಟು ವರ್ಷಗಳ ಕಾಲ ನಮಗೆ ಮಾರ್ಗದರ್ಶನ ನೀಡಿದ್ದಕ್ಕಾಗಿ ನಾವೆಲ್ಲರೂ ಸಿಎಂಗೆ ಧನ್ಯವಾದ ಹೇಳಿದ್ದೇವೆ. ಅವರು ನಿಮ್ಮೊಂದಿಗೆ(ಮಾಧ್ಯಮದವರೊಂದಿಗೆ) ಮಾತನಾಡುತ್ತಾರೆ ಎಂದರು.

