ಜೂ.1ರಂದು ಡಿ.ಕೆ.ಶಿವಕುಮಾರ್ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಪ್ರಮಾಣವಚನ ಸ್ವೀಕಾರ!

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದು, ಮುಂದಿನ ಮುಖ್ಯಮಂತ್ರಿ ಆಯ್ಕೆ ಸಂಬಂಧ ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಡಿ.ಕೆ. ಶಿವಕುಮಾರ್ ಅವರೇ ಮುಂದಿನ ಮುಖ್ಯಮಂತ್ರಿಯಾಗುವುದು ಖಚಿತವಾಗಿದ್ದು, ಇಂದು ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಮತ್ತೊಂದೆಡೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಮಾರಂಭವನ್ನು ವಿಧಾನಸೌಧದ ಮೆಟ್ಟಿಲುಗಳ ಮೇಲೆಯೇ ಆಯೋಜಿಸಲಾಗುತ್ತಿದ್ದು, ಬಹುತೇಕ ಸೋಮವಾರ (ಜೂ.1) ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆಗಳಿವೆ.

ಮುಂದಿನ ಶಾಸಕಾಂಗ ಪಕ್ಷದ ನಾಯಕ ಆಯ್ಕೆ ಸಂಬಂಧ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ಸಂಜೆ 4 ಗಂಟೆಗೆ ಸಿಎಲ್‌ಪಿ ಸಭೆ ನಡೆಯಲಿದ್ದು, ನೂತನ ನಾಯಕನಾಗಿ ಡಿ.ಕೆ. ಶಿವಕುಮಾರ್ ಹೆಸರು ಅಂತಿಮವಾಗಲಿದೆ. ಸಿದ್ದರಾಮಯ್ಯ ಡಿಕೆಶಿ ಹೆಸರನ್ನು ಪ್ರಸ್ತಾಪಿಸಲಿದ್ದು, ಹಿರಿಯ ಶಾಸಕರು ಅನುಮೋದನೆ ಕೊಡುವುದೊಂದೇ ಬಾಕಿ ಇದೆ. ಬಳಿಕ ಲೋಕಭವನಕ್ಕೆ ತೆರಳಿ ಹೊಸ ಸಂಪುಟ ರಚನೆಗೆ ಡಿಕೆಶಿ ಹಕ್ಕು ಮಂಡಿಸಲಿದ್ದಾರೆ.

ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನವದೆಹಲಿಗೆ ತೆರಳಿದ್ದಾರೆ. ಇಂದು ಅವರು ಕಾಂಗ್ರೆಸ್ ನಾಯಕರಾದ ಸೋನಿಯಾಗಾಂಧಿ, ರಾಹುಲ್‌ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರು ತಮ್ಮ ಆಪ್ತರಿಗೆ ಸಚಿವ ಸಂಪುಟದಲ್ಲಿ ಮತ್ತು ಪಕ್ಷದಲ್ಲಿ ಸೂಕ್ತ ಸ್ಥಾನಮಾನ ದೊರಕಿಸುವ ಸಂಬಂಧ ರಾಹುಲ್‌ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಜತೆ ಚರ್ಚೆಯನ್ನೂ ನಡೆಸಿದ್ದಾರೆ.

ಈ ಮಧ್ಯೆ ಡಿ.ಕೆ. ಶಿವಕುಮಾರ್ ಅವರೂ ಸಹ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಅವರೂ ಸಹ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ಗಾಂಧಿ ಮತ್ತು ಕೆ.ಸಿ. ವೇಣುಗೋಪಾಲ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದರು. ಸೋಮವಾರ ನಡೆಯಲಿರುವ ಪ್ರಮಾಣವಚನಕ್ಕೆ ಇದೇ ವೇಳೆ ಹಿರಿಯ ನಾಯಕರನ್ನು ಆಹ್ವಾನಿಸಿದ್ದಾರೆ. ಅಲ್ಲದೆ, ಸಚಿವ ಸಂಪುಟ ರಚನೆಯ ಬಗ್ಗೆಯೂ ಡಿ.ಕೆ. ಶಿವಕುಮಾರ್ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ನಾಲ್ವರು ಉಪಮುಖ್ಯಮಂತ್ರಿಗಳು?

ಡಿ.ಕೆ. ಶಿವಕುಮಾರ್ ಅವರಿಗೆ ಏಕಾಂಗಿಯಾಗಿ ಪದಗ್ರಹಣ ಮಾಡಬೇಕೆಂಬ ಆಸಕ್ತಿ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಸಿಎಂ ಜೊತೆಗೆ ನಾಲ್ವರು ಉಪಮುಖ್ಯಮಂತ್ರಿಗಳು ಅಧಿಕಾರ ವಹಿಸಿಕೊಳ್ಳಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

ಎಲ್ಲಾ ಸಮುದಾಯಗಳನ್ನು ಒಲಿಸಿಕೊಳ್ಳಲು ಪ್ರಮುಖ ಜಾತಿಗಳಿಗೆ ಉಪಮುಖ್ಯಮಂತ್ರಿ ಹುದ್ದೆಯನ್ನು ನೀಡಲಾಗುತ್ತದೆ. ಲಿಂಗಾಯತ ಸಮುದಾಯದಿಂದ ಎಂ.ಬಿ. ಪಾಟೀಲ ಮತ್ತು ಈಶ್ವರ ಖಂಡ್ರೆ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ. ದಲಿತ ಸಮುದಾಯದಿಂದ ಡಾ.ಜಿ. ಪರಮೇಶ್ವರ್ ಮತ್ತು ಪ್ರಿಯಾಂಕ್ ಖರ್ಗೆ ಹೆಸರುಗಳಿವೆ. ಮುಸ್ಲಿಂ ಸಮುದಾಯದಿಂದ ಯು.ಟಿ. ಖಾದರ್, ಜಮೀರ್ ಅಹಮದ್ ಮತ್ತು ತನ್ವೀರ್ ಸೇಠ್ ಅವರ ಹೆಸರುಗಳಿವೆ.

ಈ ಮಧ್ಯೆ ಒಬಿಸಿ ಸಮುದಾಯಕ್ಕೆ ಪ್ರಾತಿನಿಧ್ಯವಾಗಿ ಮತ್ತು ಸಿದ್ದರಾಮಯ್ಯ ಅವರ ಪುತ್ರನಿಗೂ ಪಟ್ಟ ನೀಡುವ ಮೂಲಕ ಕುರುಬ ಸಮುದಾಯದ ಆಕ್ರೋಶವನ್ನು ತಣಿಸಲು ಯತೀಂದ್ರ ಸಿದ್ದರಾಮಯ್ಯ ಅವರನ್ನು ಉಪಮುಖ್ಯಮಂತ್ರಿ ಮಾಡಲು ಹೈಕಮಾಂಡ್ ಮಟ್ಟದಲ್ಲಿ ಆಲೋಚನೆ ನಡೆದಿದೆ ಎನ್ನಲಾಗಿದೆ. ಆದರೆ, ಯತೀಂದ್ರ ಉಪಮುಖ್ಯಮಂತ್ರಿ ಆಗುವ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ.

ಯಾರಿಗೆಲ್ಲ ಸಚಿವ ಸ್ಥಾನ?

ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲು ಹಾಲಿ ಸಚಿವರಾಗಿದ್ದವರು ಮತ್ತು ಹಿರಿಯ ಶಾಸಕರಾದವರು ದೆಹಲಿ ಮಟ್ಟದಲ್ಲಿ ಭಾರಿ ಲಾಭಿ ನಡೆಸುತ್ತಿದ್ದಾರೆ. ಸೋಮವಾರ ನಡೆಯುವ ಪ್ರಮಾಣವಚನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಜೊತೆಗೆ 11ರಿಂದ 13 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಬಹುದು ಎಂದು ಹೇಳಲಾಗುತ್ತಿದೆ.

ಈ ಪೈಕಿ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿದ್ದ ಡಾ.ಪರಮೇಶ್ವರ್, ಎಚ್.ಕೆ.ಪಾಟೀಲ್, ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಈಶ್ವರ ಖಂಡ್ರೆ, ಎಂ.ಬಿ.ಪಾಟೀಲ್, ಶಿವರಾಜ ತಂಗಡಗಿ, ಮುನಿಯಪ್ಪ, ಮಂಕಾಳು ವೈದ್ಯ, ಸಂತೋಷ್ ಲಾಡ್ ಮತ್ತೆ ಸಂಪುಟ ಸೇರ್ಪಡೆ ಸಾಧ್ಯತೆ ಇದೆ. ಇದನ್ನು ಹೊರತುಪಡಿಸಿ ಕೆಲವರ ಹೆಸರನ್ನು ಡಿಕೆಶಿ ಪರಿಗಣಿಸುವ ಸಾಧ್ಯತೆಯೂ ಇದೆ.

ಈ ಮಧ್ಯೆ ವಿಧಾನಸಭಾಧ್ಯಕ್ಷರ ಹುದ್ದೆಗೆ ಎಚ್.ಕೆ. ಪಾಟೀಲ, ಡಾ.ಜಿ. ಪರಮೇಶ್ವರ, ದಿನೇಶ್ ಗುಂಡೂರಾವ್ ಮತ್ತು ಆರ್.ವಿ. ದೇಶಪಾಂಡೆ ಅವರ ಹೆಸರುಗಳು ಕೇಳಿಬರುತ್ತಿವೆ. ಹಿರಿತನದ ಆಧಾರದ ಮೇಲೆ ಇವರಲ್ಲಿ ಒಬ್ಬರಿಗೆ ಸ್ಪೀಕರ್ ಹುದ್ದೆಯಲ್ಲಿ ಕೂಡಿಸಲು ಚರ್ಚೆ ನಡೆಯುತ್ತಿದೆ.

ಮಗನನ್ನು ಡಿಸಿಎಂ ಮಾಡಲು ಖರ್ಗೆ ಲಾಭಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಪುತ್ರ ಪ್ರಿಯಾಂಕ್ ಖರ್ಗೆ ಅವರನ್ನು ಉಪಮುಖ್ಯಮಂತ್ರಿ ಮಾಡಲು ಬಯಸಿದ್ದು, ದೆಹಲಿಯಲ್ಲಿ ಲಾಭಿ ನಡೆಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಪ್ರಿಯಾಂಕ್ ಖರ್ಗೆ ಅವರನ್ನು ಡಿಸಿಎಂ ಮಾಡಬೇಕು. ಇದಕ್ಕಾಗಿ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಸ್ಥಾನದ ತ್ಯಾಗಕ್ಕೂ ಖರ್ಗೆ ಅವರು ಸಿದ್ದರಾಗಿದ್ದಾರೆ. ಸಿದ್ದರಾಮಯ್ಯ ಅವರನ್ನು ರಾಜ್ಯಸಭೆ ಪ್ರತಿಪಕ್ಷ ನಾಯಕರನ್ನಾಗಿ ಮಾಡಿ ಎಂಬ ಸಲಹೆಯನ್ನೂ ಖರ್ಗೆಯವರು ನೀಡಿದ್ದಾರೆ ಎನ್ನಲಾಗಿದೆ.

ಆದರೆ, ರಾಜ್ಯಸಭಾ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಒಪ್ಪಿಲ್ಲ. ಕಾದು ನೋಡುವ ತಂತ್ರ ಅನುಸರಿಸುತ್ತಿದ್ದಾರೆ ಎನ್ನಲಾಗಿದೆ. ನೂತನ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಬಳಿಕ ತಮ್ಮ ಬೆಂಬಲಿಗರಿಗೆ ಸಿಗುವ ಅವಕಾಶಗಳನ್ನು ಗಮನಿಸಿ ಅವರು ತಮ್ಮ ಸ್ಥಾನಮಾನಗಳನ್ನು ನಿರ್ಧರಿಸುವ ಲೆಕ್ಕಾಚಾರದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

More articles

Latest article

Most read