ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಹೈಕಮಾಂಡ್‌ಗೆ ಅಧಿಕಾರ ನೀಡುವ ಏಕವಾಕ್ಯ ನಿರ್ಣಯಕ್ಕೆ ಬೆಂಬಲ ನೀಡಿದರು ಎನ್ನಲಾಗಿದೆ.
ಎಐಸಿಸಿ ವೀಕ್ಷಕರಾಗಿ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಸಭೆಯನ್ನು ಮೇಲ್ವಿಚಾರಣೆ ಮಾಡಿದರು.
ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂಬ ಮಾಹಿತಿ ಹೊರಬಂದಿದೆ.
ಡಿ.ಕೆ. ಶಿವಕುಮಾರ್ ಅವರು ಸಭೆಗೆ ಮುನ್ನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದರು.

*ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಲಾಗಿದೆ
*ಸಚಿವ ಸಂಪುಟ ವಿಸರ್ಜಿಸಲಾಗಿದೆ
* ಡಿ.ಕೆ. ಶಿವಕುಮಾರ್ CLP ನಾಯಕರಾಗಿ ಆಯ್ಕೆಯಾಗಿದ್ದಾರೆ
* ರಾಜ್ಯಪಾಲರಿಗೆ ಸರ್ಕಾರ ರಚನೆ ಹಕ್ಕು ಮಂಡನೆ ಬಾಕಿ
ಶಾಸಕಾಂಗ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಭಾವುಕ ಮಾತುಗಳನ್ನಾಡಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತು ಕರ್ನಾಟಕ ರಾಜ್ಯಕ್ಕೆ ಭಾವುಕ ದಿನ. ಸಿದ್ದರಾಮಯ್ಯ ಅವರು ನಮಗೆಲ್ಲರಿಗಾಗಿ ನಿಂತು ಕೆಲಸ ಮಾಡಿದ್ದಾರೆ. ಸಿದ್ದರಾಮಯ್ಯನವರೇ ನಾವು ನಿಮಗೆ ವಿಶ್ರಾಂತಿ ನೀಡೋದಿಲ್ಲ. ನಿಮ್ಮ ಸೇವೆ ಕರ್ನಾಟಕದ ಜೊತೆ ರಾಷ್ಟ್ರೀಯ ಮಟ್ಟದಲ್ಲೂ ನಿಮ್ಮ ಅಗತ್ಯತೆ ಇದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಯನ್ನು ಸಿದ್ದರಾಮಯ್ಯನವರು ದಾರಿ ಸುಗಮಗೊಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಬಿಜೆಪಿಯು ಈ ಪ್ರಕ್ರಿಯೆ ಸುಲಭವಲ್ಲ ಎಂದು ಭಾವಿಸಿತ್ತು. ಆದರೆ ಕಾಂಗ್ರೆಸ್‌ನ ಒಗ್ಗಟ್ಟಿನಿಂದ ಬಿಜೆಪಿಯ ನಿರೀಕ್ಷೆಗೆ ತಣ್ಣೀರು ಎರಚಲಾಯಿತು ಎಂದು ವೇಣುಗೋಪಾಲ್ ಹೇಳಿದ್ದಾರೆ.

