ನವದೆಹಲಿ : ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯತೆ ಹೊಂದಿ ಮುಂಚೂಣಿಯಲ್ಲಿರುವ ಕಾಕ್ರೋಚ್ ಜನತಾ ಪಾರ್ಟಿ ( ಸಿಜೆಪಿ) ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಅಕ್ರಮದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಸಿಜೆಪಿ ಪಕ್ಷದ ಸ್ಥಾಪಕ ಅಭಿಜಿತ್ ದೀಪ್ಕೆ ಸದ್ಯ ಅಮೆರಿಕದಲ್ಲಿದ್ದು ಜೂನ್ 6ರಂದು ದೆಹಲಿಗೆ ಆಗಮಿಸಲಿದ್ದಾರೆ. ಅಂದು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ತೆರಳಿ ಅಲ್ಲಿ ಪ್ರತಿಭಟನೆಗೆ ಅನುಮತಿ ಪಡೆಯಬೇಕು ಹೀಗಾಗಿ ಸಿಜೆಪಿ ಬೆಂಬಲಿಸುವ ಎಲ್ಲರೂ ನನ್ನ ಜೊತೆ ಅಂದು ಸೇರಿಕೊಳ್ಳಿ ಎಂದು ದೀಪ್ಕೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿದ್ದಾರೆ.
ದೀಪ್ಕೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಿಂದ ವಿಡಿಯೋ ಹಂಚಿಕೊಂಡು ದೆಹಲಿಯಲ್ಲಿ ನಡೆಯಲಿರುವ ಪ್ರತಿಭಟನೆಗೆ ಸಹಕಾರ ನೀಡುವಂತೆ ಬೆಂಬಲಿಗರು ಮತ್ತು ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ. ಭಾರತದ ಸಂವಿಧಾನದ ಹಾದಿಯನ್ನು ಅನುಸರಿಸಿ, ನಾವೆಲ್ಲರೂ ಒಟ್ಟಾಗಿ ಧರ್ಮೇಂದ್ರ ಪ್ರಧಾನ್ ಅವರ ರಾಜೀ ನಾಮೆಗೆ ಒತ್ತಾಯಿಸಿ ಶಾಂತಿಯುತವಾಗಿ ಪ್ರತಿಭಟಿಸುವ ಸಮಯ ಬಂದಿದೆ. ನಾವು ಒಟ್ಟಾಗಿ ಧ್ವನಿ ಎತ್ತಿದರೆ, ಅವರು ಖಂಡಿತವಾಗಿಯೂ ನಮ್ಮ ಮಾತನ್ನು ಕೇಳಲೇಬೇಕು. ಅಂತ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಸಿಲುಕಿದೆ ಎಂದು ಹೇಳಿದ್ದಾರೆ.
ನಾನು ಜೂನ್ 6 ರಂದು (ಶನಿವಾರ) ಬೆಳಗ್ಗೆ ದೆಹಲಿಗೆ ಆಗಮಿಸಲು ನಿರ್ಧರಿಸಿದ್ದೇನೆ. ದಯವಿಟ್ಟು ವಿಮಾನ ನಿಲ್ದಾಣದಲ್ಲಿ ನನ್ನೊಂದಿಗೆ ಸೇರಿಕೊಳ್ಳಿ ಮತ್ತು ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ಅನುಮತಿ ಕೋರಲು ನಾವೆಲ್ಲರೂ ಒಟ್ಟಾಗಿ ಪೊಲೀಸ್ ಠಾಣೆಗೆ ತೆರಳೋಣ ಎಂದು ಮನವಿ ಮಾಡಿದ್ದಾರೆ.
ಪರೀಕ್ಷೆಗೆ ಸಂಬಂಧಿಸಿದ ವಿವಾದಗಳು ಮತ್ತು ಗೊಂದಲಗಳು ವಿದ್ಯಾರ್ಥಿಗಳನ್ನು ಆತಂಕಕ್ಕೆ ದೂಡಿವೆ. ಸರ್ಕಾ ರದ ಉತ್ತರದಾಯಿತ್ವ ಹೊಂದಿದ್ದರೇ ಕೂಡಲೇ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

