TMC ನಾಯಕರ ಮೇಲಿನ ದಾಳಿ ಖಂಡಿಸಿ ಕೋಲ್ಕತ್ತಾ ರಸ್ತೆಗಿಳಿದು ಮಮತಾ ಬ್ಯಾನರ್ಜಿ ಬೃಹತ್ ಪ್ರತಿಭಟನೆ

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು, ತಮ್ಮ ಪಕ್ಷದ ನಾಯಕರ ಮೇಲೆ (ವಿಶೇಷವಾಗಿ ಕಳೆದ ವಾರ ಸೋನಾರ್‌ಪುರದಲ್ಲಿ ಅವರ ಸೋದರಸಳಿಯ ಅಭಿಷೇಕ್ ಬ್ಯಾನರ್ಜಿ ಅವರ ಮೇಲೆ) ನಡೆದ ದಾಳಿಯನ್ನು ಖಂಡಿಸಿ ಆಡಳಿತಾರೂಢ ಬಿಜೆಪಿ ವಿರುದ್ಧ ಮಂಗಳವಾರ ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ್ದಾರೆ.

ಕೋಲ್ಕತ್ತಾದ ಎಸ್‌ಪ್ಲನೇಡ್ ಬಳಿಯ ರಾಶ್‌ಮಣಿ ಅವೆನ್ಯೂನಲ್ಲಿ ನಡೆದ ಈ ಪ್ರತಿಭಟನಾ ರ‍್ಯಾಲಿಯಲ್ಲಿ ಅಭಿಷೇಕ್ ಬ್ಯಾನರ್ಜಿ, ಮದನ್ ಮಿತ್ರ ಮತ್ತು ಕಲ್ಯಾಣ್ ಬ್ಯಾನರ್ಜಿ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಿದ್ದರು. ರ‍್ಯಾಲಿ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ-ನೂಕಾಟ ನಡೆದಿದ್ದು, ಸಾಕಷ್ಟು ಹೈಡ್ರಾಮಾ ಸೃಷ್ಟಿಯಾಯಿತು. ಪೊಲೀಸರಿಂದ ಅಧಿಕೃತ ಅನುಮತಿ ಸಿಗದಿದ್ದರೂ ಸಹ ಈ ಪ್ರತಿಭಟನಾ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು ಎಂದು ಹೇಳಲಾಗಿದೆ.

ಸುದ್ದಿ ಸಂಸ್ಥೆ ‘ಎಎನ್‌ಐ’ (ANI) ಹಂಚಿಕೊಂಡಿರುವ ದೃಶ್ಯಗಳಲ್ಲಿ, ಪ್ರತಿಭಟನಾ ಸ್ಥಳದಲ್ಲಿ ಅಪಾರ ಸಂಖ್ಯೆಯ ಜನಸ್ತೋಮ ನೆರೆದಿರುವುದು ಮತ್ತು ಮಾಜಿ ಮುಖ್ಯಮಂತ್ರಿಗಳು ಟಿಎಂಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಜನರು “ಮಮತಾ ಬ್ಯಾನರ್ಜಿ ಜಿಂದಾಬಾದ್” ಎಂದು ಘೋಷಣೆಗಳನ್ನು ಕೂಗುತ್ತಿರುವುದು ಕಂಡುಬಂದಿದೆ. ಪರಿಸ್ಥಿತಿ ಕೈಮೀರಿ ಹೋಗದಂತೆ ತಡೆಯಲು ಸ್ಥಳದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.

ಪ್ರತಿಭಟನೆಗೂ ಮುನ್ನ ಮಮತಾ ಬ್ಯಾನರ್ಜಿ ಮತ್ತು ಇತರ ಪಕ್ಷದ ನಾಯಕರು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಮತಾ ಅವರು ಭಾರತದ ಸಂವಿಧಾನದ ಪುಸ್ತಕವನ್ನು ಕೈಯಲ್ಲಿ ಹಿಡಿದುಕೊಂಡಿರುವುದು ಕಂಡುಬಂದಿತು.

ಪ್ರತಿಭಟನೆಗೆ ಕಾರಣವೇನು?

ಚುನಾವಣೆ ಮುಗಿದ ನಂತರ ನಡೆದ ಹಿಂಸಾಚಾರ ಮತ್ತು ಇತರ ಘಟನೆಗಳಲ್ಲಿ ಟಿಎಂಸಿ ನಾಯಕರನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಈ ಪ್ರತಿಭಟನೆ ನಡೆಸಲಾಗಿದೆ. ದಕ್ಷಿಣ 24 ಪರಗಣ ಜಿಲ್ಲೆಯ ಸೋನಾರ್‌ಪುರದಲ್ಲಿ ಪಕ್ಷದ ಕಾರ್ಯಕರ್ತರೊಬ್ಬರ ಮನೆಗೆ ಭೇಟಿ ನೀಡಿದ್ದ ವೇಳೆ ಅಭಿಷೇಕ್ ಬ್ಯಾನರ್ಜಿ ಅವರ ಮೇಲೆ ನಡೆದ ದಾಳಿಯ ನಂತರ ಬಂಗಾಳದಲ್ಲಿ ರಾಜಕೀಯ ಉದ್ವಿಗ್ನತೆ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಇಂದಿನ ರ‍್ಯಾಲಿ ನಡೆದಿದೆ.

ಪೊಲೀಸರ ಅನುಮತಿ ಸಿಗದಿದ್ದರೂ ತಾವು ಧರಣಿ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಸೋಮವಾರವೇ ಹೇಳಿದ್ದ ಮಮತಾ ಬ್ಯಾನರ್ಜಿ, “ಧೈರ್ಯವಿದ್ದರೆ ನನ್ನನ್ನು ಬಂಧಿಸಲಿ” ಎಂದು ಅಧಿಕಾರಿಗಳಿಗೆ ಸವಾಲು ಹಾಕಿದ್ದರು. ಅಲ್ಲದೆ, ತಮ್ಮ ಪಕ್ಷದ ನಾಯಕರನ್ನು ಸೆಳೆಯಲು ಬಿಜೆಪಿ “ಹಣ ಮತ್ತು ಅಧಿಕಾರ”ವನ್ನು ಬಳಸುತ್ತಿದೆ ಎಂದು ಅವರು ಆರೋಪಿಸಿದರು.

ವೈಯಕ್ತಿಕ ಹಿತಾಸಕ್ತಿಗಾಗಿ ಪಕ್ಷ ತೊರೆಯುವ ನಾಯಕರಿಂದ ಸಂಘಟನೆಯನ್ನು ಪುನರ್ನಿರ್ಮಿಸಲು ಸಹಾಯವಾಗುತ್ತದೆ ಮತ್ತು ಈ ಬಿಕ್ಕಟ್ಟಿನಿಂದ ಟಿಎಂಸಿ ಇನ್ನಷ್ಟು ಬಲಿಷ್ಠವಾಗಿ ಹೊರಹೊಮ್ಮಲಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು. ಕೋಲ್ಕತ್ತಾದಲ್ಲಿ ಪ್ರತಿಭಟನೆ ನಡೆಸಲು ಪಕ್ಷಕ್ಕೆ ಅವಕಾಶ ನೀಡದಿದ್ದರೆ, ಈ ಚಳವಳಿಯನ್ನು ದೆಹಲಿಗೂ ಕೊಂಡೊಯ್ಯುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

More articles

Latest article

Most read