ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್‌ ಆಯ್ಕೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿದ್ದ ಹಗ್ಗಜಗ್ಗಾಟ ಕೊನೆಗೂ ಅಂತ್ಯವಾಗಿದೆ. ಕಾಂಗ್ರೆಸ್‌ ಮುಖಂಡ  ಬಿ.ಕೆ ಹರಿ ಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲು ಕಾಂಗ್ರೆಸ್‌ ಹೈಕಮಾಂಡ್‌ ಒಪ್ಪಿಗೆ ನೀಡಿದೆ. 

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್‌ ಜಾರಕಿಹೊಳಿ ಅವರ ಹೆಸರು ಮುಂಚೂಣಿಯಲ್ಲಿತ್ತು. ಆದರೆ, ಕೊನೆ ಕ್ಷಣದಲ್ಲಿ  ಬಿಕೆ ಹರಿ ಪ್ರಸಾದ್ ಅವರಿಗೆ ಸಚಿವ ಸ್ಥಾನ ಬದಲು ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲು ನಿರ್ಧರಿಸಿದೆ. 

 ಕೆಪಿಸಿಸಿಗೆ ಸತೀಶ್ ಜಾರಕಿಹೊಳಿ ಅವರನ್ನು ನೇಮಕ ಮಾಡಲು ಒಂದು ಬಣದ ವಿರೋಧ ಇತ್ತು. ಹೀಗಾಗಿ ಬಿಕೆ ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಪ್ರಸ್ತುತ  ಎಂಎಲ್ ಸಿ ಆಗಿರುವ ಹರಿಪ್ರಸಾದ್‌ಗೆ ಇದಿಗ  ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗಲಿದೆ. ಬಿಕೆ ಹರಿಪ್ರಸಾದ್ ಅವರು ಪಕ್ಷ ಸಂಘಟನೆಯಲ್ಲಿ ಅನುಭವ ಹೊಂದಿದ್ದಾರೆ. ಹೀಗಾಗಿ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ ಎನ್ನಲಾಗಿದೆ.

ಇದೊಂದು ಷಡ್ಯಂತ್ರ

ತಮಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿರುವ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ  ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಹೈಕಮಾಂಡ್ ಬಳಿ ಚರ್ಚೆ ಮಾಡಿದ್ದೇನೆ. ಮಂತ್ರಿಸ್ಥಾನ ನೀಡೋದು, ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡೋದು ಹೈಕಮಾಂಡ್ ಗೆ ಬಿಟ್ಟಿದ್ದು. ಹೈಕಮಾಂಡ್ ನಿಂದ ನನಗೆ ಇನ್ನೂ ಕರೆ ಬಂದಿಲ್ಲ. ಪರಮೇಶ್ವರ್ ಒಬ್ಬರಿಗೆ ಡಿಸಿಎಂ ಸ್ಥಾನ ಅಂತಾ ಮಾಧ್ಯಮಗಳಲ್ಲಿ ನೋಡಿದ್ದೇನೆ.‌ ಹೆಚ್ಚುವರಿ ಡಿಸಿಎಂಗಳ ಬಗ್ಗೆ ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ನೋಡಬೇಕು ಎಂದರು.

ನನ್ನ ವಿರುದ್ದ ಷಡ್ಯಂತ್ರ ಮಾಡೋರು ಮಾಡಲಿ. ಇಂತಹ ನೂರು ಷಡ್ಯಂತ್ರ ಬೇಕಾದ್ರೂ ಮಾಡಲಿ. ಇದು ನನ್ನ ವೀಕ್ ಮಾಡಲು ಅಲ್ಲ, ಕಾಂಗ್ರೆಸ್ ವೀಕ್ ಮಾಡುವ ಷಡ್ಯಂತ್ರ ಇದಾಗಿದೆ ಎಂದರು.

More articles

Latest article

Most read