ಬೆಂಗಳೂರು : ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ .ಶಿವಕುಮಾರ್ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಅವರೊಂದಿಗೆ 14 ಮಂದಿ ಸಂಪುಟ ಸೇರಲಿದ್ದಾರೆ.
ಡಿ.ಕೆ.ಶಿವಕುಮಾರ್ – ಮುಖ್ಯಮಂತ್ರಿ
ಡಾ.ಜಿ. ಪರಮೇಶ್ವರ – ಉಪ ಮುಖ್ಯಮಂತ್ರಿ
ಕೆ.ಹೆಚ್. ಮುನಿಯಪ್ಪ
ಕೆ.ಜೆ.ಜಾರ್ಜ್
ರಾಮಲಿಂಗಾರೆಡ್ಡಿ
ಎಂ.ಬಿ.ಪಾಟೀಲ, ಸತೀಶ್ ಜಾರಕಿಹೊಳಿ
ಕೃಷ್ಣ ಬೈರೇಗೌಡ
ಪ್ರಿಯಾಂಕ್ ಖರ್ಗೆ
ಯು.ಟಿ. ಖಾದರ್
ಯತೀಂದ್ರ ಸಿದ್ದರಾಮಯ್ಯ
ಬೈರತಿ ಸುರೇಶ್
ಶರಣ್ ಪ್ರಕಾಶ್ ಪಾಟೀಲ್
ರಾಜ್ಯದ ಮಾಜಿ ಮುಖ್ಯಮಂತ್ರಿಗಳ ಮನೆಗಳಿಗೆ ಖುದ್ದಾಗಿ ತೆರಳಿ ಡಿ.ಕೆ. ಶಿವಕುಮಾರ್ ಆಹ್ವಾನ ನೀಡಿದ್ದಾರೆ. ಸಂಜೆ 4 ಗಂಟೆ 05 ನಿಮಿಷಕ್ಕೆ ನಡೆಯಲಿರುವ ಪದಗ್ರಹಣಕ್ಕೆ ಆಗಮಿಸುವಂತೆ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ ಮತ್ತು ಮಾಜಿ ಪ್ರಧಾನಿ ದೇವೇಗೌಡರನ್ನು ಡಿಕೆಶಿ ಆಮಂತ್ರಿಸಿದ್ದಾರೆ. ಮೊದಲು ಸಿದ್ದರಾಮಯ್ಯ ನಿವಾಸಕ್ಕೆ ನಿಯೋಜಿತ ಸಿಎಂ ತೆರಳಿದ್ದು, ಈ ವೇಳೆ ಪರಮೇಶ್ವರ್ ಅವರ ಜೊತೆ ಉಪಸ್ಥಿತರಿದ್ದರು.

