ಬೆಂಗಳೂರು : ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಎಲ್. ಅತೀಕ್ ಅವರನ್ನು ನೇಮಿಸಲಾಗಿದೆ.
ಇವರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸಮಾನವಾದ ವೇತನ ಮತ್ತು ಭತ್ಯೆಗಳು ನೀಡಲಾಗುತ್ತದೆ. ಜೊತೆಗೆ ಎಲ್.ಕೆ. ಅತೀಕ್ ಅವರಿಗೆ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಅಧ್ಯಕ್ಷರ ಹುದ್ದೆಯನ್ನೂ ಸಹ ಮುಂದುವರಿಸಿಲಾಗಿದೆ.
ಸಿದ್ದರಾಮಯ್ಯ ಅವರ ಆಪ್ತ ಅಧಿಕಾರಿಗಳಾಗಿದ್ದವರನ್ನು ಎತ್ತಂಗಡಿ ಮಾಡಿ ಆ ಜಾಗಕ್ಕೆ ಡಿ.ಕೆ. ಶಿವಕುಮಾರ್ ಅವರ ಆಪ್ತ ಅಧಿಕಾರಿಗಳನ್ನು ನಿಯೋಜಿಸುವ ಪ್ರಕ್ರಿಯೆ ಆರಂಭವಾಗಿದೆ.
ಮುಖ್ಯಮಂತ್ರಿಗಳಿಗೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಆಗಿದ್ದ ಅಂಜುಂ ಪರ್ವೇಜ್ ಅವರನ್ನು ಬದಲಿಸಿ ಆ ಸ್ಥಾನಕ್ಕೆ ಹಿರಿಯ ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಅವರನ್ನು ನೇಮಿಸಲಾಗಿದೆ.
ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿದ್ದ ಬಿ.ಬಿ. ಕಾವೇರಿ ಅವರನ್ನು ವರ್ಗಾವಣೆ ಮಾಡಿ ಆ ಸ್ಥಾನಕ್ಕೆ ರಾಜೇಂದ್ರ ಚೋಳನ್ ಅವರನ್ನು ನಿಯೋಜಿಸಲಾಗಿದೆ. ಇದರ ಜೊತೆಗೆ ಚೋಳನ್ ಅವರಿಗೆ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಆದರೆ, ಕೆಪಿಟಿಸಿಎಲ್ ಎಂಡಿ ಅಗಿದ್ದ ಗೌರವ ಗುಪ್ತಾ ಅವರನ್ನು ಆಸ್ಥಾನದಿಂದ ವರ್ಗಾವಣೆ ಮಾಡಿ ಬೇರೆಕಡೆಗೆ ಇನ್ನೂ ಸ್ಥಳ ತೋರಿಸಿಲ್ಲ.

