ಹೊತ್ತು ಮುಳುಗುವುದರೊಳಗೆ  ಸಚಿವರುಗಳಿಗೆ ಖಾತೆ ಹಂಚಿಕೆ  : ಡಿ.ಕೆ.ಶಿವಕುಮಾರ್

ಬೆಂಗಳೂರು : ಖಾತೆ ಹಂಚಿಕೆಯಲ್ಲಿ ಗೊಂದಲಗಳಿವೆ, ಇಂತಹುದೇ ಖಾತೆ ಬೇಕು ಎಂದು ಬೇಡಿಕೆ ಇಡುತ್ತಿದ್ದಾರೆ ಎಂಬ ಚರ್ಚೆ ಬಗ್ಗೆ ಕೇಳಿದಾಗ, “ನಿಮ್ಮಲ್ಲಿ ಗೊಂದಲವಿರಬೇಕು. ನನ್ನ ಬಳಿ ಬಂದು ಯಾರು ಚರ್ಚೆ ಮಾಡಿಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ನೀವು ಸೇರಿದಂತೆ ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಬೇಡಿಕೆ ಇದೆ ಎಂದು ಕೇಳಿದಾಗ, “ಗಾಳಿ ಮಾತಿಗೆ ಉತ್ತರ ನೀಡಲು ಆಗುವುದಿಲ್ಲ. ಊಹಾಪೋಹದ ವಿಚಾರದ ಬಗ್ಗೆ ನಾನು ಮಾತನಾಡುವುದಿಲ್ಲ. ಖಾತೆ ಹಂಚಿಕೆ ವಿಚಾರವಾಗಿ ಪಕ್ಷ ತೀರ್ಮಾನ ಮಾಡಲಿದೆ. ಪಕ್ಷ ನನ್ನನ್ನು ಮುಖ್ಯಮಂತ್ರಿ ಮಾಡಿದೆ. ನಾನು ಯಾವ ಕೆಲಸ ಮಾಡಬೇಕು ಎಂದು ಹೇಳಿದೆ. ನಾನು ಆ ಕೆಲಸ ಮಾಡುತ್ತೇನೆ. ಪಕ್ಷ ಯಾರಿಗೆ ಯಾವ ಕೆಲಸ ಹೇಳಿದೆಯೋ ಆ ಕೆಲಸ ಮಾಡುತ್ತಾರೆ” ಎಂದು ಹೇಳಿದರು.

ಬಿಜೆಪಿ ನಾಯಕರು ನಿಮ್ಮ ಹೊಸ ಯೋಜನೆಗಳಿಗೆ ಆರ್ಥಿಕ ಸಂಪನ್ಮೂಲ ಎಲ್ಲಿದೆ ಎಂದು ತಿಳಿಸಲಿ ಎಂದು ಸವಾಲು ಹಾಕಿದ್ದಾರೆ ಎಂದು ಕೇಳಿದಾಗ, “ಖಂಡಿತಾವಾಗಿ, ಈ ಬಗ್ಗೆ ಮಾಹಿತಿ ನೀಡದೇ ನಾವು ಏನನ್ನೂ ಮಾಡುವುದಿಲ್ಲ. ಅವರಿಗೂ ಮಾಹಿತಿ ನೀಡುತ್ತೇವೆ, ಮಾಧ್ಯಮಗಳಿಗೂ ಮಾಹಿತಿ ನೀಡುತ್ತೇವೆ” ಎಂದು ಹೇಳಿದರು.

ಯುವಕ ಸಂಘ ಮಾಡುವುದರಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ಬೀಳಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿಕೆ ನೀಡಿದ್ದಾರೆ ಎಂದು ಕೇಳಿದಾಗ, “ಯಾವುದೇ ಕೆಲಸ ಮಾಡಿದರೂ ಆರ್ಥಿಕ ಹೊರೆ ಇದ್ದೇ ಇರುತ್ತದೆ. ಈ ಮಾಧ್ಯಮಗೋಷ್ಠಿ ಮಾಡಿದರೂ ಇದಕ್ಕೆ ಬೇಕಾದ ಸೌಲಭ್ಯ ಕಲ್ಪಿಸಲು ಆರ್ಥಿಕ ಹೊರೆ ಬೀಳುವುದಿಲ್ಲವೇ?” ಎಂದು ಹೇಳಿದರು.

ಗ್ಯಾರಂಟಿ ಯೋಜನೆ ಪರಿಷ್ಕರಣೆ ಇಲ್ಲ, ಕೇವಲ ಫಲಾನುಭವಿಗಳ ಮಾಹಿತಿ ಸಂಗ್ರಹ

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಯಾವಾಗ ಎಂದು ಕೇಳಿದಾಗ, “ನಾವು ಪರಿಷ್ಕರಣೆ ಮಾಡುತ್ತಿಲ್ಲ. ಫಲಾನುಭವಿಗಳ ಮೊಬೈಲ್ ಸಂಖ್ಯೆ ಹಾಗೂ ವಿವರಗಳಲ್ಲಿ ವ್ಯತ್ಯಾಸವಿದೆ. ಗೃಹಜ್ಯೋತಿ ಯೋಜನೆಯಲ್ಲಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ಎಂದು ಪಡೆದು, ಅದನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಲಾಗುತ್ತಿದೆ. ಈ ಯೋಜನೆಯಲ್ಲಿ 1.64 ಕೋಟಿ ಫಲಾನುಭವಿಗಳಿದ್ದು, ಯಾರು ಅರ್ಹರಿದ್ದಾರೋ ಅವರು ಉಚಿತ ವಿದ್ಯುತ್ ಪಡೆದರೆ ನಮ್ಮ ಅಭ್ಯಂತರವಿಲ್ಲ. ಯಾರೆಲ್ಲಾ ಫಲಾನುಭವಿಗಳಿದ್ದಾರೆ ಎಂಬ ಮಾಹಿತಿ ನಮ್ಮ ಬಳಿ ಇರಬೇಕಲ್ಲವೇ? ಒಬ್ಬರ ಹೆಸರಲ್ಲೇ ಐದಾರು ಮೀಟರ್ ಗಳಿದ್ದು, ಇವರಲ್ಲಿ ನಮ್ಮ ರಾಜ್ಯದವರು ಇದ್ದಾರೋ, ಬೇರೆ ರಾಜ್ಯದವರು ಇದ್ದಾರೋ ಎಂಬ ಮಾಹಿತಿ ಸರ್ಕಾರಕ್ಕೆ ಇರಬೇಕಲ್ಲವೇ? ಆ ಮಾಹಿತಿ ಪಡೆಯುತ್ತಿದ್ದೇವೆ. ಮೃತರ ಹೆಸರಿನಲ್ಲಿ ಗೃಹಲಕ್ಷ್ಮಿ ಹಣ ಪಡೆಯಲಾಗಿದೆ. ಇದರಿಂದ 120 ಕೋಟಿ ವ್ಯತ್ಯಾಸವಾಗಿದೆ. ಇದಕ್ಕೆ ನಿಖರ ಮಾಹಿತಿ ಇರಬೇಕಲ್ಲವೇ?” ಎಂದು ತಿಳಿಸಿದರು.

“ಬುಧವಾರದಂದು ಬೆಂಗಳೂರಿನ ರಸ್ತೆಗಳಿಗೆ ಡಾಂಬರೀಕರಣ ಮಾಡಲು 2 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವರು ಇದರ ಜವಾಬ್ದಾರಿ ವಹಿಸಲಿದ್ದಾರೆ” ಎಂದರು.

ಮೇಕೆದಾಟು; ನಮ್ಮ ಕೆಲಸ ನಾವು ಮಾಡುತ್ತೇವೆ

ತಮಿಳುನಾಡಿನಲ್ಲಿ ಕಾಂಗ್ರೆಸ್ ಮೈತ್ರಿಯಿದೆ ಈಗ ಮೇಕೆದಾಟು ವಿಚಾರವಾಗಿ ಕರ್ನಾಟಕದ ನಿಲುವು ಏನು ಎಂದು ಕೇಳಿದಾಗ, “ಅವರು ಕಳೆದ ಮೂವತ್ತು, ನಲವತ್ತು ವರ್ಷಗಳಿಂದ ವಿರೋಧಿಸುತ್ತಿದ್ದಾರೆ. ಈಗಾಗಲೇ ಈ ವಿಷಯವಾಗಿ ನ್ಯಾಯಾಲಯ ತನ್ನ ತೀರ್ಮಾನ ಹೇಳಿದೆ.  ಕೇಂದ್ರ ಸರ್ಕಾರಕ್ಕೆ ನಾವು ಈಗಾಗಲೇ ನಮ್ಮ ಡಿಪಿಆರ್ ಸಲ್ಲಿಕೆ ಮಾಡಿದ್ದೇವೆ. ಅವರು ಅದನ್ನು ಪರಿಶೀಲಿಸುತ್ತಾರೆ. ಈ ವಿಚಾರ ಕೇಂದ್ರ ಸರ್ಕಾರದ ಮುಂದಿದೆ. ತಮಿಳುನಾಡಿನವರು ಪಕ್ಷಬೇದ ಲೆಕ್ಕಿಸದೆ ರಾಜಕೀಯ ಮಾಡುತ್ತಾರೆ. ಈಗಾಗಲೇ ಅವರು ಸುಪ್ರೀಂ ಕೋರ್ಟ್‌ಗೆ ಹೋಗಿದ್ದಾರೆ. ಸುಪ್ರೀಂ ಕೋರ್ಟ್‌ ತನ್ನ ತೀರ್ಪನ್ನು ಪರಿಶೀಲನೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ನ್ಯಾಯಾಲಯ ಈಗಾಗಲೇ ನಿರ್ಧಾರ ತೆಗೆದುಕೊಂಡಿದೆ ಎಂದು ನಾನು ಭಾವಿಸುತ್ತೇನೆ. ನಾವು ಅವರ ಅಭಿಪ್ರಾಯವನ್ನು ಗೌರವಿಸುತ್ತೇವೆ ಮತ್ತು ನಾವು ನಮ್ಮ ಕೆಲಸವನ್ನು ಮಾಡುತ್ತೇವೆ. ಜನರು ನಿರ್ಣಯಿಸಲಿ” ಎಂದರು.

More articles

Latest article

Most read