ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾ ರೆಡ್ಡಿ

ಬೆಂಗಳೂರು : ಖಾತೆ ಹಂಚಿಕೆ ವಿಷಯದಲ್ಲಿ ಬೇಸರಗೊಂಡು ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರಿನ ಕೋರಮಂಗಲದ ಕಚೇರಿಯಲ್ಲಿ ಮಹತ್ವದ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ, ಜಲಸಂಪನ್ಮೂಲ ಇಲಾಖೆ ನೀಡಿದ್ದಕ್ಕೆ ಬೇಸರ ಎಂಬ ಒಂದೇ ಕಾರಣಕ್ಕೆ ರಾಜೀನಾಮೆ ನೀಡುತ್ತಿಲ್ಲ. ಈಗಿನ ಮುಖ್ಯಮಂತ್ರಿಗಳು ಹಿಂದೆ ಅವರಾಗಿಯೇ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡುವ ಬಗ್ಗೆ ಭರವಸೆ ನೀಡಿದ್ದರು. ಆದರೆ, ಅದರಂತೆ ನಡೆದುಕೊಂಡಿಲ್ಲ. ಈ ವಿಚಾರ ಜನರಿಗೆ ತಿಳಿಯಬೇಕು ಎಂದು ಹೇಳಿದರು.

ನನಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲಾಗಲಿ, ಮಲ್ಲಿಕಾರ್ಜುನ ಖರ್ಗೆ ಮೇಲಾಗಲಿ ಅಥವಾ ಹೈಕಮಾಂಡ್‌ ಮೇಲಾಗಲಿ ಕೋಪವಿಲ್ಲ. ನಾನು ಯಾವ ಕಾರಣಕ್ಕಾಗಿ ರಾಜೀನಾಮೆ ನೀಡಿದ್ದೇನೆ ಎಂಬ ಸತ್ಯ ಜನರಿಗೆ ಗೊತ್ತಾಗಬೇಕಷ್ಟೇ. ನಾನು ಕಳೆದ 53 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಒಬ್ಬ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಪಕ್ಷ ನನಗೆ ಸಾಕಷ್ಟು ಅವಕಾಶಗಳನ್ನು ಮಾಡಿಕೊಟ್ಟಿದೆ. ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆಯೇ ಹೊರತು, ಕಾಂಗ್ರೆಸ್ ಪಕ್ಷಕ್ಕಲ್ಲ. ನನ್ನ ಜೀವನದಲ್ಲಿ ಎಂದಿಗೂ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿಲ್ಲ, ಮುಂದೆಯೂ ನೀಡುವುದಿಲ್ಲ. ಶಾಸಕರಾಗಿ ಕಾಂಗ್ರೆಸ್‌ ಪಕ್ಷದಲ್ಲೇ ಇರುತ್ತೇನೆ. ಕಾಂಗ್ರೆಸ್‌ ಸೇರಿ 53 ವರ್ಷವಾಗಿದೆ. ಮುಂದಕ್ಕೂ ಕಾಂಗ್ರೆಸ್‌ ಪಕ್ಷದಲ್ಲೇ ಇರುತ್ತೇನೆ ಎಂದು ಸ್ಪಷ್ಟಪಡಿಸಿದರು.

ರಾಮಲಿಂಗಾರೆಡ್ಡಿ ಅವರು ಕೇವಲ ಖಾತೆಗಾಗಿ ರಾಜೀನಾಮೆ ನೀಡುತ್ತಿಲ್ಲ, ಬದಲಿಗೆ ತಮಗೆ ಕೊಟ್ಟ ಮಾತು ತಪ್ಪಿದ್ದಕ್ಕಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ. ನಾನು ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಾಗದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಯೂತ್ ಕಾಂಗ್ರೆಸ್ ನಾಯಕ ಮನೋಹರ್ ಅವರು, “ ಡಿಕೆ ಶಿವಕುಮಾರ್ಮಾ ತನಾಡುತ್ತಾರೆ, ದಯವಿಟ್ಟು ದುಡುಕಬೇಡಿ ಎಂದು ಮನವೊಲಿಸಲು ಯತ್ನಿಸಿದಾಗ ರಾಮಲಿಂಗಾರೆಡ್ಡಿ ತೀವ್ರ ಆಕ್ರೋಶಗೊಂಡರು. ‌ಮನೋಹರ್ ನನಗೆ ಕೋಪ ಬರಿಸಬೇಡಿ, ನನ್ನ ನಿರ್ಧಾರ ಮುಗಿದ ಕಥೆ. ನೀವು ಮೊದಲು ಹೊರಗೆ ಹೋಗಿ, ನಾನು ಮಾತನಾಡಬೇಕು. ನನ್ನ ಮಗಳು ಅಥವಾ ಕುಟುಂಬದವರ ಬಳಿಯೂ ನಾನು ಈ ಬಗ್ಗೆ ಚರ್ಚಿಸಿಲ್ಲ. ನಾನಾಗಿಯೇ ಯಾರ ಬಳಿಗೂ ಹೋಗಿ ರಾಜೀನಾಮೆ ಪತ್ರ ಕೊಡುವುದಿಲ್ಲ, ಇಲ್ಲಿಂದಲೇ ಘೋಷಿಸುತ್ತಿದ್ದೇನೆ. ಯಾರಾದರೂ ಹೋಗಿ ರಾಜೀನಾಮೆ ಕೊಡುತ್ತಾರೆ ನಾನು ಹೋಗಲ್ಲ ಎಂದು ಖಡಕ್‌ ಆಗಿ ಹೇಳಿದರು.

More articles

Latest article

Most read