ಬೆಂಗಳೂರು : ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ನೇತೃತ್ವದ ನೂತನ ಸರ್ಕಾರ ಜಾರಿಗೆ ಬಂದ ಮೂರು ದಿನಗಳಲ್ಲಿ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ವಿದ್ಯುನ್ಮಾನ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿದ್ದ ಡಾ.ಎನ್.ಮಂಜುಳಾ ಅವರನ್ನು ಬೆಂಗಳೂರು ಜಲಮಂಡಳಿ ಅಧ್ಯಕ್ಷೆಯಾಗಿ ವರ್ಗಾವಣೆ ಮಾಡಲಾಗಿದೆ.
ಜಲಮಂಡಳಿ ಅಧ್ಯಕ್ಷರಾಗಿದ್ದ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅವರನ್ನು ಕೆಪಿಟಿಸಿಎಲ್ ಎಂಡಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಜಿ. ಜಗದೀಶ ಅವರನ್ನು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಅದೇ ರೀತಿ ಬೆಂಗಳೂರು ಸಹಕಾರ ಸಂಘಗಳ ರಿಜಿಸ್ಟ್ರಾರ್ ಆಗಿದ್ದ ಪಿ.ಎಸ್. ಕಾಂತರಾಜ್ ಅವರನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

