ಕೊಲ್ಕತ್ತಾದ ಸರ್ಕಾರಿ ಕಛೇರಿ ಬೆಂಕಿ: 2026 ರ ಅಸೆಂಬ್ಲಿ ಎಲೆಕ್ಷನ್’ಗೆ ಬಳಸಿದ್ದ 4000 ಇವಿಎಂ ಮತಯಂತ್ರಗಳು ಸುತ್ತು ಭಸ್ಮ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸರ್ಕಾರಿ ಕಟ್ಟಡವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸುಮಾರು 4,000 ಇವಿಎಂಗಳು ಸುಟ್ಟು ಭಸ್ಮವಾಗಿವೆ ಎಂದು ಸಚಿವ ಕೌಶಿಕ್ ಚೌಧರಿ ಗುರುವಾರ ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾದ ನಂತರ ಪೊಲೀಸರು ತನಿಖೆ ಆರಂಭಿಸಿದ್ದಾರೆ

ದಕ್ಷಿಣ ಕೋಲ್ಕತ್ತಾದ ಅಲಿಪೋರ್ ಪ್ರದೇಶದಲ್ಲಿರುವ ಒಂಬತ್ತು ಅಂತಸ್ತಿನ ಕಟ್ಟಡದಲ್ಲಿ ಬುಧವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಈ ಕಟ್ಟಡದಲ್ಲಿ ಇತರ ಇಲಾಖೆಗಳ ಜೊತೆಗೆ ದಕ್ಷಿಣ 24 ಪರಗಣ ಜಿಲ್ಲಾ ಪರಿಷತ್ ಕಚೇರಿಯೂ ಇತ್ತು ಎನ್ನಲಾಗಿದೆ

“ಸುಮಾರು 4,000 ಇವಿಎಂಗಳು ಬೆಂಕಿಯಲ್ಲಿ ಸುಟ್ಟು ನಾಶವಾಗಿವೆ. 2026 ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 10 ಕ್ಷೇತ್ರಗಳಲ್ಲಿ ಆ ಇವಿಎಂಗಳನ್ನು ಬಳಸಲಾಗಿದೆ” ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ರಾಜ್ಯ ಸಚಿವರು ತಿಳಿಸಿದ್ದಾರೆ.

More articles

Latest article

Most read